Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 35:8 - ಕನ್ನಡ ಸತ್ಯವೇದವು C.L. Bible (BSI)

8 ಅಲ್ಲಿರುವಾಗ ರೆಬೆಕ್ಕಳ ದಾದಿ ದೆಬೋರಳು ಸತ್ತುಹೋದಳು. ಆಕೆಯನ್ನು ಬೇತೇಲಿನ ಕಣಿವೆಯಲ್ಲಿರುವ ಮತ್ತೊಂದು ಓಕ್ ಮರದ ಬುಡದಲ್ಲಿ ಸಮಾಧಿಮಾಡಿ ಅದಕ್ಕೆ ‘ಅಲ್ಲೋನ್ ಬಾಕೂತ್’ ಎಂದು ಹೆಸರಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅಲ್ಲಿ ರೆಬೆಕ್ಕಳ ದಾಸಿಯಾದ ದೆಬೋರಳು ಸತ್ತು ಹೋದಾಗ, ಅವರು ಆಕೆಯನ್ನು ಬೇತೇಲಿನ ತಗ್ಗಿನಲ್ಲಿರುವ ಅಲ್ಲೋನ್ ಮರದ ಬುಡದಲ್ಲಿ ಸಮಾಧಿಮಾಡಿದರು. ಆ ಸ್ಥಳಕ್ಕೆ ಅಲ್ಲೋನ್ ಬಾಕೂತ್ ಎಂದು ಹೆಸರಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅಲ್ಲಿ ರೆಬೆಕ್ಕಳ ದಾದಿಯಾದ ದೆಬೋರಳು ಸತ್ತುಹೋಗಲು ಅವರು ಆಕೆಗೆ ಬೇತೇಲಿನ ತಗ್ಗಿನಲಿರುವ ಅಲ್ಲೋನ್ ಮರದ ಬುಡದಲ್ಲಿ ಸಮಾಧಿಮಾಡಿ ಅದಕ್ಕೆ ಅಲ್ಲೋನ್ ಬಾಕೂತ್ ಎಂದು ಹೆಸರಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ರೆಬೆಕ್ಕಳ ದಾಸಿಯಾದ ದೆಬೋರಳು ಅಲ್ಲಿ ಸತ್ತುಹೋದಳು. ಆದ್ದರಿಂದ ಅವರು ಆಕೆಯನ್ನು ಬೇತೇಲಿನ ಬಳಿಯಲ್ಲಿರುವ ಏಲಾವೃಕ್ಷದ ಬುಡದಲ್ಲಿ ಸಮಾಧಿ ಮಾಡಿದರು. ಆ ಸ್ಥಳಕ್ಕೆ “ಅಲ್ಲೋನ್ ಬಾಕೂತ್” ಎಂದು ಹೆಸರಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ರೆಬೆಕ್ಕಳ ದಾದಿಯಾಗಿದ್ದ ದೆಬೋರಳು ಮರಣಹೊಂದಿದಳು. ಬೇತೇಲಿನ ಕೆಳಗಿದ್ದ ಏಲಾ ಮರದ ಬುಡದಲ್ಲಿ ಆಕೆಯನ್ನು ಹೂಳಿಟ್ಟರು. ಆ ಸ್ಥಳಕ್ಕೆ ಅಲ್ಲೋನ್ ಬಾಕೂತ್ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 35:8
7 ತಿಳಿವುಗಳ ಹೋಲಿಕೆ  

ಆಗ ಅವರು ತಂಗಿ ರೆಬೆಕ್ಕಳನ್ನೂ ಆಕೆಯ ದಾದಿಯನ್ನೂ ಅಬ್ರಹಾಮನ ಸೇವಕನ ಮತ್ತು ಅವನ ಸಂಗಡಿಗರ ಜೊತೆಗೆ ಸಾಗಕಳುಹಿಸಿದರು, ಅಲ್ಲದೆ ರೆಬೆಕ್ಕಳನ್ನು ಹೀಗೆಂದು ಹರಸಿದರು:


ಅವರ ಎಲುಬುಗಳನ್ನು ಯಾಬೇಷಿನಲ್ಲಿದ್ದ ಪಿಚುಲ ವೃಕ್ಷದ ಕೆಳಗೆ ಸಮಾಧಿಮಾಡಿ, ಏಳು ದಿವಸ ಉಪವಾಸವನ್ನು ಆಚರಿಸಿದರು.


ಆದುದರಿಂದಲೇ ಆ ಸ್ಥಳಕ್ಕೆ ‘ಬೋಕೀಮ್’ ಎಂದು ಹೆಸರಿಟ್ಟು ಅಲ್ಲಿಯೇ ಸರ್ವೇಶ್ವರನಿಗೆ ಬಲಿಯನ್ನರ್ಪಿಸಿದರು.


ಸರ್ವೇಶ್ವರಸ್ವಾಮಿಯ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು ಇಸ್ರಯೇಲರಿಗೆ, “ನಾನು ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿ ನಿಮ್ಮ ಪೂರ್ವಜರಿಗೆ ಪ್ರಮಾಣಮಾಡಿದ ನಾಡಿಗೆ ಕರೆದುತಂದೆನು. ನಿಮ್ಮೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದೂ ಭಂಗಪಡಿಸುವುದಿಲ್ಲ ಎಂದು ಮಾತುಕೊಟ್ಟೆನು.


ಆಕೆ ಎಫ್ರಯಿಮ್ ಬೆಟ್ಟದ ಸೀಮೆಯಲ್ಲಿ ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿರುವ ‘ದೆಬೋರಳ ಖರ್ಜೂರ ವೃಕ್ಷ’ವೆಂದು ಹೆಸರುಗೊಂಡ ಮರದ ಕೆಳಗೆ ಆಸೀನಳಾಗಿರುತ್ತಿದ್ದಳು. ಇಸ್ರಯೇಲರು ನ್ಯಾಯತೀರ್ಪಿಗಾಗಿ ಆಕೆಯ ಬಳಿಗೆ ಬರುತ್ತಿದ್ದರು.


ನೀನು ಅಲ್ಲಿಂದ ಮುಂದೆ ನಡೆದು ತಾಬೋರಿನ ಹತ್ತಿರವಿರುವ ಏಲೋನ್ ವೃಕ್ಷದ ಬಳಿಗೆ ಬಂದಾಗ ದೇವದರ್ಶನಕ್ಕಾಗಿ ಬೇತೇಲಿಗೆ ಹೋಗುವ ಮೂವರು ಜನರು ನಿನಗೆದುರಾಗುವರು. ಅವರಲ್ಲೊಬ್ಬನು ಮೂರು ಹೋತಮರಿಗಳನ್ನೂ ಮತ್ತೊಬ್ಬನು ಮೂರು ರೊಟ್ಟಿಗಳನ್ನೂ ಇನ್ನೊಬ್ಬನು ದ್ರಾಕ್ಷಾರಸದ ಒಂದು ಬುದ್ದಲಿಯನ್ನೂ ಹೊತ್ತುಕೊಂಡು ಇರುವರು.


ಅವರಲ್ಲಿ ಅತೀ ಶೂರರಾದವರು ಹೋಗಿ ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ತೆಗೆದುಕೊಂಡು ಯಾಬೇಷಿಗೆ ಬಂದರು. ಅಲ್ಲಿ ಅವುಗಳನ್ನು ಏಲಾ ಮರದ ಕೆಳಗೆ ಸಮಾಧಿಮಾಡಿ ಏಳು ದಿನ ಉಪವಾಸ ಆಚರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು