Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 34:14 - ಕನ್ನಡ ಸತ್ಯವೇದವು C.L. Bible (BSI)

14 “ಸುನ್ನತಿ ಇಲ್ಲದವರಿಗೆ ನಮ್ಮ ತಂಗಿಯನ್ನು ಕೊಡುವುದಕ್ಕೆ ಆಗುವುದಿಲ್ಲ. ಹಾಗೆ ಕೊಡುವುದು ನಮಗೆ ಅವಮಾನಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯಾಕೋಬನ ಮಕ್ಕಳು ಅವರಿಗೆ, “ನಾವು ಈ ಕಾರ್ಯವನ್ನು ಮಾಡಲಾರೆವು. ಸುನ್ನತಿಯಿಲ್ಲದವನಿಗೆ ನಮ್ಮ ತಂಗಿಯನ್ನು ಕೊಡುವುದಕ್ಕಾಗುವುದಿಲ್ಲ, ಹಾಗೆ ಕೊಡುವುದು ನಮಗೆ ಅವಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಸುನ್ನತಿಯಿಲ್ಲದವನಿಗೆ ನಮ್ಮ ತಂಗಿಯನ್ನು ಕೊಡುವದಕ್ಕಾಗುವದಿಲ್ಲ; ಹಾಗೆ ಕೊಡುವದು ನಮಗೆ ಅಪಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದ್ದರಿಂದ ಆಕೆಯ ಅಣ್ಣಂದಿರು ಅವನಿಗೆ, “ನೀನು ನಮ್ಮ ತಂಗಿಯನ್ನು ಮದುವೆಯಾಗಲು ನಾವು ಅವಕಾಶ ಕೊಡುವಂತಿಲ್ಲ; ಯಾಕೆಂದರೆ ನಿನಗಿನ್ನೂ ಸುನ್ನತಿಯಾಗಿಲ್ಲ. ನಮ್ಮ ತಂಗಿಯು ನಿನ್ನನ್ನು ಮದುವೆಯಾಗುವುದು ತಪ್ಪಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯಾಕೋಬನ ಮಕ್ಕಳು ಅವರಿಗೆ, “ನಾವು ಈ ಕಾರ್ಯವನ್ನು ಮಾಡಲಾರೆವು. ಸುನ್ನತಿ ಇಲ್ಲದ ಮನುಷ್ಯನಿಗೆ ನಮ್ಮ ತಂಗಿಯನ್ನು ಕೊಡಲಾರೆವು. ಅದು ನಮಗೆ ಅವಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 34:14
16 ತಿಳಿವುಗಳ ಹೋಲಿಕೆ  

ತಾನು ಸುನ್ನತಿಮಾಡಿಸಿಕೊಳ್ಳುವ ಮೊದಲೇ ಅಬ್ರಹಾಮನು ಇಟ್ಟ ವಿಶ್ವಾಸದಿಂದಾಗಿ ದೇವರು ಆತನನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡರು. ಅನಂತರವೇ ಆತನು ಸುನ್ನತಿಯನ್ನು ಗುರುತಾಗಿಯೂ ಮುದ್ರೆಯನ್ನಾಗಿಯೂ ಪಡೆದನು. ಹೀಗೆ, ಸುನ್ನತಿ ಮಾಡಿಸಿಕೊಳ್ಳದಿದ್ದರೂ ವಿಶ್ವಾಸಿಸುವ ಎಲ್ಲರಿಗೆ ದೇವರೊಡನೆ ಸತ್ಸಂಬಂಧ ದೊರಕುವಂತೆ ಅಬ್ರಹಾಮನು ಮೂಲಪಿತನಾದನು.


ಜ್ಯೋತಿಷಿಗಳು ಹೊರಟುಹೋದ ಮೇಲೆ ದೇವದೂತನು ಜೋಸೆಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ಏಳು, ಹೆರೋದನು ಮಗುವನ್ನು ಕೊಂದುಹಾಕಲು ಹವಣಿಸುತ್ತಿದ್ದಾನೆ. ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಈಜಿಪ್ಟ್ ದೇಶಕ್ಕೆ ಓಡಿಹೋಗು. ನಾನು ಪುನಃ ಹೇಳುವ ತನಕ ಅಲ್ಲೇ ಇರು,” ಎಂದನು.


ಅನಂತರ ಅವರನ್ನು ಬೆತ್ಲೆಹೇಮಿಗೆ ಕಳುಹಿಸಿಕೊಡುತ್ತಾ, “ನೀವು ಹೋಗಿ ಆ ಮಗುವನ್ನು ಚೆನ್ನಾಗಿ ಹುಡುಕಿರಿ; ಕಂಡಕೂಡಲೇ ನನಗೆ ಬಂದು ತಿಳಿಸಿರಿ. ನಾನೂ ಹೋಗಿ ಆ ಮಗುವನ್ನು ಆರಾಧಿಸಬೇಕು,” ಎಂದು ಹೇಳಿದನು.


ಅದರಲ್ಲಿ, “ಎಲ್ಲರೂ ಉಪವಾಸ ಮಾಡಬೇಕೆಂದು ಪ್ರಕಟಿಸಿರಿ: ನಾಬೋತನನ್ನು ನೆರೆದ ಸಭೆಯ ಮುಂದೆ ನಿಲ್ಲಿಸಿರಿ;


ನಾಲ್ಕು ವರ್ಷಗಳಾದನಂತರ ಅಬ್ಷಾಲೋಮನು ಅರಸನಿಗೆ, “ನಾನು ಸರ್ವೇಶ್ವರನಿಗೆ ಹೊತ್ತ ಹರಕೆಗಳನ್ನು ಸಲ್ಲಿಸುವುದಕ್ಕಾಗಿ ಹೆಬ್ರೋನಿಗೆ ಹೋಗಬೇಕಾಗಿದೆ, ಅಪ್ಪಣೆಯಾಗಲಿ.


ಸಾರಬೇಡಿ ಈ ಸುದ್ದಿಯನು ‘ಗತ್’ ಊರಿನಲಿ ಘೋಷಿಸಬೇಡಿ ಅಷ್ಕೆಲೋನಿನ ಬೀದಿಗಳಲಿ. ಏಕೆನೆ, ಉಲ್ಲಾಸಿಸಿಯಾರು ಆ ಫಿಲಿಷ್ಟಿಯ ಮಹಿಳೆಯರು; ಜಯಘೋಷ ಮಾಡಿಯಾರು ಸುನ್ನತಿಯಿಲ್ಲದವರಾ ಸ್ತ್ರೀಯರು!


ನಿಮ್ಮ ಸೇವಕನಾದ ನನ್ನಿಂದ ಆ ಸಿಂಹಕ್ಕೂ ಕರಡಿಗೂ ಆದ ಗತಿಯೇ ಈ ಸುನ್ನತಿಯಿಲ್ಲದ ಫಿಲಿಷ್ಟಿಯನಿಗೂ ಆಗಬೇಕು; ಏಕೆಂದರೆ ಜೀವಸ್ವರೂಪರಾದ ದೇವರ ಸೈನ್ಯವನ್ನು ನಿಂದಿಸುತ್ತಿದ್ದಾನೆ.


ಆಗ ದಾವೀದನು ತನ್ನ ಬಳಿಯಲ್ಲೆ ನಿಂತಿದ್ದವರನ್ನು ನೋಡಿ, “ಜೀವಸ್ವರೂಪರಾದ ದೇವರ ಸೈನ್ಯವನ್ನು ಹೀಗೆ ಹಿಯ್ಯಾಳಿಸುವ, ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಯೇಲರಿಗೆ ಬಂದಿರುವ ನಿಂದೆ ಅವಮಾನವನ್ನು ನೀಗಿಸುವವನಿಗೆ ಏನು ಸಿಕ್ಕುವುದೆಂದು ಹೇಳಿದಿರಿ?” ಎಂದು ಕೇಳಿದನು.


ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ, “ಸುನ್ನತಿಯಿಲ್ಲದ ಈ ಕಾವಲುದಂಡಿನವರೆಗೆ ನೇರವಾಗಿ ಹೋಗೋಣ ಬಾ; ಬಹುಶಃ ಸರ್ವೇಶ್ವರ ತಾವೇ ನಮ್ಮ ಪರವಾಗಿ ಕಾರ್ಯಸಾಧಿಸುವರು. ಬಹುಜನರಿಂದಾಗಲಿ, ಸ್ವಲ್ಪಜನರಿಂದಾಗಲಿ, ರಕ್ಷಿಸುವುದು ಸರ್ವೇಶ್ವರಸ್ವಾಮಿಗೆ ಅಸಾಧ್ಯವಲ್ಲ,” ಎಂದು ಹೇಳಿದನು.


ಸುನ್ನತಿ ಮಾಡಿಸಿಕೊಳ್ಳದ ಗಂಡಸು ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿದವನಾದ ಕಾರಣ, ಅವನು ಕುಲದಿಂದ ಬಹಿಷ್ಕೃತನಾಗಬೇಕು.


ನೀವು ನಿಮ್ಮ ಜನನಾಂಗದ ಮುಂದೊಗಲನ್ನು ಸುನ್ನತಿಮಾಡಿಸಿಕೊಳ್ಳಬೇಕು. ಅದೇ ನಿಮಗೂ ನನಗೂ ಆದ ಒಡಂಬಡಿಕೆಯ ಗುರುತು.


ಶೆಕೆಮನು ತಮ್ಮ ತಂಗಿ ದೀನಳನ್ನು ಕೆಡಿಸಿದ್ದರಿಂದ ಯಕೋಬನ ಮಕ್ಕಳು ಅವನಿಗೂ ಅವನ ತಂದೆ ಹಮೋರನಿಗೂ ಕಪಟದಿಂದ ಈ ಉತ್ತರಕೊಟ್ಟರು;


ನಿಮ್ಮಲ್ಲಿ ಗಂಡಸರೆಲ್ಲರು ಸುನ್ನತಿಮಾಡಿಸಿಕೊಂಡು ನಮ್ಮಂತೆ ಆಗಬೇಕು.


ಆಗ ಅವರು ಅವನಿಗೆ, “ಸುನ್ನತಿಯಿಲ್ಲದ ಫಿಲಿಷ್ಟಿಯರ ಹೆಣ್ಣನ್ನು ವರಿಸಬೇಕೆಂದಿರುವೆಯಾ? ನಿನ್ನ ಬಂಧುಗಳಲ್ಲಿ ಅದೂ ನಮ್ಮ ಎಲ್ಲಾ ಜನರಲ್ಲಿ ನಿನಗೆ ಹೆಣ್ಣು ಸಿಕ್ಕುವುದಿಲ್ಲವೇ?” ಎಂದು ಪ್ರತಿಭಟಿಸಿದರು. ಅವನು, “ನನಗಾಗಿ ಆಕೆಯನ್ನೇ ತನ್ನಿ. ಆಕೆಯನ್ನೇ ಮೆಚ್ಚಿಕೊಂಡಿದ್ದೇನೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು