Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 35:18 - ಕನ್ನಡ ಸತ್ಯವೇದವು C.L. Bible (BSI)

18 ಆದರೆ ರಾಖೇಲಳು ಸತ್ತುಹೋದಳು. ಪ್ರಾಣಹೋಗುತ್ತಿದ್ದಾಗ ಆಕೆ ಆ ಮಗುವಿಗೆ ‘ಬೆನೋನಿ’ ಎಂದು ಹೆಸರಿಟ್ಟಳು. ಅದರ ತಂದೆಯಾದರೋ ಅದಕ್ಕೆ ಬೆನ್ಯಾಮೀನ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆದರೆ ರಾಹೇಲಳು ಸತ್ತುಹೋದಳು. ಪ್ರಾಣಬಿಡುವಾಗ ಆಕೆಯು ಆ ಮಗುವಿಗೆ, “ಬೆನೋನಿ” ಎಂದು ಹೆಸರಿಟ್ಟಳು. ಆದರೆ ಅದರ ತಂದೆಯು ಅದಕ್ಕೆ, “ಬೆನ್ಯಾಮೀನ” ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆದರೆ ರಾಹೇಲಳು ಸತ್ತುಹೋದಳು; ಪ್ರಾಣಹೋಗುತ್ತಿರುವಾಗ ಆಕೆಯು ಆ ಮಗುವಿಗೆ ಬೆನೋನಿ ಎಂದು ಹೆಸರಿಟ್ಟಳು; ಆದರೆ ಅದರ ತಂದೆಯು ಅದಕ್ಕೆ ಬೆನ್ಯಾಮೀನ್ ಎಂದು ಹೆಸರಿಟ್ಟನು. ಹಾಗೆ ರಾಹೇಲಳು ಮೃತಪಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ರಾಹೇಲಳು ಮಗನನ್ನು ಹೆರುವಾಗ ಸತ್ತುಹೋದಳು; ಸಾಯುವುದಕ್ಕೆ ಮೊದಲು, ರಾಹೇಲಳು ಆ ಮಗುವಿಗೆ ಬೆನೋನಿ ಎಂದು ಹೆಸರಿಟ್ಟಳು. ಆದರೆ ಯಾಕೋಬನು ಅವನಿಗೆ ಬೆನ್ಯಾಮೀನ್ ಎಂದು ಹೆಸರಿಟ್ಟನು. ಹಾಗೆ ರಾಹೇಳಲು ಮೃತಪಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆದರೆ ರಾಹೇಲಳು ಸತ್ತುಹೋದಳು. ಅವಳು ಪ್ರಾಣಬಿಡುವಾಗ, ಮಗನಿಗೆ ಬೆನೋನಿ ಎಂದು ಹೆಸರಿಟ್ಟಳು, ಆದರೆ ಅವನ ತಂದೆ ಅವನಿಗೆ ಬೆನ್ಯಾಮೀನ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 35:18
18 ತಿಳಿವುಗಳ ಹೋಲಿಕೆ  

ಅವರು ತನ್ನ ಮೇಲೆ ಕಲ್ಲುಬೀರುತ್ತಿದ್ದಾಗ ಸ್ತೇಫನನು, “ಪ್ರಭು ಯೇಸುವೇ, ನನ್ನಾತ್ಮವನ್ನು ಸ್ವೀಕರಿಸಿ,” ಎಂದು ಪ್ರಾರ್ಥಿಸಿದನು.


ಯೇಸುಸ್ವಾಮಿ, “ಪಿತನೇ, ನನ್ನಾತ್ಮವನ್ನು ನಿಮ್ಮ ಕೈಗೊಪ್ಪಿಸುತ್ತೇನೆ,” ಎಂದು ಗಟ್ಟಿಯಾಗಿ ಕೂಗಿ ಪ್ರಾಣಬಿಟ್ಟರು.


ಯಾಬೇಚ್ ಎಂಬವನು ಒಬ್ಬನಿದ್ದನು. ಅವನು ತನ್ನ ಕುಟುಂಬದಲ್ಲಿ ಬಹಳ ಗೌರವಾನ್ವಿತ ವ್ಯಕ್ತಿ. ಅವನು ಹುಟ್ಟುವಾಗ ಪ್ರಸವವೇದನೆ ಅಧಿಕವಾಗಿದ್ದರಿಂದ ಅವನ ತಾಯಿ, ಯಾಬೇಚ ಎಂಬ ಹೆಸರನ್ನು ಅವನಿಗೆ ಕೊಟ್ಟಳು.


ಆಗ ದೇವರು, ‘ಎಲವೋ ಮೂರ್ಖ, ಇದೇ ರಾತ್ರಿ ನೀನು ಸಾಯಬೇಕಾಗಿದೆ, ನಿನಗಾಗಿ ಸಿದ್ಧಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?’ ಎಂದರು.


‘ಅಮ್ಮಾ ತಿನ್ನಲಿಕ್ಕಿಲ್ಲವೆ? ಕುಡಿಯಲಿಕ್ಕಿಲ್ಲವೆ? ಎನ್ನುತ ಮಕ್ಕಳು ಮೂರ್ಛೆಗೊಂಡಿವೆ. ಗಾಯಗೊಂಡವರಂತೆ ನಗರದ ಚೌಕಗಳೊಳು ಪ್ರಾಣಬಿಡುತ್ತಿವೆಯಲ್ಲಾ ತಾಯಿಯ ಎದೆಯ ಮೇಲೆ ಆ ಹಸುಳೆಗಳು.


ಕೈ ಹಿಡಿದು ಕಾಪಾಡು ನಿನ್ನ ಬಲಗೈ ಉದ್ಧರಿಸಿದ ಪುರುಷನನು I ನಿನಗೆಂದೇ ನೀ ಸಾಕಿ ಬೆಳೆಸಿದಾ ವರಪುತ್ರನನು II


ಏಕೆನೆ ದೂಡುವುದಿಲ್ಲ ನೀನು ಎನ್ನನು ಅಧೋಲೋಕಕೆ I ಬಿಟ್ಟುಕೊಡುವುದಿಲ್ಲ ನಿನ್ನ ಆ ಭಕ್ತನನು ಪಾತಾಳಕೆ II


ಅವುಗಳ ರಕ್ತದಲ್ಲಿ ಸ್ವಲ್ಪ ತೆಗೆದು ತಾವು ಆ ಭೋಜನ ಮಾಡುವ ಮನೆಯ ಬಾಗಿಲಿನ ಎರಡು ನಿಲುವು ಕಂಬಗಳಿಗೂ ಮೇಲಿನ ಪಟ್ಟಿಗೂ ಹಚ್ಚಬೇಕು.


ಅವನು ನಿಮ್ಮ ಮೇಲೆ ಕನಿಕರವಿಟ್ಟು ನಿಮ್ಮ ಅಣ್ಣನನ್ನೂ ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿಬಿಡುವಂತೆ ಸರ್ವವಲ್ಲಭರಾದ ದೇವರು ಅನುಗ್ರಹಿಸಲಿ; ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಬೇಕಾದರೆ ಹಾಗೆಯೇ ಆಗಲಿ!” ಎಂದನು.


ಯಕೋಬನು ಅವರಿಗೆ, “ನನ್ನ ಮಗ ನಿಮ್ಮ ಸಂಗಡ ಹೋಗಬಾರದು. ಇವನ ಒಡಹುಟ್ಟಿದ ಅವನು ಸತ್ತುಹೋದ, ಇವನೊಬ್ಬನೇ ಉಳಿದು ಇದ್ದಾನೆ, ದಾರಿಯಲ್ಲಿ ಇವನಿಗೇನಾದರೂ ಆಪತ್ತು ಸಂಭವಿಸಬಹುದು. ಆಗ, ನರೆಕೂದಲಿನ ಈ ಮುದುಕ ದುಃಖದಿಂದಲೆ ಸಮಾಧಿ ಸೇರಲು ನೀವೇ ಕಾರಣರಾಗುತ್ತೀರಿ,” ಎಂದು ಹೇಳಿದ.


ಆದರೆ ಜೋಸೆಫನ ಒಡಹುಟ್ಟಿದ ತಮ್ಮನಾದ ಬೆನ್ಯಾಮೀನನನ್ನು ಯಕೋಬನು ಅವರ ಸಂಗಡ ಕಳಿಸಲಿಲ್ಲ. ಏಕೆಂದರೆ, ಅವನಿಗೆ ಏನಾದರೂ ಆಪತ್ತು ಒದಗೀತೆಂಬ ಹೆದರಿಕೆ ಅವನದು.


ರಾಖೇಲಳು ತಾನು ಯಕೋಬನಿಗೆ ಮಕ್ಕಳನ್ನು ಹೆರಲಿಲ್ಲವೆಂದುಕೊಂಡು ತನ್ನ ಅಕ್ಕನ ಮೇಲೆ ಹೊಟ್ಟೆಕಿಚ್ಚು ಪಟ್ಟಳು. ಅಲ್ಲದೆ ಯಕೋಬನಿಗೆ, “ನನಗೆ ಮಕ್ಕಳನ್ನು ಕೊಡು; ಇಲ್ಲದಿದ್ದರೆ ಸಾಯುತ್ತೇನೆ,” ಎಂದು ಹೇಳಿದಳು.


ಆಕೆ ಪ್ರಸವ ವೇದನೆಯಿಂದ ಬಹಳ ಕಷ್ಟಪಡುತ್ತಿದ್ದಾಗ ಸೂಲಗಿತ್ತಿಯು ಆಕೆಗೆ, “ಅಂಜಬೇಡ, ನಿನಗೆ ಇನ್ನೊಬ್ಬ ಮಗ ಹುಟ್ಟಿದ್ದಾನೆ,” ಎಂದು ಹೇಳಿದಳು.


ಅನಂತರ ರಾಖೇಲಳು ಸತ್ತುಹೋದಳು, ಆಕೆಯನ್ನು ಬೆತ್ಲೆಹೇಮೆಂಬ ಎಫ್ರಾತಿಗೆ ಹೋಗುವ ದಾರಿಪಕ್ಕದಲ್ಲಿ ಸಮಾಧಿ ಮಾಡಿದರು.


ಜೋಸೆಫ್, ಬೆನ್ಯಾಮೀನ್ - ಇವರಿಬ್ಬರು ರಾಖೇಲಳಲ್ಲಿ ಹುಟ್ಟಿದವರು.


ಕಿತ್ತು ತಿನ್ನುವ ತೋಳ ಬೆನ್ಯಾಮೀನನು ಬೆಳಿಗ್ಗೆ ತಿನ್ನುವನು ಹಿಡಿದುಕೊಂಡದುದನು ಸಂಜೆ ಹಂಚಿಕೊಳ್ಳುವನು ಕೊಳ್ಳೆಹೊಡೆದುದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು