Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 33:8 - ಕನ್ನಡ ಸತ್ಯವೇದವು C.L. Bible (BSI)

8 ಏಸಾವನು, “ನಾನು ದಾರಿಯಲ್ಲಿ ಕಂಡ ಆ ಪರಿವಾರ ಏತಕ್ಕೆ?” ಎಂದು ಕೇಳಿದನು. ಯಕೋಬನು, “ಒಡೆಯನ ದಯೆ ನನಗೆ ದೊರಕಲೆಂದು ನಾನು ತಮಗೆ ಅದನ್ನು ಕಳಿಸಿಕೊಟ್ಟೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಏಸಾವನು, “ನಾನು ದಾರಿಯಲ್ಲಿ ಕಂಡ ಆ ಪಶುಗಳು ಯಾತಕ್ಕೆ?” ಎಂದು ಕೇಳಲು ಯಾಕೋಬನು, “ಸ್ವಾಮಿಯವರ ದಯೆ ನನಗೆ ದೊರಕಬೇಕೆಂದು ನಾನು ತಮಗೆ ಅವುಗಳನ್ನು ಕಳುಹಿಸಿಕೊಟ್ಟೆನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಏಸಾವನು - ನಾನು ದಾರಿಯಲ್ಲಿ ಕಂಡ ಆ ಪಶುಗಳ ಹಿಂಡುಗಳು ಯಾತಕ್ಕೆ ಎಂದು ಕೇಳಲು ಯಾಕೋಬನು - ಸ್ವಾವಿುಯವರ ದಯ ನನಗೆ ದೊರಕಬೇಕೆಂದು ನಾನು ತಮಗೆ ಕಳುಹಿಸಿಕೊಟ್ಟೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಏಸಾವನು, “ನಾನು ಬರುತ್ತಿರುವಾಗ ಕಂಡ ಆ ಜನರೆಲ್ಲಾ ಯಾರು? ಆ ಪಶುಗಳೆಲ್ಲಾ ಯಾತಕ್ಕೆ?” ಎಂದು ಕೇಳಿದನು. ಯಾಕೋಬನು, “ನೀನು ನನ್ನನ್ನು ಸ್ವೀಕರಿಸಿಕೊಳ್ಳಲಿ ಎಂದು ಅವುಗಳನ್ನು ಉಡುಗೊರೆಗಳನ್ನಾಗಿ ಕಳುಹಿಸಿಕೊಟ್ಟೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಏಸಾವನು, “ನಾನು ದಾರಿಯಲ್ಲಿ ಕಂಡ ಪಶುಗಳ ಮಂದೆಗಳೆಲ್ಲಾ ಏತಕ್ಕೆ?” ಎಂದು ಕೇಳಿದನು. ಯಾಕೋಬನು, “ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ದಯೆ ದೊರಕುವುದಕ್ಕೋಸ್ಕರ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 33:8
6 ತಿಳಿವುಗಳ ಹೋಲಿಕೆ  

ನನಗೆ ಎತ್ತು - ಕತ್ತೆ, ಆಡು - ಕುರಿ, ದಾಸ - ದಾಸಿಯರು ಇದ್ದಾರೆ. ನನ್ನೊಡೆಯರಾದ ನೀವು ನನ್ನ ಬಗ್ಗೆ ದಯದಾಕ್ಷಿಣ್ಯವುಳ್ಳವರಾಗಿರಬೇಕೆಂಬ ಕೋರಿಕೆಯಿಂದ ನಮ್ಮನ್ನು ನಿಮ್ಮ ಬಳಿಗೆ ಕಳಿಸಿದ್ದಾರೆ' ಎಂದು ತಿಳಿಸಿರಿ” ಎಂದನು.


ಅರಸನು, ಎಲ್ಲಾ ಸ್ತ್ರೀಯರಿಗಿಂತಲೂ ಹೆಚ್ಚಾಗಿ ಎಸ್ತೇರಳನ್ನು ಮೆಚ್ಚಿಕೊಂಡನು. ಎಲ್ಲಾ ಕನ್ಯೆಯರ ಪೈಕಿ ಅರಸನ ವಿಶೇಷ ದಯೆಗೂ ಪ್ರೀತಿಗೂ ಪಾತ್ರಳಾದಳು. ಈ ಕಾರಣ, ಅರಸನು ಆಕೆಯ ತಲೆಯ ಮೇಲೆ ರಾಜಮುಕುಟವನ್ನಿಟ್ಟು ವಷ್ಟಿರಾಣಿಗೆ ಬದಲಾಗಿ ಆಕೆಯನ್ನು ತನ್ನ ಪಟ್ಟದರಸಿಯನ್ನಾಗಿ ಆರಿಸಿಕೊಂಡನು.


ಹೀಗೆ ತನ್ನ ಮನೆಮಂದಿರದ ಮೇಲೂ ಆಸ್ತಿಪಾಸ್ತಿಯ ಮೇಲೂ ಜೋಸೆಫನನ್ನೇ ಆಡಳಿತಗಾರನನ್ನಾಗಿ ನೇಮಿಸಿದ. ಜೋಸೆಫನ ಪ್ರಯುಕ್ತ ಸರ್ವೇಶ್ವರ ಆ ಈಜಿಪ್ಟಿನವನ ಮನೆತನವನ್ನು ಹರಸಿದರು. ಮನೆಯಲ್ಲೂ ಸರ್ವೇಶ್ವರ ಸ್ವಾಮಿಯ ಆಶೀರ್ವಾದವಿತ್ತು.


ಆಮೇಲೆ ಲೇಯಳು ತನ್ನ ಮಕ್ಕಳೊಡನೆ ಬಂದು ಅಡ್ಡಬಿದ್ದಳು; ಕಡೆಯಲ್ಲಿ ಜೋಸೆಫನೂ ರಾಖೇಲಳೂ ಬಂದು ಎರಗಿದರು.


ಆ ಆಳುಗಳು ಹೋಗಿ ಯಕೋಬನ ಬಳಿಗೆ ಹಿಂದಿರುಗಿ ಬಂದು, “ನಾವು ನಿಮ್ಮ ಅಣ್ಣ ಏಸಾವನ ಬಳಿಗೆ ಹೋಗಿದ್ದೆವು. ಅವರು ನಾನೂರು ಜನರ ಸಮೇತ ನಿಮ್ಮನ್ನು ಎದುರುಗೊಳ್ಳಲು ಬರುತ್ತಿದ್ದಾರೆ,” ಎಂದು ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು