Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 35:10 - ಕನ್ನಡ ಸತ್ಯವೇದವು C.L. Bible (BSI)

10 ಅವನಿಗೆ ದೇವರು, “ನಿನ್ನ ಹೆಸರು; ಯಕೋಬ ಅಲ್ಲವೇ? ಇನ್ನು ಮೇಲೆ ನೀನು ಯಕೋಬನೆನಿಸಿಕೊಳ್ಳದೆ 'ಇಸ್ರಯೇಲ್' ಎನಿಸಿಕೊಳ್ಳಬೇಕು” ಎಂದು ಹೇಳಿದರು. ಹೀಗೆ ಅವನ ಹೆಸರು ಇಸ್ರಯೇಲ್ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದೇವರು ಅವನಿಗೆ, “ಈಗ ನಿನಗೆ ಯಾಕೋಬನೆಂದು ಹೆಸರಿರುವುದು. ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಿಸಿಕೊಳ್ಳದೆ ‘ಇಸ್ರಾಯೇಲ್’ ಎಂದು ಕರೆಯಿಸಿಕೊಳ್ಳುವೆ” ಎಂದು ಹೇಳಿ ಅವನಿಗೆ ಇಸ್ರಾಯೇಲ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ದೇವರು ಅವನಿಗೆ - ನಿನ್ನ ಹೆಸರು ಯಾಕೋಬನಲ್ಲವೇ; ಇನ್ನು ಮೇಲೆ ನೀನು ಯಾಕೋಬನೆನಿಸಿಕೊಳ್ಳದೆ ಇಸ್ರಾಯೇಲನೆನಿಸಿಕೊಳ್ಳಬೇಕು ಎಂದು ಹೇಳಿ ಅವನಿಗೆ ಇಸ್ರಾಯೇಲ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದೇವರು ಯಾಕೋಬನಿಗೆ, “ನಿನ್ನ ಹೆಸರು ಯಾಕೋಬ. ಆದರೆ ನಾನು ಆ ಹೆಸರನ್ನು ಬದಲಾಯಿಸುವೆನು. ಇನ್ನು ಮುಂದೆ ನೀನು ಯಾಕೋಬನೆಂದು ಕರೆಸಿಕೊಳ್ಳುವುದಿಲ್ಲ. ನಿನ್ನ ಹೊಸ ಹೆಸರು ‘ಇಸ್ರೇಲ್’” ಎಂದು ಹೇಳಿ ಅವನಿಗೆ “ಇಸ್ರೇಲ್” ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ದೇವರು ಅವನಿಗೆ, “ಈಗ ನಿನಗೆ ಯಾಕೋಬನೆಂದು ಹೆಸರಿರುವುದು. ಆದರೆ ಇನ್ನು ಮೇಲೆ ನೀನು ಯಾಕೋಬನೆಂದು ಕರೆಸಿಕೊಳ್ಳದೆ, ‘ಇಸ್ರಾಯೇಲ್,’ ಎಂದು ಕರೆಸಿಕೊಳ್ಳುವೆ,” ಎಂದು ಹೇಳಿ, ಅವನಿಗೆ ಇಸ್ರಾಯೇಲ್ ಎಂದು ಹೆಸರಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 35:10
7 ತಿಳಿವುಗಳ ಹೋಲಿಕೆ  

ಇನ್ನು ಮುಂದೆ ನಿನಗೆ ‘ಅಬ್ರಾಮ’ ಎಂಬ ಹೆಸರಿರುವುದಿಲ್ಲ. ನಿನ್ನನ್ನು ನಾನು ಅನೇಕಾನೇಕ ರಾಷ್ಟ್ರಗಳಿಗೆ ಮೂಲಪುರುಷನನ್ನಾಗಿ ನೇಮಿಸುವುದರಿಂದ ನಿನಗೆ ‘ಅಬ್ರಹಾಮ’ ಎಂಬ ಹೆಸರಿರುವುದು.


ದೇವರುಅಬ್ರಹಾಮನಿಗೆ ಇನ್ನೂ ಹೇಳಿದ್ದು ಏನೆಂದರೆ: “ನೀನು ಇನ್ನು ಮುಂದೆ ನಿನ್ನ ಹೆಂಡತಿಯನ್ನು ಸಾರಯಳು ಎಂದು ಕರೆಯದೆ ಸಾರಳು ಎಂದು ಕರೆಯಬೇಕು.


ಸರ್ವೇಶ್ವರನಿಂದ ‘ಇಸ್ರಯೇಲ್’ ಎಂಬ ಹೆಸರು ಹೊಂದಿದ ಯಕೋಬನ ಮಕ್ಕಳಿಂದ ಉತ್ಪತ್ತಿಯಾದ ಕುಲಗಳ ಸಂಖ್ಯೆಗೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು,


ಆ ಕಾಲದ ಪದ್ಧತಿಯನ್ನು ಇಂದಿಗೂ ಮುಂದುವರಿಸುತ್ತಿದ್ದಾರೆ. ಸರ್ವೇಶ್ವರನಲ್ಲಿ ಭಯಭಕ್ತಿ ಇಸ್ರಯೇಲರಿಗಿಲ್ಲ; ಅವರಿಂದಲೇ ಇಸ್ರಯೇಲನೆಂಬ ಹೆಸರು ಹೊಂದಿದ ಯಕೋಬನ ಸಂತಾನದವರಿಗೆ ಕೊಡಲಾದ ಆಜ್ಞಾನಿಯಮವಿಧಿ ಧರ್ಮಶಾಸ್ತ್ರಗಳನ್ನು ಅವರು ಅನುಸರಿಸಲಿಲ್ಲ.


ಹೌದು, ಯಕೋಬನು ದೇವದೂತನ ಸಂಗಡ ಹೋರಾಡಿ ಗೆದ್ದನು. ಅಳುತ್ತಾ ಆತನ ಅನುಗ್ರಹಕ್ಕಾಗಿ ಯಾಚಿಸಿದನು. ಆತನು ಬೇತೇಲಿನಲ್ಲಿ ದೇವರನ್ನು ಕಂಡನು. ದೇವರು ಅಲ್ಲಿ ಆತನೊಂದಿಗೆ ಮಾತನಾಡಿದರು.


ಯಕೋಬನು, “ನಿಮ್ಮ ಹೆಸರನ್ನು ದಯವಿಟ್ಟು ನನಗೆ ತಿಳಿಸಬೇಕು,” ಎಂದಾಗ ಆ ಪುರುಷ, “ನನ್ನ ಹೆಸರನ್ನು ವಿಚಾರಿಸುವುದೇಕೆ?” ಎಂದು ಹೇಳಿ ಅಲ್ಲೇ ಅವನನ್ನು ಆಶೀರ್ವದಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು