ಆದಿಕಾಂಡ 34:9 - ಕನ್ನಡ ಸತ್ಯವೇದವು C.L. Bible (BSI)9 ಅಲ್ಲದೆ ನೀವು ನಮ್ಮಲ್ಲೇ ವಾಸವಾಗಿರಬಹುದು; ನಿಮ್ಮ ಹೆಣ್ಣುಮಕ್ಕಳನ್ನು ನಮಗೆ ಕೊಡಬೇಕು; ನಮ್ಮ ಹೆಣ್ಣು ಮಕ್ಕಳನ್ನು ನೀವು ತೆಗೆದುಕೊಳ್ಳಬೇಕು; ನಾವು ಬೀಗರಾಗಿ ಬಾಳಬೇಕು, ನಾಡೆಲ್ಲಾ ನಿಮ್ಮ ಮುಂದೆ ಇದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇದಲ್ಲದೆ ನೀವು ನಮ್ಮಲ್ಲೇ ವಾಸವಾಗಿದ್ದು ನಿಮ್ಮ ಹೆಣ್ಣು ಮಕ್ಕಳನ್ನು ನಮಗೆ ಕೊಡುತ್ತಾ ನಮ್ಮ ಹೆಣ್ಣುಮಕ್ಕಳನ್ನು ನೀವು ತೆಗೆದುಕೊಳ್ಳುತ್ತಾ ನಮ್ಮೊಂದಿಗೆ ಬೀಗರಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಇದಲ್ಲದೆ ನೀವು ನಮ್ಮಲ್ಲೇ ವಾಸವಾಗಿದ್ದು ನಿಮ್ಮ ಹೆಣ್ಣು ಮಕ್ಕಳನ್ನು ನಮಗೆ ಕೊಡುತ್ತಾ ನಮ್ಮ ಹೆಣ್ಣುಮಕ್ಕಳನ್ನು ನೀವು ತೆಗೆದುಕೊಳ್ಳುತ್ತಾ ಬೀಗರಾಗಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಈ ಮದುವೆಯು ನಮಗಾಗಿರುವ ಒಂದು ವಿಶೇಷ ಒಪ್ಪಂದವನ್ನು ತೋರಿಸುತ್ತದೆ. ಅದೇನೆಂದರೆ, ನಮ್ಮ ಗಂಡಸರು ನಿಮ್ಮ ಸ್ತ್ರೀಯರನ್ನು ಮದುವೆಯಾಗಬಹುದು ಮತ್ತು ನಿಮ್ಮ ಗಂಡಸರು ನಮ್ಮ ಸ್ತ್ರೀಯರನ್ನು ಮದುವೆಯಾಗಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನೀವು ನಮ್ಮೊಂದಿಗೆ ಮದುವೆ ಸಂಬಂಧ ಮಾಡಿಕೊಳ್ಳಿರಿ. ನಿಮ್ಮ ಪುತ್ರಿಯರನ್ನು ನಮಗೆ ಕೊಡಿರಿ, ನಮ್ಮ ಪುತ್ರಿಯರನ್ನು ನೀವು ಮದುವೆಯಾಗಿರಿ. ಅಧ್ಯಾಯವನ್ನು ನೋಡಿ |