Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 34:5 - ಕನ್ನಡ ಸತ್ಯವೇದವು C.L. Bible (BSI)

5 ತನ್ನ ಮಗಳಾದ ದೀನಳಿಗೆ ಶೆಕೆಮನಿಂದ ಮಾನಭಂಗವಾಯಿತೆಂಬ ಸಮಾಚಾರ ಯಕೋಬನಿಗೆ ಮುಟ್ಟಿದಾಗ ಅವನ ಗಂಡು ಮಕ್ಕಳು ಅಡವಿಯಲ್ಲಿ ದನಕಾಯುತ್ತಿದ್ದರು. ಅವರು ಬರುವ ತನಕ ಯಕೋಬನು ಸುಮ್ಮನೆ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯಾಕೋಬನು ತನ್ನ ಮಗಳಾದ ದೀನಳಿಗೆ ಶೆಕೆಮನಿಂದ ಮಾನಭಂಗವಾದ ವರ್ತಮಾನವನ್ನು ಕೇಳಿದಾಗ ಅವನ ಗಂಡುಮಕ್ಕಳು ಅಡವಿಯಲ್ಲಿ ದನಗಳನ್ನು ಕಾಯುತ್ತಿದ್ದರು. ಅವರು ಬರುವ ತನಕ ಅವನು ಸುಮ್ಮನೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯಾಕೋಬನು ತನ್ನ ಮಗಳಾದ ದೀನಳಿಗೆ ಶೆಕೆಮನಿಂದ ಮಾನಭಂಗವಾದ ವರ್ತಮಾನವನ್ನು ಕೇಳಿದಾಗ ಅವನ ಗಂಡುಮಕ್ಕಳು ಅಡವಿಯಲ್ಲಿ ದನಗಳನ್ನು ಕಾಯುತ್ತಿದ್ದರು. ಅವರು ಬರುವ ತನಕ ಅವನು ಸುಮ್ಮನೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯಾಕೋಬನು ತನ್ನ ಮಗಳಿಗೆ ಶೆಕೆಮನಿಂದ ಮಾನಭಂಗವಾದ ಸುದ್ದಿಯನ್ನು ಕೇಳಿದನು. ಆದರೆ ಅವನ ಗಂಡುಮಕ್ಕಳೆಲ್ಲ ಕುರಿಗಳೊಂದಿಗೆ ಹೊಲದಲ್ಲಿದ್ದುದರಿಂದ ಅವರು ಮನೆಗೆ ಬರುವತನಕ ಏನೂ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯಾಕೋಬನು ತನ್ನ ಮಗಳಾದ ದೀನಳನ್ನು ಶೆಕೆಮನು ಕೆಡಿಸಿದ್ದಾನೆಂದು ಕೇಳಿದಾಗ, ಅವನ ಮಕ್ಕಳು ಅವನ ಪಶುಗಳ ಸಂಗಡ ಹೊಲದಲ್ಲಿದ್ದರು. ಅವರು ಬರುವವರೆಗೆ ಯಾಕೋಬನು ಸುಮ್ಮನಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 34:5
13 ತಿಳಿವುಗಳ ಹೋಲಿಕೆ  

ಅಬ್ಷಾಲೋಮನು ಅಮ್ನೋನನ ಸಂಗಡ ಒಳ್ಳೇಮಾತನ್ನಾಗಲಿ ಕೆಟ್ಟಮಾತನ್ನಾಗಲಿ ಆಡಲಿಲ್ಲ. ತನ್ನ ತಂಗಿಯಾದ ತಾಮಾರಳನ್ನು ಕೆಡಿಸಿದ್ದಕ್ಕಾಗಿ ಅವನು ಅಮ್ನೋನನನ್ನು ದ್ವೇಷಿಸಿದನು.


ಅವನು, ‘ನೋಡಿ, ನಾನು ಇಷ್ಟು ವರ್ಷಗಳಿಂದ ನಿಮಗೆ ಗುಲಾಮನಂತೆ ಸೇವೆಮಾಡುತ್ತಿದ್ದೇನೆ. ನಿಮ್ಮ ಮಾತನ್ನು ಎಂದೂ ಮೀರಿಲ್ಲ; ಆದರೂ ನಾನು ನನ್ನ ಸ್ನೇಹಿತರೊಡನೆ ಹಬ್ಬಮಾಡಲು ಒಂದು ಆಡುಮರಿಯನ್ನು ಕೂಡ ನೀವು ಕೊಟ್ಟಿಲ್ಲ.


“ಇತ್ತ ಹೊಲಕ್ಕೆ ಹೋಗಿದ್ದ ಹಿರಿಯ ಮಗ ಹಿಂದಿರುಗಿ ಮನೆಯನ್ನು ಸಮೀಪಿಸುವಾಗ ಗಾನ, ನರ್ತನಗಳ ಶಬ್ದವು ಅವನ ಕಿವಿಗೆ ಬಿತ್ತು.


ದಾವೀದನು ಸೌಲನನ್ನು ಬಿಟ್ಟು ತನ್ನ ತಂದೆಯ ಕುರಿಗಳನ್ನು ಮೇಯಿಸುವುದಕ್ಕೆ ಬೆತ್ಲೆಹೇಮಿಗೆ ಹೋದನು.


ಅನಂತರ ಸಮುವೇಲನು ಜೆಸ್ಸೆಯನನ್ನು, “ನಿನ್ನ ಮಕ್ಕಳೆಲ್ಲಾ ಇಷ್ಟೇಮಂದಿಯೋ?” ಎಂದು ಕೇಳಿದನು. ಅವನು, “ಇವರೆಲ್ಲರಿಗಿಂತಲೂ ಚಿಕ್ಕವನು ಒಬ್ಬನಿದ್ದಾನೆ; ಅವನು ಕುರಿಮೇಯಿಸುವುದಕ್ಕೆ ಹೋಗಿದ್ದಾನೆ,” ಎಂದು ಉತ್ತರಕೊಟ್ಟನು. ಆಗ ಸಮುವೇಲನು, “ಅವನನ್ನು ಇಲ್ಲಿಗೆ ಬರಮಾಡು; ಅವನು ಬರುವವರೆಗೂ ನಾವು ಊಟಕ್ಕೆ ಕುಳಿತುಕೊಳ್ಳಬಾರದು,” ಎಂದು ಹೇಳಿದನು. ಜೆಸ್ಸೆಯನು ಅವನನ್ನು ಕರೆದುತರಿಸಿದನು.


ಕೆಲವು ಮಂದಿ ಪುಂಡುಪೋಕರು, “ಇವನೇನೋ ನಮ್ಮನ್ನು ರಕ್ಷಿಸುವವನು!” ಎಂದು ತಾತ್ಸಾರಮಾಡಿ ಕಾಣಿಕೆಗಳನ್ನು ತರಲಿಲ್ಲ. ಆದರೂ ಸೌಲನು ಸುಮ್ಮನಿದ್ದನು.


ಆಗ ಮೋಶೆ ಆರೋನನಿಗೆ: “’ನನ್ನ ಬಳಿಯಿರುವವರ ಮುಖಾಂತರವೆ ನನ್ನ ಪರಿಶುದ್ಧತೆಯನ್ನು ತೋರ್ಪಡಿಸುವೆ ಜನರೆಲ್ಲರ ಸಮ್ಮುಖದಲೆ ನನ್ನ ಮಹಿಮೆಯನು ಶೃತಪಡಿಸುವೆ, ಎಂಬ ಸರ್ವೇಶ್ವರನ ನುಡಿಗೆ ಇದೊಂದು ದೃಷ್ಟಾಂತವೇ ಸರಿ,” ಎಂದನು. ಅದಕ್ಕೆ ಆರೋನನು ಮೌನವಾಗಿದ್ದನು.


ಆದರೆ ಅದೇ ದಿನ ಲಾಬಾನನು ಹೋತಗಳಲ್ಲಿ ರೇಖೆ, ಮಚ್ಚೆ ಇದ್ದವುಗಳನ್ನೂ, ಮೇಕೆಗಳಲ್ಲಿ ಚುಕ್ಕೆ, ಮಚ್ಚೆ ಇದ್ದವುಗಳನ್ನೂ ಅಂದರೆ, ಸ್ವಲ್ಪ ಬಿಳುಪಾದ ಬಣ್ಣ ತೋರಿದ ಎಲ್ಲವುಗಳನ್ನೂ, ಕುರಿಗಳಲ್ಲಿ ಕಪ್ಪಾಗಿದ್ದವುಗಳನ್ನೂ ವಿಂಗಡಿಸಿ ತನ್ನ ಮಕ್ಕಳ ವಶಕ್ಕೆ ಒಪ್ಪಿಸಿಬಿಟ್ಟನು.


ಮೌನದಿಂದಿರುವೆ, ಬಾಯ್ದೆರೆಯದಿರುವೆ I ನನಗೊದಗಿರುವುದು ನಿನ್ನಿಂದಲ್ಲವೆ? II


ತನ್ನ ತಂದೆ ಹಮೋರನನ್ನು, “ಆ ಹುಡುಗಿಯನ್ನು ನನಗೆ ಮದುವೆಮಾಡಿಸಬೇಕು,” ಎಂದು ಕೇಳಿಕೊಂಡನು.


ಅಷ್ಟರಲ್ಲಿ, ಶೆಕೆಮನ ತಂದೆ ಹಮೋರನು ಯಕೋಬನ ಸಂಗಡ ಮಾತನಾಡಲು ಊರಿಂದ ಹೊರಟುಬಂದನು.


'ಚಿಕ್ಕಂದಿನಿಂದ ಇಂದಿನವರೆಗೂ ನಿಮ್ಮ ಸೇವಕರಾದ ನಾವು, ನಮ್ಮ ಪೂರ್ವಜರ ಪದ್ಧತಿಯಂತೆ ಮಂದೆ ಮೇಯಿಸುವವರು,’ ಎಂದು ಹೇಳಿರಿ. ಆಗ ಗೋಷೆನ್ ಪ್ರಾಂತ್ಯವನ್ನು ನಿಮ್ಮ ನಿವಾಸಕ್ಕೆ ನೇಮಿಸುವನು - ಏಕೆಂದರೆ ಕುರಿ ಕಾಯುವವರೆಂದರೆ ಈಜಿಪ್ಟಿಯರಿಗೆ ಹಿಡಿಸದು,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು