Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 35:7 - ಕನ್ನಡ ಸತ್ಯವೇದವು C.L. Bible (BSI)

7 ಯಕೋಬನು ತನ್ನ ಅಣ್ಣನ ಬಳಿಯಿಂದ ಓಡಿಹೋಗುವಾಗ ದೇವರು ಅವನಿಗೆ ಪ್ರತ್ಯಕ್ಷವಾದುದು ಅಲ್ಲಿಯೇ. ಎಂದೇ ಅವನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿ, ಆ ಸ್ಥಳಕ್ಕೆ ‘ಏಲ್ ಬೇತೇಲ್’ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವನು ತನ್ನ ಅಣ್ಣನ ಬಳಿಯಿಂದ ಓಡಿಹೋದಾಗ ದೇವರು ಅವನಿಗೆ ಪ್ರತ್ಯಕ್ಷನಾದನು. ಅದುದರಿಂದ ಅವನು ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಆ ಸ್ಥಳಕ್ಕೆ ಏಲ್ ಬೇತೇಲ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವನು ತನ್ನ ಅಣ್ಣನ ಬಳಿಯಿಂದ ಓಡಿಹೋಗಲು ದೇವರು ಅಲ್ಲೇ ಅವನಿಗೆ ಪ್ರತ್ಯಕ್ಷನಾದದರಿಂದ ಅವನು ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಆ ಸ್ಥಳಕ್ಕೆ ಏಲ್ ಬೇತೇಲ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯಾಕೋಬನು ಅಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಸಿದನು. ಯಾಕೋಬನು ತನ್ನ ಅಣ್ಣನ ಬಳಿಯಿಂದ ಓಡಿ ಹೋಗುತ್ತಿದ್ದಾಗ ದೇವರು ಅವನಿಗೆ ಮೊದಲು ಕಾಣಿಸಿಕೊಂಡದ್ದು ಆ ಸ್ಥಳದಲ್ಲೇ. ಆದ್ದರಿಂದ ಯಾಕೋಬನು ಆ ಸ್ಥಳಕ್ಕೆ “ಏಲ್ ಬೇತೇಲ್” ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅಲ್ಲಿ ಅವನು ಬಲಿಪೀಠವನ್ನು ಕಟ್ಟಿ, ತಾನು ತನ್ನ ಸಹೋದರನ ಬಳಿಯಿಂದ ಓಡಿಹೋದಾಗ, ಅಲ್ಲಿ ದೇವರು ತನಗೆ ಪ್ರತ್ಯಕ್ಷನಾದದ್ದರಿಂದ ಆ ಸ್ಥಳಕ್ಕೆ ಏಲ್ ಬೇತೇಲ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 35:7
16 ತಿಳಿವುಗಳ ಹೋಲಿಕೆ  

ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಆಲಿಸಿ, ನಾನು ಹೋದ ಕಡೆಯೆಲ್ಲ ನನ್ನೊಂದಿಗಿದ್ದ ದೇವರಿಗೆ ಅಲ್ಲೊಂದು ಬಲಿಪೀಠವನ್ನು ಕಟ್ಟಿಸುತ್ತೇನೆ,” ಎಂದು ಹೇಳಿದನು.


ದೇವರು ಯಕೋಬನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಬೇತೇಲಿಗೆ ಹೋಗಿ ಅಲ್ಲೇ ವಾಸಮಾಡು. ನೀನು ನಿನ್ನ ಅಣ್ಣ ಏಸಾವನ ಬಳಿಯಿಂದ ಓಡಿಹೋಗುವಾಗ ನಿನಗಲ್ಲಿ ದರ್ಶನ ಇತ್ತ ದೇವರು ನಾನೇ. ನನಗೊಂದು ಬಲಿಪೀಠವನ್ನು ಅಲ್ಲಿ ಕಟ್ಟಿಸು,” ಎಂದು ಹೇಳಿದರು.


ಇದಲ್ಲದೆ, ಸರ್ವೇಶ್ವರಸ್ವಾಮಿ ಅವನ ಬಳಿಯಲ್ಲೇ ನಿಂತು, “ನಿನ್ನ ತಂದೆಯೂ ಅಬ್ರಹಾಮನ ದೇವರೂ ಇಸಾಕನ ದೇವರೂ ಆಗಿರುವ ಸರ್ವೇಶ್ವರ ನಾನೇ. ನೀನು ಮಲಗಿಕೊಂಡಿರುವ ಈ ನಾಡನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.


ಪಟ್ಟಣದ ಸುತ್ತಳತೆ ಒಂಬತ್ತು ಸಾವಿರ ಮೀಟರ್‍ಗಳು. ಅದನ್ನು ನಿರ್ಮಿಸಿದಂದಿನಿಂದ ಆ ಪಟ್ಟಣಕ್ಕೆ ‘ಸರ್ವೇಶ್ವರನ ನೆಲೆ’ ಎಂದು ಹೆಸರಾಗುವುದು.


ಗಿದ್ಯೋನನು ಅಲ್ಲೇ ಸರ್ವೇಶ್ವರನಿಗಾಗಿ ಒಂದು ಬಲಿಪೀಠವನ್ನು ಕಟ್ಟಿ ಅದಕ್ಕೆ ‘ಯೆಹೋವ ಷಾಲೋಮ್’ ಎಂದು ಹೆಸರಿಟ್ಟನು; ಅದು ಈವರೆಗೂ ಅಬೀಯೆಜೆರ್ ಗೋತ್ರದವರ ಒಫ್ರದಲ್ಲಿರುತ್ತದೆ.


ಆ ಸ್ಥಳದಲ್ಲಿ ಮೋಶೆ ಒಂದು ಬಲಿಪೀಠವನ್ನು ಕಟ್ಟಿಸಿ ಅದಕ್ಕೆ, ‘ಯಾವ್ವೆನಿಸ್ಸಿ’ ಎಂದು ಹೆಸರಿಟ್ಟನು.


ನಾನು ಸ್ಮಾರಕಸ್ತಂಭವಾಗಿ ನೆಟ್ಟಿರುವ ಈ ಕಲ್ಲು ದೇವರ ಮನೆಯಾಗುವುದು; ಅದು ಮಾತ್ರವಲ್ಲ, ನೀವು ನನಗೆ ಕೊಡುವ ಎಲ್ಲ ಆಸ್ತಿಪಾಸ್ತಿಯಲ್ಲಿ ಹತ್ತರಲ್ಲಿ ಒಂದು ಪಾಲನ್ನು ನಿಮಗೆ ಸಮರ್ಪಿಸುತ್ತೇನೆಂದು ಮಾತುಕೊಡುತ್ತೇನೆ.”


‘ಲೂಜ್’ ಎಂದು ಹೆಸರು ಪಡೆದಿದ್ದ ಆ ಊರಿಗೆ ‘ಬೇತೇಲ್’ ಎಂದು ನಾಮಕರಣ ಮಾಡಿದನು.


ಅಲ್ಲಿ ಸರ್ವೇಶ್ವರ ಸ್ವಾಮಿ ಅಬ್ರಾಮನಿಗೆ ದರ್ಶನವಿತ್ತು - “ಈ ನಾಡನ್ನು ನಾನು ನಿನ್ನ ಸಂತಾನಕ್ಕೆ ಕೊಡುತ್ತೇನೆ” ಎಂದು ಹೇಳಿದರು. ತನಗೆ ದರ್ಶನಕೊಟ್ಟ ಸರ್ವೇಶ್ವರನಿಗೆ ಅಬ್ರಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.


ಬಳಿಕ ಅವನು ಅಲ್ಲಿಂದ ದಕ್ಷಿಣಕ್ಕೆ ಹೊರಟು ಬೇತೇಲಿಗೆ ಪೂರ್ವಕ್ಕಿರುವ ಗುಡ್ಡಗಾಡಿಗೆ ಬಂದು ಗುಡಾರ ಹಾಕಿ ನೆಲಸಿದನು. ಪಶ್ಚಿಮಕ್ಕೆ ಬೇತೇಲೂ ಪೂರ್ವಕ್ಕೆ ಆಯಿ ಎಂಬ ಊರು ಇದ್ದವು. ಅಲ್ಲೂ ಸರ್ವೇಶ್ವರ ಸ್ವಾಮಿಗೆ ಒಂದು ಬಲಿಪೀಠವನ್ನು ಕಟ್ಟಿಸಿ ಅವರ ನಾಮಸ್ಮರಣೆಮಾಡಿ ಆರಾಧಿಸಿದನು.


ಯಕೋಬನು ಖಾರಾನಿಗೆ ಹೋಗಬೇಕೆಂದು ಬೇರ್ಷೆಬದಿಂದ ಹೊರಟನು.


ಅಲ್ಲದೆ ಭಯಭಕ್ತಿಯಿಂದ, “ಇದು ಮಹಾಗಂಭೀರವಾದ ಸ್ಥಳ; ದೇವರ ಸ್ಥಾನವೇ ಹೊರತು ಬೇರೆಯಲ್ಲ, ಇದು ಪರಲೋಕದ ಬಾಗಿಲು!” ಎಂದನು.


ಬಳಿಕ ಯಕೋಬನು ಪ್ರಯಾಣವನ್ನು ಮುಂದುವರಿಸುತ್ತಾ ಮೂಡಣದವರ ನಾಡಿಗೆ ಬಂದನು.


ಬೇತೇಲಿನಲ್ಲಿ ನಿನಗೆ ಕಾಣಿಸಿದ ದೇವರು ನಾನೇ, ಅಲ್ಲಿ ನೀನು ಕಲ್ಲಿನ ಮೇಲೆ ಎಣ್ಣೆ ಹೊಯ್ದು ಅಭ್ಯಂಗಿಸಿ, ನನಗೆ ಹರಕೆ ಮಾಡಿಕೊಂಡೆಯಲ್ಲವೆ? ಈಗ ಎದ್ದು ಈ ನಾಡನ್ನು ಬಿಟ್ಟು ನೀನು ಹುಟ್ಟಿದ ನಾಡಿಗೆ ಹಿಂದಿರುಗಿ ಹೋಗು’ ಎಂದು ತಿಳಿಸಿದನು,” ಎಂದನು.


ಆ ಸ್ಥಳವನ್ನು ‘ಬೇತೇಲ್’ ಎಂದು ಹೆಸರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು