Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 34:8 - ಕನ್ನಡ ಸತ್ಯವೇದವು C.L. Bible (BSI)

8 ಹಮೋರನು ಅವರಿಗೆ, “ನನ್ನ ಮಗ ಶೆಕೆಮನು ನಿಮ್ಮ ಹುಡುಗಿಯನ್ನು ಬಹಳ ಆಸೆಯಿಂದ ಮೋಹಿಸಿದ್ದಾನೆ; ದಯವಿಟ್ಟು ಆಕೆಯನ್ನು ಅವನಿಗೆ ಮದುವೆ ಮಾಡಿಕೊಡಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹಮೋರನು ಅವರಿಗೆ, “ನನ್ನ ಮಗನಾದ ಶೆಕೆಮನು ನಿಮ್ಮ ಹುಡುಗಿಯನ್ನು ಬಹಳ ಆಶೆಯಿಂದ ಮೋಹಿಸಿದ್ದಾನೆ, ಆಕೆಯನ್ನು ಅವನಿಗೆ ಮದುವೆ ಮಾಡಿಕೊಡಬೇಕು ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹಮೋರನು ಅವರಿಗೆ - ನನ್ನ ಮಗನಾದ ಶೆಕೆಮನು ನಿಮ್ಮ ಹುಡುಗಿಯನ್ನು ಬಹಳ ಅಪೇಕ್ಷೆಯಿಂದ ಮೋಹಿಸಿದ್ದಾನೆ; ಆಕೆಯನ್ನು ಅವನಿಗೆ ಮದುವೆಮಾಡಿಕೊಡಬೇಕೆಂದು ಕೇಳಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ಹಮೋರನು ದೀನಳ ಅಣ್ಣಂದಿರೊಡನೆ ಮಾತಾಡಿದನು. ಅವನು ಅವರಿಗೆ, “ನನ್ನ ಮಗನಾದ ಶೆಕೆಮನು ದೀನಳನ್ನು ತುಂಬ ಇಷ್ಟಪಡುತ್ತಾನೆ. ಅವನು ಆಕೆಯನ್ನು ಮದುವೆ ಮಾಡಿಕೊಳ್ಳಲು ದಯವಿಟ್ಟು ಅವಕಾಶಕೊಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಹಮೋರನು ಅವರಿಗೆ, “ನನ್ನ ಮಗ ಶೆಕೆಮನ ಮನಸ್ಸು ನಿಮ್ಮ ಮಗಳನ್ನು ಆಶಿಸುತ್ತದೆ. ಆಕೆಯನ್ನು ಅವನಿಗೆ ಹೆಂಡತಿಯಾಗಿ ಕೊಡಿರಿ, ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 34:8
9 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಈ ಜನಾಂಗಗಳ ವಿಷಯದಲ್ಲಿ ಇಸ್ರಯೇಲರಿಗೆ, “ನಿಮಗೂ ಅವರಿಗೂ ಕೊಟ್ಟುಕೊಳ್ಳುವ ಸಂಬಂಧ ಇರಕೂಡದು; ಹೀಗೆ ವಿವಾಹ ಸಂಬಂಧವಾಗುವುದಾದರೆ ಅವರು ನಿಮ್ಮ ಮನಸ್ಸನ್ನು ತಮ್ಮ ದೇವತೆಗಳ ಕಡೆಗೆ ತಿರುಗಿಸಬಹುದು,” ಎಂದು ಎಚ್ಚರಿಸಿದ್ದರು. ಆದರೂ ಸೊಲೊಮೋನನು ಅವರ ಮಹಿಳೆಯರಲ್ಲಿ ಅನುರಕ್ತನಾಗಿದ್ದನು.


ನಿನ್ನ ವಿಧಿಗಳನೆ ಹಂಬಲಿಸುತಿರುವೆ ಅನುದಿನ I ಇದು ಕಾರಣ ಕರಗಿಹೋಗುತಿದೆ ಎನ್ನ ಚೇತನ II


ಹಂಬಲಿಸಿ ಸೊರಗಿಹೋಗಿದೆ ಎನ್ನ ಮನ I ಕಾಣಬೇಕೆಂದು ಪ್ರಭುವಿನ ಪ್ರಾಂಗಣ II


ದೇವಾ, ನೀಯೆನ್ನ ದೇವ, ನಿನಗಾಗಿ ನಾ ಕಾದಿರುವೆ I ನಿರ್ಜಲ ಮರುಭೂಮಿಯಲಿ ನೀರಿಗಾಗಿ ಹಾತೊರೆವಂತೆ I ನಿನಗೋಸ್ಕರ ಎನ್ನ ತನು ಸೊರಗಿದೆ, ಮನ ಬಾಯಾರಿದೆ II


ಅವನ ಮನಸ್ಸು ಯಕೋಬನ ಮಗಳಾದ ಆ ದೀನಳ ಮೇಲೆಯೇ ತಲ್ಲೀನಗೊಂಡಿತ್ತು. ಆಕೆಯನ್ನು ಮೋಹಿಸಿ ಅವಳ ಮನವೊಲಿಸುವಂಥ ಮಾತುಗಳನ್ನಾಡಿದನು.


ಇತ್ತ ಯಕೋಬನ ಗಂಡು ಮಕ್ಕಳು ತಂಗಿಯ ಸಂಗತಿಯನ್ನು ಕೇಳಿ ಅಡವಿಯಿಂದ ಬಂದರು. ಶೆಕೆಮನು ತಮ್ಮ ತಂಗಿಯನ್ನು ಬಲಾತ್ಕಾರದಿಂದ ಕೂಡಿ, ಮಾಡಬಾರದನ್ನು ಮಾಡಿ, ಇಸ್ರಯೇಲರಿಗೆ ಘನ ಅವಮಾನವನ್ನು ಮಾಡಿದ್ದರಿಂದ ಅವರು ತಳಮಳಗೊಂಡು ಕಡುಕೋಪದಿಂದ ಇದ್ದರು.


ಅಲ್ಲದೆ ನೀವು ನಮ್ಮಲ್ಲೇ ವಾಸವಾಗಿರಬಹುದು; ನಿಮ್ಮ ಹೆಣ್ಣುಮಕ್ಕಳನ್ನು ನಮಗೆ ಕೊಡಬೇಕು; ನಮ್ಮ ಹೆಣ್ಣು ಮಕ್ಕಳನ್ನು ನೀವು ತೆಗೆದುಕೊಳ್ಳಬೇಕು; ನಾವು ಬೀಗರಾಗಿ ಬಾಳಬೇಕು, ನಾಡೆಲ್ಲಾ ನಿಮ್ಮ ಮುಂದೆ ಇದೆ.


ನಾನಿರುವೆ ಸಂಜೆಯನು ಬಯಸುವ ದಾಸನಂತೆ ಕೂಲಿಯನು ನಿರೀಕ್ಷಿಸುವ ಕೂಲಿಯಾಳಿನಂತೆ.


ಹಿಂದಿರುಗಬೇಕೆಂದು ಹಂಬಲಿಸಿದರೂ ತಾಯ್ನಾಡಿಗೆ ಹಿಂದಿರುಗುವುದೇ ಇಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು