Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 34:13 - ಕನ್ನಡ ಸತ್ಯವೇದವು C.L. Bible (BSI)

13 ಶೆಕೆಮನು ತಮ್ಮ ತಂಗಿ ದೀನಳನ್ನು ಕೆಡಿಸಿದ್ದರಿಂದ ಯಕೋಬನ ಮಕ್ಕಳು ಅವನಿಗೂ ಅವನ ತಂದೆ ಹಮೋರನಿಗೂ ಕಪಟದಿಂದ ಈ ಉತ್ತರಕೊಟ್ಟರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಶೆಕೆಮನು ತಮ್ಮ ತಂಗಿಯಾದ ದೀನಳನ್ನು ಮಾನಭಂಗ ಮಾಡಿದ್ದರಿಂದ ಯಾಕೋಬನ ಮಕ್ಕಳು ಅವನಿಗೂ ಅವನ ತಂದೆಯಾದ ಹಮೋರನಿಗೂ ವಂಚನೆಯ ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಶೆಕೆಮನು ತಮ್ಮ ತಂಗಿಯಾದ ದೀನಳನ್ನು ಕೆಡಿಸಿದ್ದರಿಂದ ಯಾಕೋಬನ ಮಕ್ಕಳು ಅವನಿಗೂ ಅವನ ತಂದೆಯಾದ ಹಮೋರನಿಗೂ ಕಪಟದಿಂದ ಉತ್ತರಕೊಟ್ಟು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯಾಕೋಬನ ಗಂಡುಮಕ್ಕಳು ಶೆಕೆಮನಿಗೂ ಅವನ ತಂದೆಗೂ ಸುಳ್ಳು ಹೇಳಲು ನಿರ್ಧರಿಸಿದರು. ತಮ್ಮ ತಂಗಿಯಾದ ದೀನಳಿಗೆ ಶೆಕೆಮನು ಅಂಥ ಕೆಟ್ಟಕಾರ್ಯವನ್ನು ಮಾಡಿದ್ದರಿಂದ ಅವರು ಇನ್ನೂ ಆವೇಶದಿಂದ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಯಾಕೋಬನ ಮಕ್ಕಳು ಶೆಕೆಮನಿಗೂ, ಅವನ ತಂದೆ ಹಮೋರನಿಗೂ ವಂಚನೆಯ ಉತ್ತರವನ್ನು ಕೊಟ್ಟರು. ಏಕೆಂದರೆ ಅವನು ತಮ್ಮ ತಂಗಿ ದೀನಳನ್ನು ಕೆಡಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 34:13
17 ತಿಳಿವುಗಳ ಹೋಲಿಕೆ  

ಕೆಡುಕಿಗೆ ಪ್ರತಿಯಾಗಿ ಕೆಡುಕು ಮಾಡದೆ ಎಚ್ಚರದಿಂದಿರಿ. ಯಾವಾಗಲೂ ಒಬ್ಬರಿಗೊಬ್ಬರು ಮಾತ್ರವಲ್ಲದೆ ಎಲ್ಲರಿಗೂ ಹಿತವನ್ನೇ ಮಾಡಿರಿ.


ಪ್ರಿಯರೇ, ಮುಯ್ಯಿಗೆ ಮುಯ್ಯಿ ತೀರಿಸಬೇಡಿ. ಅದನ್ನು ದೇವರಿಗೇ ಬಿಟ್ಟುಬಿಡಿ. ಏಕೆಂದರೆ, “ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ಎಲ್ಲರಿಗೂ ತಕ್ಕ ಪ್ರತಿಫಲವನ್ನು ಕೊಡುವವನು ನಾನೇ,” ಎಂಬ ಪ್ರಭುವಿನ ವಾಕ್ಯ ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


“ಅವನ ಶಿಷ್ಯರು ರಾತ್ರಿ ವೇಳೆಯಲ್ಲಿ ಬಂದು, ನಾವು ನಿದ್ರೆಮಾಡುತ್ತಿದ್ದಾಗ ಅವನನ್ನು ಕದ್ದುಕೊಂಡು ಹೋದರೆಂದು ಜನರಿಗೆ ಹೇಳಿರಿ;


ನಾಡಿನಲ್ಲಿ ದೈವಭಕ್ತರೆಲ್ಲರು ನಾಶವಾದರು; ಸಜ್ಜನರಾರೂ ಉಳಿದಿಲ್ಲ. ಇರುವವರು ಬಲೆಯೊಡ್ಡಿ ಒಬ್ಬರನ್ನೊಬ್ಬರು ಬೇಟೆಯಾಡುತ್ತಾರೆ. ರಕ್ತಪಾತಕ್ಕಾಗಿ ಹೊಂಚುಹಾಕುತ್ತಾರೆ.


ಹೌದು, ನಿಮಗೆ ತಪ್ಪುಮಾಡಿ ನಿಮ್ಮನ್ನು ಅಲ್ಲಗಳೆದಿದ್ದೇವೆ. ನಮ್ಮ ದೇವರಾದ ನಿಮ್ಮನ್ನು ಹಿಂಬಾಲಿಸದೆ ಹಿಂದಿರುಗಿದ್ದೇವೆ; ಹಿಂಸಾಚಾರವನ್ನೂ ದಂಗೆ ಏಳುವುದನ್ನೂ ಪ್ರಚೋದಿಸಿದ್ದೇವೆ. ನಮ್ಮ ಅಂತರಾಲೋಚನೆಗಳು ಹುಸಿ; ನಮ್ಮ ಬಾಯಿಮಾತು ಸುಳ್ಳು.


ಮಾತಿನ ದೋಷದಿಂದ ಕೆಡುಕನು ಬೋನಿಗೆ ಬೀಳುವನು; ನೀತಿವಂತನು ಆಪತ್ತಿನಿಂದ ತಪ್ಪಿಸಿಕೊಳ್ಳುವನು.


ಹುಸಿಯ ನುಡಿವರು ನೆರೆಯವರೊಡನೆ ಪ್ರತಿಯೋರ್ವರು I ಕಪಟ ಮನದ ತುಟಿಮಾತಿನ ಸ್ತುತಿಗಾರರವರು II


ದೇವರ ಪಕ್ಷ ವಹಿಸಿ ನೀವು ಅನ್ಯಾಯ ನುಡಿಯುವಿರೋ? ಅವರಿಗೋಸ್ಕರ ಕಪಟ ಮಾತಾಡುವಿರೋ?


ನೀವು ಸುಳ್ಳಿಗೆ ಸುಣ್ಣ ಬಳಿಯುವವರು ನೀವೆಲ್ಲರು ಏತಕ್ಕೂ ಬಾರದ ವೈದ್ಯರು.


ಆಗ ಸಂಸೋನನು, “ಈ ಸಾರಿ ಫಿಲಿಷ್ಟಿಯರಿಗೆ ನಷ್ಟ ಉಂಟುಮಾಡಿದರೆ ತಪ್ಪು ನನ್ನದಲ್ಲ,” ಎಂದುಕೊಂಡು ಹೋಗಿ


ಹೆಣ್ಣಿಗಾಗಿ ತೆರವನ್ನೂ ಕಾಣಿಕೆಯನ್ನೂ ನೀವು ಹೇಳುವ ಮೇರೆಗೆ ಎಷ್ಟಾದರೂ ಕೊಡುತ್ತೇನೆ. ಹೇಗೂ ಆ ಹುಡುಗಿಯನ್ನು ನನಗೆ ಮದುವೆ ಮಾಡಿಕೊಡಿ,” ಎಂದು ಕೇಳಿಕೊಂಡನು.


“ಸುನ್ನತಿ ಇಲ್ಲದವರಿಗೆ ನಮ್ಮ ತಂಗಿಯನ್ನು ಕೊಡುವುದಕ್ಕೆ ಆಗುವುದಿಲ್ಲ. ಹಾಗೆ ಕೊಡುವುದು ನಮಗೆ ಅವಮಾನಕರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು