Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 35:5 - ಕನ್ನಡ ಸತ್ಯವೇದವು C.L. Bible (BSI)

5 ಅವರು ಪ್ರಯಾಣಮಾಡುತ್ತಿದ್ದಾಗ ದೇವರು ಸುತ್ತಮುತ್ತಣದ ಊರಿನವರಲ್ಲಿ ಭಯ ಹುಟ್ಟಿಸಿದರು. ಇದರಿಂದಾಗಿ ಆ ಊರಿವನರಾರೂ ಯಕೋಬನ ಮಕ್ಕಳನ್ನು ಹಿಂದಟ್ಟಿ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಮೇಲೆ ಅವರು ಪ್ರಯಾಣ ಮಾಡುತ್ತಿರುವಾಗ, ಸುತ್ತಲಿರುವ ಊರುಗಳಲ್ಲಿ ದೇವರ ಭಯವು ಇದ್ದುದರಿಂದ ಅವರು ಯಾಕೋಬನ ಮಕ್ಕಳನ್ನು ಬೆನ್ನಟ್ಟಿ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಮೇಲೆ ಅವರು ಪ್ರಯಾಣ ಮಾಡುತ್ತಿರುವಾಗ ದೇವರು ಹುಟ್ಟಿಸಿದ ಭಯವು ಸುತ್ತುಮುತ್ತಣ ಊರುಗಳಲ್ಲಿ ಇದ್ದದರಿಂದ ಆ ಊರುಗಳವರು ಯಾಕೋಬನ ಮಕ್ಕಳನ್ನು ಹಿಂದಟ್ಟಿ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯಾಕೋಬನು ಮತ್ತು ಅವನ ಗಂಡುಮಕ್ಕಳು ಆ ಸ್ಥಳದಿಂದ ಹೊರಟರು. ಆ ಪ್ರದೇಶದಲ್ಲಿದ್ದ ಜನರು ಅವರನ್ನು ಹಿಂಬಾಲಿಸಿ ಕೊಲ್ಲಬೇಕೆಂದಿದ್ದರು. ಆದರೆ ಅವರು ಭಯಪಟ್ಟು ಯಾಕೋಬನನ್ನು ಹಿಂಬಾಲಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ತರುವಾಯ ಅವರು ಮುಂದೆ ಪ್ರಯಾಣಮಾಡಿದರು. ಆಗ ಸುತ್ತಲಿರುವ ಪಟ್ಟಣಗಳವರ ಮೇಲೆ ದೇವರ ಭಯವು ಇದ್ದುದರಿಂದ, ಅವರು ಯಾಕೋಬನ ಮಕ್ಕಳನ್ನು ಬೆನ್ನಟ್ಟಿ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 35:5
16 ತಿಳಿವುಗಳ ಹೋಲಿಕೆ  

ನೀವು ಹೋಗುವ ಎಲ್ಲ ಕಡೆಯಲ್ಲಿಯೂ ನಾನು ಜನಗಳ ಮನಸ್ಸಿನಲ್ಲಿ ಹೆದರಿಕೆಯನ್ನು ಹುಟ್ಟಿಸಿ, ಕಳವಳವನ್ನು ಉಂಟುಮಾಡಿ, ನಿಮ್ಮನ್ನು ವಿರೋಧಿಸುವವರು ಓಡಿಹೋಗುವಂತೆ ಮಾಡುವೆನು.


ಜುದೇಯದ ಸುತ್ತಲಿನ ದೇಶಗಳ ರಾಜ್ಯಗಳವರೆಗೆ ಸರ್ವೇಶ್ವರನ ಭಯವಿತ್ತು. ಆದುದರಿಂದ ಅವರು ಯೆಹೋಷಾಫಾಟನೊಡನೆ ಯುದ್ಧಕ್ಕೆ ಬರಲಿಲ್ಲ.


ಸಜ್ಜನರ ಸಂಗದೊಳು ದೇವನಿರಲು I ದುರ್ಜನರಿದೋ ದಿಗ್ಭ್ರಾಂತರಾಗುವರು II


ಜೋರ್ಡನಿನ ಪಶ್ಚಿಮದಲ್ಲಿದ್ದ ಅಮೋರಿಯರ ಎಲ್ಲ ಅರಸರು ಮತ್ತು ಸಮುದ್ರದ ಬಳಿಯಿದ್ದ ಸರ್ವ ಕಾನಾನ್ ರಾಜರು ಸರ್ವೇಶ್ವರ ಸ್ವಾಮಿ ಇಸ್ರಯೇಲರ ಕಣ್ಮುಂದೆಯೇ ಜೋರ್ಡನನ್ನು ಬತ್ತಿಸಿ ಆ ನದಿ ದಾಟಿಸಿದರೆಂದು ಕೇಳಿದರು. ಆಗ ಅವರ ಎದೆ ಒಡೆದುಕೋಯಿತು. ಇಸ್ರಯೇಲರ ಮುಂದೆ ಅವರಿಗೆ ಧೈರ್ಯವಿಲ್ಲದೆ ಹೋಯಿತು.


ಯಾರೂ ನಿಮ್ಮ ಮುಂದೆ ನಿಲ್ಲುವುದಿಲ್ಲ. ನೀವು ಕಾಲಿಡುವ ಎಲ್ಲ ಪ್ರದೇಶಗಳ ಜನಗಳಿಗೂ ನಿಮ್ಮಿಂದ ದಿಗಿಲೂ ಹೆದರಿಕೆಯೂ ಉಂಟಾಗುವ ಹಾಗೆ ನಿಮ್ಮ ದೇವರಾದ ಸರ್ವೇಶ್ವರ ತಾನೇ ಹೇಳಿರುವಂತೆ ಮಾಡುವರು.


ನಾನು ನಿಮ್ಮ ಎದುರಿನಿಂದ ಅನ್ಯಜನರನ್ನು ಹೊರಡಿಸಿ ನಿಮ್ಮ ಎಲ್ಲೆಯನ್ನು ವಿಸ್ತರಿಸುವೆನು. ಅದೂ ಅಲ್ಲದೆ ನೀವು ವರ್ಷಕ್ಕೆ ಮೂರು ಸಾರಿ ನಿಮ್ಮ ದೇವರೂ ಸರ್ವೇಶ್ವರನೂ ಆದ ನನ್ನ ಸನ್ನಿಧಿಗೆ ಬರುವಾಗ ಯಾರೂ ನಿಮ್ಮ ನಾಡನ್ನು ಅಪಹರಿಸಲು ಅಪೇಕ್ಷಿಸುವುದಿಲ್ಲ.


ಇದಲ್ಲದೆ ಸರ್ವೇಶ್ವರನ ಭಯದಿಂದ ತಬ್ಬಿಬ್ಬಾದ ಗೆರಾರಿನ ಸುತ್ತಣ ಪಟ್ಟಣಗಳನ್ನು ಅವರು ವಶಪಡಿಸಿಕೊಂಡು, ಅವುಗಳನ್ನೆಲ್ಲಾ ಸುಲಿಗೆಮಾಡಿದರು. ಅವುಗಳಲ್ಲೂ ದೊಡ್ಡ ಕೊಳ್ಳೆ ಸಿಕ್ಕಿತು.


ಇದರಿಂದಾಗಿ ಪಾಳೆಯದಲ್ಲಿದ್ದವರು, ಕಾವಲುಗಾರರಾಗಿ ಠಾಣದಲ್ಲಿದ್ದವರು, ಸುಲಿಗೆಗಾಗಿ ಹೊರಗೆ ಹೋಗಿದ್ದವರು, ಹಾಗು ಉಳಿದ ಎಲ್ಲಾ ಜನರು ಭಯದಿಂದ ನಡುಗತೊಡಗಿದರು. ಇದಲ್ಲದೆ, ದೇವರು ಭೂಕಂಪವನ್ನುಂಟು ಮಾಡಿದರು. ಈ ಕಾರಣ ಜನರಲ್ಲಿ ಮಹಾಭೀತಿಯುಂಟಾಯಿತು.


ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ತುಂಡುತುಂಡು ಮಾಡಿ, ಆ ತುಂಡುಗಳನ್ನು ದೂತರ ಮುಖಾಂತರ ಇಸ್ರಯೇಲರ ಎಲ್ಲ ಪ್ರಾಂತ್ಯಗಳಿಗೆ ಕಳುಹಿಸಿದನು. “ಯಾರು ಸೌಲ ಹಾಗು ಸಮುವೇಲರನ್ನು ಹಿಂಬಾಲಿಸುವುದಿಲ್ಲವೋ ಅವರ ಎತ್ತುಗಳನ್ನು ಹೀಗೆಯೇ ಕಡಿಯಲಾಗುವುದು,” ಎಂದು ಹೇಳಿಸಿದನು. ಸರ್ವೇಶ್ವರನ ಭಯಭಕ್ತಿಯಿಂದ ಪ್ರೇರಿತರಾದ ಜನರೆಲ್ಲರೂ ಏಕಮನಸ್ಸಿನಿಂದ ಕೂಡಿಬಂದರು.


ಆಗ ಯಕೋಬನು, ಸಿಮೆಯೋನ್ ಮತ್ತು ಲೇವಿಯರಿಗೆ, “ನೀವು ನನ್ನ ಹೆಸರನ್ನು ಈ ನಾಡಿನ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ಅಸಹ್ಯಮಾಡಿಬಿಟ್ಟರಿ; ನನ್ನನ್ನು ಅಪಾಯಕ್ಕೆ ಗುರಿಮಾಡಿದ್ದೀರಿ. ನನಗಿರುವ ಜನರು ಕೆಲವರೇ. ಈ ನಾಡಿನವರೆಲ್ಲರು ಒಟ್ಟಿಗೆ ಬಂದು ನನ್ನ ಮೇಲೆ ಬಿದ್ದರೆ ನಾನು ಮಾತ್ರವಲ್ಲ, ನನ್ನ ಮನೆಯವರೆಲ್ಲರೂ ನಿರ್ಮೂಲವಾಗುತ್ತೇವೆ ಅಲ್ಲವೇ?” ಎಂದನು.


ಅಂತೆಯೆ ಅವರು ತಮ್ಮಲ್ಲಿದ್ದ ಎಲ್ಲ ಅನ್ಯದೇವರುಗಳನ್ನೂ ತಮ್ಮ ಕಿವಿಗಳಲ್ಲಿದ್ದ ಮುರುವುಗಳನ್ನೂ ಯಕೋಬನಿಗೆ ಒಪ್ಪಿಸಿಬಿಟ್ಟರು. ಅವನು ಅವುಗಳನ್ನು ಶೆಕೆಮ್ ಪಟ್ಟಣದ ಹತ್ತಿರ ಇದ್ದ ಒಂದು ಓಕ್ ಮರದ ಬುಡದಡಿಯಲ್ಲಿ ಹೂಳಿಬಿಟ್ಟನು.


ಲೋಕದಲ್ಲಿರುವ ಎಲ್ಲ ಜನಗಳಿಗೂ ಇಂದಿನಿಂದ ನಿಮ್ಮ ಬಗ್ಗೆ ದಿಗಿಲೂ ಹೆದರಿಕೆಯೂ ಉಂಟಾಗುವಂತೆ ಮಾಡುತ್ತೇನೆ. ಅವರು ನಿಮ್ಮ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ಗಡಗಡನೆ ನಡುಗಿ ಸಂಕಟಪಡುವರು,’ ಎಂದು ಹೇಳಿದರು.


ಅವರಿಗಾರಿಂದಲೂ ಅನ್ಯಾಯವಾಗಗೊಡಿಸಲಿಲ್ಲ I ಅವರಿಗಾಗಿ ಅರಸರನೂ ಗದರಿಸದೆ ಬಿಡಲಿಲ್ಲ : II


ಅವರು ಸೋತು ಓಡಿಹೋದಾಗ ಆಸನೂ ಅವನ ಜನರೂ ಗೆರಾರಿನವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದರು. ಅವರಲ್ಲಿ ಯಾರೂ ಜೀವದಿಂದುಳಿಯಲಿಲ್ಲ. ಸರ್ವೇಶ್ವರನ ಮತ್ತು ಅವರ ಸೈನ್ಯದ ಮುಂದೆ ಸುಡಾನರು ಭಿನ್ನಭಿನ್ನರಾದರು. ಇಸ್ರಯೇಲರಿಗೆ ಅಪರಿಮಿತವಾದ ಕೊಳ್ಳೆಸಿಕ್ಕಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು