ಆದಿಕಾಂಡ 33:5 - ಕನ್ನಡ ಸತ್ಯವೇದವು C.L. Bible (BSI)5 ಅವರಿಬ್ಬರ ಕಣ್ಣಲ್ಲೂ ನೀರು ಹರಿಯಿತು. ಬಳಿಕ ಏಸಾವನು ಕಣ್ಣೆತ್ತಿ ಆ ಮಹಿಳೆಯರನ್ನೂ ಮಕ್ಕಳನ್ನೂ ನೋಡಿ, “ನಿನ್ನ ಜೊತೆಯಲ್ಲಿರುವ ಇವರು ಯಾರು?” ಎಂದು ವಿಚಾರಿಸಿದನು. ಯಕೋಬನು, “ದೇವರು ನಿಮ್ಮ ದಾಸನಾದ ನನಗೆ ಅನುಗ್ರಹಿಸಿದ ಮಕ್ಕಳು ಇವರೇ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ತರುವಾಯ ಏಸಾವನು ಕಣ್ಣೆತ್ತಿ ಆ ಸ್ತ್ರೀಯರನ್ನೂ ಮಕ್ಕಳನ್ನೂ ಕಂಡು, “ನಿನ್ನ ಜೊತೆಯಲ್ಲಿರುವ ಜನರು ಯಾರು?” ಎಂದು ಕೇಳಲು ಯಾಕೋಬನು ಅವನಿಗೆ, “ದೇವರು ನಿನ್ನ ಸೇವಕನಿಗೆ ಕೃಪೆಯಿಂದ ಅನುಗ್ರಹಿಸಿಕೊಟ್ಟ ಮಕ್ಕಳೇ ಇವರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ತರುವಾಯ ಏಸಾವನು ಕಣ್ಣೆತ್ತಿ ಆ ಸ್ತ್ರೀಯರನ್ನೂ ಮಕ್ಕಳನ್ನೂ ಕಂಡು - ನಿನ್ನ ಜೊತೆಯಲ್ಲಿರುವ ಇವರು ಯಾರೆಂದು ಕೇಳಲು ಯಾಕೋಬನು ಅವನಿಗೆ - ದೇವರು ನಿನ್ನ ಸೇವಕನಿಗೆ ಅನುಗ್ರಹಿಸಿಕೊಟ್ಟ ಮಕ್ಕಳೇ ಇವರು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಏಸಾವನು ಸ್ತ್ರೀಯರನ್ನು ಮತ್ತು ಮಕ್ಕಳನ್ನು ಕಣ್ಣೆತ್ತಿ ನೋಡಿ, “ನಿನ್ನೊಡನೆ ಇರುವ ಈ ಜನರು ಯಾರು?” ಎಂದು ಕೇಳಿದನು. ಯಾಕೋಬನು, “ದೇವರು ನನಗೆ ಕೊಟ್ಟ ಮಕ್ಕಳೇ ಇವರು. ದೇವರು ನನಗೆ ಒಳ್ಳೆಯವನಾಗಿದ್ದನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆಗ ಏಸಾವನು ತನ್ನ ದೃಷ್ಟಿ ಹರಿಸಿ, ಆ ಸ್ತ್ರೀಯರನ್ನೂ, ಮಕ್ಕಳನ್ನೂ ನೋಡಿ, “ನಿನ್ನ ಜೊತೆಯಲ್ಲಿರುವ ಇವರು ಯಾರು?” ಎಂದು ಕೇಳಿದನು. ಅದಕ್ಕವನು, “ದೇವರು ನಿನ್ನ ದಾಸನಿಗೆ ಕೃಪೆಯಿಂದ ಕೊಟ್ಟ ಮಕ್ಕಳು,” ಎಂದನು. ಅಧ್ಯಾಯವನ್ನು ನೋಡಿ |