ಆದಿಕಾಂಡ 35:4 - ಕನ್ನಡ ಸತ್ಯವೇದವು C.L. Bible (BSI)4 ಅಂತೆಯೆ ಅವರು ತಮ್ಮಲ್ಲಿದ್ದ ಎಲ್ಲ ಅನ್ಯದೇವರುಗಳನ್ನೂ ತಮ್ಮ ಕಿವಿಗಳಲ್ಲಿದ್ದ ಮುರುವುಗಳನ್ನೂ ಯಕೋಬನಿಗೆ ಒಪ್ಪಿಸಿಬಿಟ್ಟರು. ಅವನು ಅವುಗಳನ್ನು ಶೆಕೆಮ್ ಪಟ್ಟಣದ ಹತ್ತಿರ ಇದ್ದ ಒಂದು ಓಕ್ ಮರದ ಬುಡದಡಿಯಲ್ಲಿ ಹೂಳಿಬಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆಗ ಅವರು ತಮ್ಮಲ್ಲಿದ್ದ ಎಲ್ಲಾ ಅನ್ಯ ದೇವರುಗಳನ್ನು, ತಮ್ಮ ಕಿವಿಯಲ್ಲಿದ್ದ ಓಲೆಗಳನ್ನು ಯಾಕೋಬನಿಗೆ ಕೊಟ್ಟರು. ಅವನು ಅವುಗಳನ್ನು ಶೆಕೆಮ್ ಪಟ್ಟಣದ ಹತ್ತಿರವಿರುವ ಏಲಾ ಮರದ ಕೆಳಗೆ ಹೂಣಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆಗ ಅವರು ತಮ್ಮಲ್ಲಿದ್ದ ಎಲ್ಲಾ ಅನ್ಯದೇವರುಗಳನ್ನೂ ತಮ್ಮ ಕಿವಿಗಳಲ್ಲಿದ್ದ ಮುರುವುಗಳನ್ನೂ ಯಾಕೋಬನಿಗೆ ಒಪ್ಪಿಸಲು ಅವನು ಅವುಗಳನ್ನು ಶೆಕೆಮ್ ಪಟ್ಟಣದ ಹತ್ತಿರವಿರುವ ಏಲಾವೃಕ್ಷದ ಬುಡದಲ್ಲಿ ಹೂಳಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆದ್ದರಿಂದ ಅವರು ತಮ್ಮಲ್ಲಿದ್ದ ಎಲ್ಲಾ ಅನ್ಯದೇವರುಗಳನ್ನೂ ತಮ್ಮ ಕಿವಿಗಳಲ್ಲಿದ್ದ ವಾಲೆಗಳನ್ನೂ ಯಾಕೋಬನಿಗೆ ಕೊಟ್ಟರು. ಯಾಕೋಬನು ಅವುಗಳನ್ನೆಲ್ಲಾ ಶೆಕೆಮ್ ಪಟ್ಟಣದ ಸಮೀಪದಲ್ಲಿರುವ ಏಲಾವೃಕ್ಷದ ಬುಡದಲ್ಲಿ ಹೂಳಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ಅವರು ತಮ್ಮ ಬಳಿಯಲ್ಲಿದ್ದ ಎಲ್ಲಾ ಅನ್ಯದೇವರುಗಳನ್ನೂ, ತಮ್ಮ ಕಿವಿಗಳಲ್ಲಿದ್ದ ಮುರುವುಗಳನ್ನೂ ತೆಗೆದು, ಯಾಕೋಬನಿಗೆ ಕೊಟ್ಟರು. ಅವನು ಅವುಗಳನ್ನು ಶೆಕೆಮ್ ಊರಿಗೆ ಸಮೀಪವಾಗಿದ್ದ ಏಲಾ ಮರದ ಕೆಳಗೆ ಹೂಳಿಟ್ಟರು. ಅಧ್ಯಾಯವನ್ನು ನೋಡಿ |