ಆದಿಕಾಂಡ 34:25 - ಕನ್ನಡ ಸತ್ಯವೇದವು C.L. Bible (BSI)25 ಮೂರನೆಯ ದಿನ ಆ ಗಂಡಸರೆಲ್ಲರು ಗಾಯದಿಂದ ಇನ್ನು ಬಹಳ ಬಾಧೆಪಡುತ್ತಿದ್ದರು. ಆಗ, ಯಕೋಬನ ಮಕ್ಕಳಲ್ಲಿ ದೀನಳ ಸಹೋದರರಾದ ಸಿಮೆಯೋನ್ ಮತ್ತು ಲೇವಿ ಎಂಬ ಇಬ್ಬರು ಕೈಯಲ್ಲಿ ಕತ್ತಿಹಿಡಿದು ನಿಶ್ಚಿಂತೆ ಇಂದಿದ್ದ ಆ ಊರಿನವರ ಮೇಲೆ ಬಿದ್ದರು. ದಯೆದಾಕ್ಷಿಣ್ಯವಿಲ್ಲದೆ ಗಂಡಸರೆಲ್ಲರನ್ನು ಕೊಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಮೂರನೆಯ ದಿನದಲ್ಲಿ ಅವರು ಗಾಯದಿಂದ ಬಹು ಬಾಧೆಪಡುತ್ತಿರುವಾಗ ಯಾಕೋಬನ ಮಕ್ಕಳೂ, ದೀನಳ ಅಣ್ಣಂದಿರಾದ ಸಿಮೆಯೋನ್, ಲೇವಿ ಎಂಬ ಇಬ್ಬರು ಕೈಯಲ್ಲಿ ಕತ್ತಿಯನ್ನು ತೆಗೆದುಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು ಗಂಡಸರನ್ನೆಲ್ಲಾ ಕೊಂದು ಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಮೂರನೆಯ ದಿನದಲ್ಲಿ ಅವರು ಗಾಯದಿಂದ ಬಹು ಬಾಧೆಪಡುತ್ತಿರುವಾಗ ಯಾಕೋಬನ ಮಕ್ಕಳಲ್ಲಿ ದೀನಳ ಅಣ್ಣಂದಿರಾದ ಸಿಮೆಯೋನ್, ಲೇವಿ ಎಂಬ ಇಬ್ಬರು ಕೈಯಲ್ಲಿ ಕತ್ತಿಹಿಡುಕೊಂಡು ನಿರ್ಭಯವಾಗಿದ್ದ ಆ ಊರಿನವರ ಮೇಲೆ ಬಿದ್ದು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಮೂರು ದಿನಗದರೂ ಸುನ್ನತಿ ಮಾಡಿಸಿಕೊಂಡಿದ್ದ ಗಂಡಸರು ಇನ್ನೂ ಗಾಯದ ನೋವಿನಲ್ಲಿದ್ದರು. ಈ ಸಮಯದಲ್ಲಿ ಗಂಡಸರು ಬಲಹೀನರಾಗಿರುತ್ತಾರೆ ಎಂಬುದು ಯಾಕೋಬನ ಇಬ್ಬರು ಗಂಡುಮಕ್ಕಳಾದ ಸಿಮೆಯೋನ್ ಮತ್ತು ಲೇವಿಗೆ ತಿಳಿದಿತ್ತು. ಆದ್ದರಿಂದ ಅವರು ಪಟ್ಟಣಕ್ಕೆ ಹೋಗಿ ಅಲ್ಲಿದ್ದ ಎಲ್ಲಾ ಗಂಡಸರನ್ನು ಕೊಂದುಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಮೂರನೆಯ ದಿನದಲ್ಲಿ ಅವರಿಗೆ ನೋವುಂಟಾದಾಗ, ಯಾಕೋಬನ ಮಕ್ಕಳಲ್ಲಿ ಇಬ್ಬರು ಅಂದರೆ, ದೀನಳ ಸಹೋದರರಾದ ಸಿಮೆಯೋನನೂ, ಲೇವಿಯೂ ತಮ್ಮ ತಮ್ಮ ಖಡ್ಗಗಳನ್ನು ತೆಗೆದುಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು, ಗಂಡಸರನ್ನೆಲ್ಲಾ ಕೊಂದುಹಾಕಿದರು. ಅಧ್ಯಾಯವನ್ನು ನೋಡಿ |