Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 34:7 - ಕನ್ನಡ ಸತ್ಯವೇದವು C.L. Bible (BSI)

7 ಇತ್ತ ಯಕೋಬನ ಗಂಡು ಮಕ್ಕಳು ತಂಗಿಯ ಸಂಗತಿಯನ್ನು ಕೇಳಿ ಅಡವಿಯಿಂದ ಬಂದರು. ಶೆಕೆಮನು ತಮ್ಮ ತಂಗಿಯನ್ನು ಬಲಾತ್ಕಾರದಿಂದ ಕೂಡಿ, ಮಾಡಬಾರದನ್ನು ಮಾಡಿ, ಇಸ್ರಯೇಲರಿಗೆ ಘನ ಅವಮಾನವನ್ನು ಮಾಡಿದ್ದರಿಂದ ಅವರು ತಳಮಳಗೊಂಡು ಕಡುಕೋಪದಿಂದ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯಾಕೋಬನ ಗಂಡುಮಕ್ಕಳು ತಂಗಿಯ ಸಂಗತಿಯನ್ನು ಕೇಳಿ ಅಡವಿಯಿಂದ ಬಂದಾಗ ವ್ಯಸನಪಟ್ಟು ಬಹಳ ಕೋಪಗೊಂಡರು. ಶೆಕೆಮನು ಯಾಕೋಬನ ಮಗಳ ಮಾನಭಂಗ ಮಾಡಿ ಇಸ್ರಾಯೇಲರೊಳಗೆ ಬಹಳ ಅವಮಾನಕರವಾದ ಕೆಲಸವನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯಾಕೋಬನ ಗಂಡುಮಕ್ಕಳು ತಂಗಿಯ ಸಂಗತಿಯನ್ನು ಕೇಳಿ ಅಡವಿಯಿಂದ ಬಂದಾಗ ವ್ಯಥೆಪಟ್ಟು ಬಹಳ ಕೋಪಗೊಂಡರು. ಶೆಕೆಮನು ಯಾಕೋಬನ ಮಗಳನ್ನು ಕೂಡಿ ಇಸ್ರಾಯೇಲ್ಯರೊಳಗೆ ಬಹಳ ಅವಮಾನಕರವಾದ ಕೆಲಸವನ್ನು ನಡಿಸಿದನು; ಅದು ಆಗಬಾರದ ಕಾರ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಹೊಲದಲ್ಲಿದ್ದ ಯಾಕೋಬನ ಗಂಡುಮಕ್ಕಳು ನಡೆದ ಸಂಗತಿಯನ್ನು ಕೇಳಿ ತುಂಬ ಕೋಪಗೊಂಡರು. ಶೆಕೆಮನು ಯಾಕೋಬನ ಮಗಳನ್ನು ಮಾನಭಂಗ ಮಾಡಿ ಇಸ್ರೇಲರಿಗೆ ಅವಮಾನ ಮಾಡಿದ್ದರಿಂದ ಅವರು ಆವೇಶಗೊಂಡರು. ಶೆಕೆಮನು ತುಂಬ ಕೆಟ್ಟದ್ದನ್ನು ಮಾಡಿದ್ದರಿಂದ ಅಣ್ಣಂದಿರು ಹೊಲದಿಂದ ಹಿಂತಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯಾಕೋಬನ ಮಕ್ಕಳು ಆ ವಿಷಯವನ್ನು ಕೇಳಿದ ಕೂಡಲೇ ಹೊಲದಿಂದ ಬಂದರು. ಶೆಕೆಮನು ಯಾಕೋಬನ ಮಗಳ ಸಂಗಡ ಮಲಗಿ, ಇಸ್ರಾಯೇಲಿನಲ್ಲಿ ಅವಮಾನಕರವಾದದ್ದನ್ನು ಮಾಡಿದ್ದರಿಂದ, ಅವರು ವ್ಯಸನಪಟ್ಟು, ಬಹಳ ಕೋಪಗೊಂಡರು. ಅದು ಹಾಗೆ ಆಗಬಾರದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 34:7
27 ತಿಳಿವುಗಳ ಹೋಲಿಕೆ  

ಅವರು ಇಸ್ರಯೇಲರಲ್ಲಿ ನಡೆಸಿದ ಇಂಥ ಕೆಟ್ಟ ಹಾಗು ಹುಚ್ಚುಗೆಲಸ ಎಲ್ಲರಿಗೂ ಗೊತ್ತಾಗಲೆಂದು ನಾನು ಆಕೆಯ ಶವವನ್ನು ತುಂಡುಮಾಡಿ ಇಸ್ರಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿದೆನು.


ಯಾವನು ಮೀಸಲಾದ ವಸ್ತುವನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುತ್ತಾನೋ ಅವನು ತನ್ನ ಆಸ್ತಿಪಾಸ್ತಿ ಸಹಿತವಾಗಿ ಸುಡಲ್ಪಡಬೇಕು. ಏಕೆಂದರೆ ಅವನು ಸರ್ವೇಶ್ವರನ ಕಟ್ಟಳೆಯನ್ನು ಮೀರಿ ಇಸ್ರಯೇಲರಲ್ಲಿ ಭ್ರಷ್ಟಾಚಾರವನ್ನು ನಡೆಸಿದ್ದಾನೆ,’ ಎಂದು ಹೇಳು.”


ಅವಳು ತಂದೆಯ ಮನೆಯಲ್ಲೇ ಸೂಳೆತನಮಾಡಿ ಇಸ್ರಯೇಲರಲ್ಲಿ ದುರಾಚಾರವನ್ನು ನಡೆಸಿದ್ದರಿಂದ ಅವಳನ್ನು ತಂದೆಯ ಮನೆಯ ಬಾಗಿಲಿಗೆ ಬರಮಾಡಬೇಕು; ಊರಿನವರೆಲ್ಲರು ಕಲ್ಲೆಸೆದು ಅವಳನ್ನು ಕೊಲ್ಲಬೇಕು. ಹೀಗೆ ಇಂಥ ಕೇಡನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಬೇಕು.


ವಿವಾಹಬಂಧನವನ್ನು ಎಲ್ಲರೂ ಗೌರವಿಸಲಿ; ದಂಪತಿಗಳ ಸಂಬಂಧವು ನಿಷ್ಕಳಂಕವಾಗಿರಲಿ. ಕಾಮುಕರೂ ವ್ಯಭಿಚಾರಿಗಳೂ ದೇವರ ನ್ಯಾಯತೀರ್ಪಿಗೆ ಗುರಿಯಾಗುತ್ತಾರೆ.


ಅನಂತರ ಅವನು ಅಬ್ರಹಾಮನನ್ನು ಕರೆಸಿ, “ನೀನು ನನಗೆ ಮಾಡಿದ್ದೇನು? ಯಾವ ತಪ್ಪಿಗಾಗಿ ನೀನು ನನ್ನನ್ನೂ ನನ್ನ ರಾಜ್ಯವನ್ನೂ ಈ ಮಹಾ ಪಾತಕಕ್ಕೆ ಒಳಪಡಿಸಿದೆ? ಮಾಡಬಾರದ ಕಾರ್ಯವನ್ನು ನೀನು ಮಾಡಿದೆ,” ಎಂದು ಹೇಳಿದನು.


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ಸ್ತುತಿ ಶಾಪಗಳೆರಡೂ ಒಂದೇ ಬಾಯಿಂದ ಹೊರಡುತ್ತವೆ. ಪ್ರಿಯ ಸಹೋದರರೇ, ಇದು ತರವಲ್ಲ.


ನೀವು ದೇವಜನರಾಗಿರುವುದರಿಂದ ನಿಮ್ಮಲ್ಲಿ ಲೈಂಗಿಕ ಪಾಪವಾಗಲಿ, ಅಶುದ್ಧ ಕೃತ್ಯಗಳಾಗಲಿ ಮತ್ತು ದುರಾಶೆಯಾಗಲಿ ಇರಬಾರದು. ಇಂಥ ಸುದ್ದಿಗೂ ನೀವು ಅವಕಾಶ ಕೊಡಬಾರದು.


ಅವರಲ್ಲಿ ಕೆಲವರು ಹಾದರಮಾಡಿದ್ದರಿಂದ ಒಂದೇ ದಿನದಲ್ಲಿ ಇಪ್ಪತ್ತಮೂರು ಸಾವಿರಮಂದಿ ಸತ್ತರು. ನಾವು ಹಾದರದಿಂದ ದೂರವಿರಬೇಕು.


ವ್ಯಭಿಚಾರದಿಂದ ದೂರ ಸರಿಯಿರಿ. ಮಾನವನು ಮಾಡುವ ಇತರ ಪಾಪಗಳು ದೇಹಕ್ಕೆ ಬಾಹಿರವಾದವುಗಳು. ವ್ಯಭಿಚಾರ ಮಾಡುವಾತನು ತನ್ನ ದೇಹಕ್ಕೇ ದ್ರೋಹ ಬಗೆಯುತ್ತಾನೆ.


ಜನಸಾಮಾನ್ಯರ ನಡುವೆ, ಯೌವನಸ್ಥರ ಮಧ್ಯೆ ಮತಿಗೆಟ್ಟ ಯುವಕನೊಬ್ಬ ನಡೆವುದನ್ನು ನಾನು ಕಂಡೆ.


ನಿನ್ನ ಆಜ್ಞೆಗಳು ಪ್ರಭು, ಸುಸ್ಥಿರ I ನಿನ್ನ ಆಲಯಕೆ ಪವಿತ್ರತೆ ಅರ್ಹ I ಯುಗಯುಗಾಂತರಕೂ ಅದು ಅರ್ಹ II


ಅರಸನಾದ ದಾವೀದನು ಈ ಸಂಗತಿಯನ್ನು ಕೇಳಿ ಬಹಳವಾಗಿ ಕೋಪಗೊಂಡನು.


“ಇಸ್ರಯೇಲರಲ್ಲಿ ಯಾವ ಸ್ತ್ರೀಯೂ ಗುಡಿವೇಶ್ಯೆಯಾಗಬಾರದು; ಅಂತೆಯೇ ಯಾವ ಪುರುಷನೂ ಅಂಥ ವೇಶ್ಯೆತನಕ್ಕೆ ಇಳಿಯಬಾರದು.


ನಿಮ್ಮ ನಾಡಿನವರಲ್ಲಿ ಬೇರೆ ಯಾರಾದರು ಸರ್ವೇಶ್ವರನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ


“ಇಸ್ರಯೇಲರ ಸಮಾಜವೆಲ್ಲ ತಿಳಿಯದೆ ದೋಷಿಗಳಾದರೆ, ಅಂದರೆ ಸರ್ವೇಶ್ವರನು ನಿಷೇಧಿಸಿದ ಕಾರ್ಯಗಳಲ್ಲಿ ಅವರು ಯಾವುದನ್ನಾದರು ಮಾಡಿ ದೋಷಕ್ಕೆ ಗುರಿಯಾದರೆ,


“ನೀನು ಇಸ್ರಯೇಲರ ಸಂಗಡ ಮಾತಾಡಿ ಹೇಳಬೇಕಾದುದು ಏನೆಂದರೆ ಯಾರೇ ಆಗಲಿ ಸರ್ವೇಶ್ವರನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರು ತಿಳಿಯದೆ ಮಾಡಿ ದೋಷಿಯಾದರೆ ಅದು ಆ ದೋಷಪರಿಹಾರಕ್ಕಾಗಿ ಈ ಕ್ರಮಗಳನ್ನು ಅನುಸರಿಸಬೇಕು:


ಹೀಗೆ ಯಕೋಬನು ತನ್ನ ಗಂಡು ಹೆಣ್ಣು ಮಕ್ಕಳನ್ನೂ ಮೊಮ್ಮಕ್ಕಳನ್ನೂ ತನ್ನ ಕುಟುಂಬದವರೆಲ್ಲರನ್ನೂ ತನ್ನ ಸಂಗಡವೇ ಕರೆದುಕೊಂಡು ಈಜಿಪ್ಟಿಗೆ ಬಂದನು.


ಇದಲ್ಲದೆ ಅವರು ಮನೆಮನೆಗಳನ್ನು ಸುತ್ತುತ್ತಾ ಅಲೆದಾಡುತ್ತಾ ಹರಟೆಮಲ್ಲರೂ ಸೋಮಾರಿಗಳೂ ಆಗಬಹುದು. ಇತರರ ವಿಷಯಗಳಲ್ಲಿ ತಲೆಹಾಕಬಹುದು.


ನಿಮ್ಮಲ್ಲಿರುವ ಪ್ರಾಪಂಚಿಕ ಆಶೆ ಆಕಾಂಕ್ಷೆಗಳನ್ನು ತ್ಯಜಿಸಿರಿ. ಹಾದರ, ಅನೈತಿಕತೆ, ಕಾಮಾಭಿಲಾಷೆ, ದುರಾಲೋಚನೆ, ವಿಗ್ರಹಾರಾಧನೆಗೆ ಸಮವಾಗಿರುವ ಲೋಭ - ಇವುಗಳನ್ನು ದಮನಮಾಡಿರಿ.


ಅಷ್ಟರಲ್ಲಿ, ಶೆಕೆಮನ ತಂದೆ ಹಮೋರನು ಯಕೋಬನ ಸಂಗಡ ಮಾತನಾಡಲು ಊರಿಂದ ಹೊರಟುಬಂದನು.


ಹಮೋರನು ಅವರಿಗೆ, “ನನ್ನ ಮಗ ಶೆಕೆಮನು ನಿಮ್ಮ ಹುಡುಗಿಯನ್ನು ಬಹಳ ಆಸೆಯಿಂದ ಮೋಹಿಸಿದ್ದಾನೆ; ದಯವಿಟ್ಟು ಆಕೆಯನ್ನು ಅವನಿಗೆ ಮದುವೆ ಮಾಡಿಕೊಡಬೇಕು;


“ಆದರೆ ಆ ಮಹಿಳೆ ವಿವಾಹಕ್ಕೆ ಮುಂಚೆ ಪುರುಷಸಂಪರ್ಕ ಮಾಡಿದವಳೇ ಎಂದು ತಿಳಿದುಬಂದರೆ


ಏಕೆಂದರೆ ಇವರು ಇಸ್ರಯೇಲಿನಲ್ಲಿ ದುರಾಚಾರವನ್ನು ನಡೆಸಿದರು. ನೆರೆಯವರ ಹೆಂಡಿರಲ್ಲಿ ವ್ಯಭಿಚಾರಮಾಡಿದರು. ನಾನು ಆಜ್ಞಾಪಿಸಿದ ಮಾತುಗಳನ್ನು ನನ್ನ ಹೆಸರೆತ್ತಿಯೇ ಸುಳ್ಳಾಗಿ ಸಾರಿದರು. ಇದೆಲ್ಲ ನನಗೆ ಗೊತ್ತಿದೆ, ಇದಕ್ಕೆಲ್ಲಾ ನಾನೇ ಸಾಕ್ಷಿ’ ಎನ್ನುತ್ತಾರೆ ಸರ್ವೇಶ್ವರ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು