Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 35:23 - ಕನ್ನಡ ಸತ್ಯವೇದವು C.L. Bible (BSI)

23 ಯಕೋಬನ ಹನ್ನೆರಡು ಗಂಡು ಮಕ್ಕಳ ಹೆಸರು ಇವು: ಯಕೋಬನ ಚೊಚ್ಚಲಮಗ ರೂಬೇನ್, ಸಿಮೆಯೋನ್, ಲೇವಿ, ಯೆಹೂದಾ, ಇಸ್ಸಾಕಾರ್, ಜೆಬುಲೂನ್ - ಇವರು ಲೇಯಳಲ್ಲಿ ಹುಟ್ಟಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯಾಕೋಬನಿಗೆ ಲೇಯಳಲ್ಲಿ ಹುಟ್ಟಿದವರು ಯಾರೆಂದರೆ: ಯಾಕೋಬನ ಚೊಚ್ಚಲ ಮಗನಾದ ರೂಬೇನ್ ಮತ್ತು ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬುಲೂನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವರು ಯಾರಾರಂದರೆ - ಯಾಕೋಬನ ಚೊಚ್ಚಲಮಗನಾದ ರೂಬೇನ್; ಆಮೇಲೆ ಸಿಮೆಯೋನ್, ಲೇವಿ, ಯೆಹೂದಾ, ಇಸ್ಸಾಕಾರ್, ಜೆಬುಲೂನ್; ಇವರು ಲೇಯಳಲ್ಲಿ ಹುಟ್ಟಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಲೇಯಳ ಗಂಡುಮಕ್ಕಳು: ಯಾಕೋಬನ ಚೊಚ್ಚಲ ಮಗನಾದ ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್ ಮತ್ತು ಜೆಬುಲೂನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವರಲ್ಲಿ ಲೇಯಳ ಪುತ್ರರು: ಯಾಕೋಬನ ಚೊಚ್ಚಲ ಮಗ ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್ ಮತ್ತು ಜೆಬುಲೂನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 35:23
33 ತಿಳಿವುಗಳ ಹೋಲಿಕೆ  

ಅವರನ್ನು ಬೇರೆ ಬೇರೆ ಮಾಡಿ ಮುಂದುಗಡೆಯಲ್ಲಿ ದಾಸಿಯರನ್ನೂ ಅವರ ಮಕ್ಕಳನ್ನೂ, ಅವರ ಹಿಂದೆ ಲೇಯಳನ್ನೂ ಆಕೆಯ ಮಕ್ಕಳನ್ನೂ, ಕಡೆಯಲ್ಲಿ ರಾಖೇಲಳನ್ನೂ ಜೋಸೆಫನನ್ನೂ ನಿಲ್ಲಿಸಿದನು.


ಆಮೇಲೆ ದೇವರು ಅಬ್ರಹಾಮನೊಡನೆ ಒಡಂಬಡಿಕೆಯನ್ನು ಮಾಡಿಕೊಂಡರು; ಆ ಒಡಂಬಡಿಕೆಯ ಚಿಹ್ನೆಯನ್ನಾಗಿ ಸುನ್ನತಿಯನ್ನು ವಿಧಿಸಿದರು.ಅದರಂತೆ ಅಬ್ರಹಾಮನು ತನ್ನ ಮಗ ಇಸಾಕನಿಗೆ ಹುಟ್ಟಿದ ಎಂಟನೆಯ ದಿನ ಸುನ್ನತಿಯನ್ನು ಮಾಡಿದನು. ಇಸಾಕನು ತನ್ನ ಮಗ ಯಕೋಬನಿಗೂ, ಯಕೋಬನು ತನ್ನ ಹನ್ನೆರಡು ಮಕ್ಕಳಾದ ನಮ್ಮ ಪಿತಾಮಹರಿಗೂ ಹಾಗೆಯೇ ಮಾಡಿದನು.


ಹೀಗಿರಲು ಲೇಯಳ ಬಗ್ಗೆ ಯಕೋಬನಿಗೆ ಉದಾಸೀನ ಉಂಟಾಯಿತು. ಇದನ್ನು ಕಂಡು ಸರ್ವೇಶ್ವರಸ್ವಾಮಿ ಆಕೆಗೆ ತಾಯ್ತನವನ್ನು ಅನುಗ್ರಹಿಸಿದರು; ರಾಖೇಲಳು ಬಂಜೆಯಾಗೇ ಉಳಿದಳು.


ಯಕೋಬನೊಡನೆ ಹಾಗು ತಮ್ಮ ತಮ್ಮ ಕುಟುಂಬಗಳೊಡನೆ ಈಜಿಪ್ಟ್ ದೇಶಕ್ಕೆ ಬಂದ ಇಸ್ರಯೇಲನ ಮಕ್ಕಳ ಹೆಸರುಗಳು ಇವು:


ಲಾಬಾನನಿಗೆ ಇಬ್ಬರು ಹೆಣ್ಣುಮಕ್ಕಳಿದ್ದರು. ದೊಡ್ಡವಳ ಹೆಸರು ಲೇಯಾ, ಚಿಕ್ಕವಳ ಹೆಸರು ರಾಖೇಲ್.


ರೂಬೇನನೇ, ನೀನೆನ್ನ ಜೇಷ್ಠಪುತ್ರನು ನನ್ನ ಚೈತನ್ಯಸ್ವರೂಪನು, ನನ್ನ ವೀರ್ಯದ ಪ್ರಥಮ ಫಲ ನೀನು ಹಿರಿಮೆಯಲು, ಒಲುಮೆಯಲು ಪ್ರಮುಖನೆನಿಸಿಕೊಳ್ಳುವವನು.


ನಿಮಗೆ ಸಹಾಯಕರಾಗಿರಬೇಕಾದವರ ಹೆಸರುಗಳು ಇವು: ರೂಬೇನ್ ಕುಲದಿಂದ ಶೆದೇಯೂರನ ಮಗ ಎಲೀಚೂರ್.


ಇಸ್ರಯೇಲನ ಚೊಚ್ಚಲ ಮಗ ರೂಬೇನ್ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 46,500:


“ಸೂರ್ಯೋದಯವಾಗುವ ದಿಕ್ಕಿನಲ್ಲಿ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಆ ಕುಲದವರಿಗೆ ನಾಯಕ ಅಮ್ಮಿನಾದಾಬನ ಮಗ ನಹಶೋನ.


ಮೊದಲನೆಯ ದಿನ ಕಾಣಿಕೆ ತಂದೊಪ್ಪಿಸಿದವನು ಯೆಹೂದ ಕುಲಾಧಿಪತಿ ಅಮ್ಮೀನಾದಾಬನ ಮಗ ನಹಶೋನ.


ಮುಂಭಾಗದಲ್ಲಿ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿದ್ದವನು ಅಮ್ಮೀನಾದಾಬನ ಮಗ ನಹಶೋನನು.


ಆ ಮುಖ್ಯಸ್ಥರ ಹೆಸರುಗಳು ಇವು - ರೂಬೇನ್ ಕುಲದ ಜಕ್ಕೂರನ ಮಗ ಶಮ್ಮೂವ


ಯಕೋಬನ ಜೇಷ್ಠ ಪುತ್ರನಾದ ರೂಬೇನನ ವಂಶಸ್ಥರು ಇವರು: ಹನೋಕನಿಂದ ಹನೋಕ್ಯರು, ಪಲ್ಲೂವಿನಿಂದ ಪಲ್ಲೂವಿನವರು,


ಆಯಾ ಕುಲದಿಂದ ನೀವು ನೇಮಿಸಬೇಕಾದವರು ಇವರು: ಯೆಹೂದ ಕುಲದಿಂದ ಯೆಫುನ್ನೆಯ ಮಗ ಕಾಲೇಬ್,


ಮೋಶೆ ಆ ದಿನದಲ್ಲಿ ಜನರಿಗೆ ಆಜ್ಞಾಪಿಸಿದ್ದೇನೆಂದರೆ,


ರೂಬೇನ್ ಕುಲ ಕುರಿತು ಮೋಶೆ ನುಡಿದದ್ದು: “ರೂಬೇನ್ ಅಳಿಯದೆ ಉಳಿಯಲಿ ಅವನ ಮಕ್ಕಳು ಅಸಂಖ್ಯಾತರಾಗದಿರಲಿ.”


ಮೋಶೆ ರೂಬೇನ್ಯರ ಗೋತ್ರಗಳಿಗೆ ಸ್ವಂತ ಆಸ್ತಿಯಾಗಿ ಕೊಟ್ಟ ಪ್ರದೇಶಗಳು ಇವು :


ಎದೋಮ್ ನಾಡು ಹಾಗೂ ಚಿನ್ ಮರುಭೂಮಿಯ ಎಲ್ಲೆಯಾಗಿರುವ ಕಾನಾನ್ ನಾಡಿನ ದಕ್ಷಿಣ ಭಾಗವು ಯೆಹೂದ ಕುಲದ ಗೋತ್ರಗಳಿಗೆ ದೊರಕಿದ ಸೊತ್ತು.


ಎರಡನೇ ಸಾರಿಯ ಚೀಟು ಸಿಮೆಯೋನ್ ಕುಲದವರಿಗೆ ಬಿದ್ದಿತು. ಈ ಸಿಮೆಯೋನ್ ಕುಲದ ಗೋತ್ರಗಳ ಸೊತ್ತು ಯೂದಕುಲದವರ ಸೊತ್ತಿನ ಮಧ್ಯದಲ್ಲಿತ್ತು.


ಮೂರನೇ ಸಾರಿಯ ಚೀಟು ಜೆಬುಲೂನ್ಯರಿಗೆ ಬಿದ್ದಿತು. ಈ ಕುಲದ ಗೋತ್ರಗಳಿಗೆ ಸಿಕ್ಕಿದ ಸೊತ್ತಿನ ಎಲ್ಲೆ.


ನಾಲ್ಕನೇ ಸಾರಿಯ ಚೀಟು ಇಸ್ಸಾಕಾರ್ ಕುಲದವರಿಗೆ ಬಿದ್ದಿತು. ಅದರ ಗೋತ್ರಗಳಿಗೆ ಸಿಕ್ಕಿದ ನಾಡಿನಲ್ಲಿರುವ ನಗರಗಳು ಯಾವುವು ಎಂದರೆ -


ಬಂದರು ಅಮಾಲೇಕ್ಯರ ಪ್ರದೇಶದೊಳು ನೆಲೆಗೊಂಡ ಎಫ್ರಯೀಮ್ಯರು, ಅವರೊಂದಿಗೆ ಬಂದರು ಬೆನ್ಯಾಮೀನ್ಯರು, ಮಾಕೀರನ ಗೋತ್ರದ ಪ್ರಧಾನರು, ಜೆಬುಲೂನ್ ಕುಲದೊಳು ದಂಡಧಾರಿಗಳಾದ ಸೇನಾನಾಯಕರು.


ಇಸ್ಸಾಕಾರ್ ಕುಲಪ್ರಭುಗಳು ಬಂದರು ದೆಬೋರಳ ಜೊತೆಯಲ್ಲಿ, ಆಗಮಿಸಿದನು ಬಾರಾಕನು ಇಸ್ಸಾಕಾರ್ಯರ ಸಂಗಡದಲಿ, ಇವನ ಹೆಜ್ಜೆಹಿಡಿದು ಬಂದರು ಅವರೆಲ್ಲರು ತವಕದಲಿ.


ಅಂಥವರಲ್ಲ ಈ ಜೆಬುಲೂನ್ಯರು, ನಫ್ತಾಲ್ಯರು ಪ್ರಾಣವನ್ನೇ ಮುಡಿಪಾಗಿಟ್ಟರು ರಣಭೂಮಿಯೊಳು.


ಆಗ ಊರಿನ ಹಿರಿಯರು ಮತ್ತು ನೆರೆದಿದ್ದ ಸಭಿಕರು: “ಹೌದು, ನಾವೆಲ್ಲರೂ ಸಾಕ್ಷಿಗಳು. ಇಸ್ರಯೇಲಿನ ಮನೆತನವನ್ನು ವೃದ್ಧಿಗೊಳಿಸಿದ ರಾಹೆಲ್ ಮತ್ತು ಲೆಯಾ ಎಂಬ ಕುಲೀನೆಯರನ್ನು ಸರ್ವೇಶ್ವರ ಆಶೀರ್ವದಿಸಲಿ! ಎಫ್ರಾತ ಕುಲದಲ್ಲಿ ಧನವಂತನಾಗು;


ಸಿಮೆಯೋನ: ಚೆನ್ನಾಗಿ ತರಬೇತಿ ಹೊಂದಿದ 7,100 ರಣವೀರರು;


ಇಸ್ರಯೇಲ್ ಕುಲಗಳ ಅಧ್ಯಕ್ಷರುಗಳು: ಕುಲ ಅಧ್ಯಕ್ಷರು ರೂಬೇನ್ ಜಿಕ್ರಿಯ ಮಗ ಎಲೀಯೆಜೆರ್ ಸಿಮೆಯೋನ್ ಮಾಕನ ಮಗ ಶೆಫಟ್ಯ 17 ಲೇವಿ ಕೆಮುವೇಲನ ಮಗ ಹಷಬ್ಯ 18 ಆರೋನ ಚಾದೋಕ್ ಯೂದ ಎಲೀಹು, ಅರಸ ದಾವೀದನ ಸಹೋದರರಲ್ಲಿ ಒಬ್ಬ ಇಸ್ಸಾಕಾರ್ ಮೀಕಾಯೇಲನ ಮಗ ಒಮ್ರಿ 19 ಜೆಬುಲೂನ ಓಬದ್ಯನ ಮಗ ಇಷ್ಮಾಯ ನಫ್ತಾಲಿ ಅಜ್ರೀಯೇಲನ ಮಗ ಯೆರೀಮೋತ್ 20 ಎಫ್ರಯಿಮ ಅಜಜ್ಯನ ಮಗ ಹೊಷೇಯ ಪಶ್ಚಿಮ ಮನಸ್ಸೆ ಪೆದಾಯನ ಮಗ ಯೋವೇಲ್ 2೧ ಪೂರ್ವ. ಮನಸ್ಸೆ ಜೆಕರ್ಯನ ಮಗ ಇದ್ದೋ ಬೆನ್ಯಾಮೀನ ಅಬ್ನೇರನ ಮಗ ಯಗಸೀಯೇಲ್ 22 ದಾನ ಯೆರೋಹಾಮನ ಮಗ ಅಜರೇಲ್


ರಾಜಧಾನಿಯ ಗಡಿಗಳು ಹೀಗಿರಬೇಕು: ಉತ್ತರದ ಗಡಿಯ ಉದ್ದ 2,250 ಮೀಟರ್;


ಸಿಮೆಯೋನನ ಕುಲದಿಂದ ಹನ್ನೆರಡು ಸಾವಿರ ಲೇವಿಯ ಕುಲದಿಂದ ಹನ್ನೆರಡು ಸಾವಿರ ಇಸ್ಸಾಕರನ ಕುಲದಿಂದ ಹನ್ನೆರಡು ಸಾವಿರ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು