Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 36:15 - ಕನ್ನಡ ಸತ್ಯವೇದವು C.L. Bible (BSI)

15 ಏಸಾವನ ವಂಶದ ಕುಲನಾಯಕರು: ಏಸಾವನ ಜೇಷ್ಠಪುತ್ರನಾದ ಎಲೀಫಜನಿಂದ ತೇಮಾನ, ಏಮಾರ, ಚೆಫೋ, ಕೆನೆಜ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಏಸಾವನ ಪುತ್ರರ ಮುಖಂಡರು ಯಾರೆಂದರೆ: ಏಸಾವನ ಚೊಚ್ಚಲ ಮಗನಾದ ಎಲೀಫಜನಿಂದ ಹುಟ್ಟಿದವರು ಯಾರೆಂದರೆ: ತೇಮಾನ್, ಓಮಾರ್, ಚೆಫೋ, ಕೆನೆಜ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಏಸಾವನ ವಂಶಸ್ಥರ ಕುಲಪತಿಗಳು. ಏಸಾವನ ಚೊಚ್ಚಲಮಗನಾದ ಎಲೀಫಜನಿಂದ ಹುಟ್ಟಿದವರು ಯಾರಂದರೆ - ತೇಮಾನ ಕುಲಪತಿ, ಓಮಾರಕುಲಪತಿ, ಚೆಫೋಕುಲಪತಿ, ಕೆನಜ್‍ಕುಲಪತಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಏಸಾವನ ವಂಶಸ್ಥರ ಕುಲಪತಿಗಳು: ಏಸಾವನ ಮೊದಲನೆ ಮಗನಾದ ಎಲೀಫಜ. ಎಲೀಫಜನಿಂದ ಬಂದವರು: ತೇಮಾನ್, ಓಮಾರ್, ಚೆಫೋ, ಕೆನೆಜ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಏಸಾವನ ಪುತ್ರರ ಮುಖಂಡರು ಯಾರೆಂದರೆ: ಏಸಾವನ ಚೊಚ್ಚಲ ಮಗನಾಗಿರುವ ಎಲೀಫಜನ ಮಕ್ಕಳಾದ ತೇಮಾನ್, ಓಮಾರ್, ಚೆಫೋ, ಕೆನಜ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 36:15
19 ತಿಳಿವುಗಳ ಹೋಲಿಕೆ  

ತೇಮಾನ್ ನಾಡೇ, ನಿನ್ನ ಶೂರರು ದಿಗ್ಭ್ರಾಂತರಾಗುವರು; ಏಸಾವಿನ ಪ್ರಾಂತ್ಯದಲ್ಲಿ ಎಲ್ಲರೂ ಹತರಾಗುವರು.


ಯೋಬನಿಗೆ ಒದಗಿದ್ದ ಆಪತ್ತಿನ ಸುದ್ದಿ ಆತನ ಮೂವರು ಮಿತ್ರರಿಗೆ ಮುಟ್ಟಿತು. ಅವರು ತಮ್ಮ ತಮ್ಮ ಊರುಗಳಿಂದ, ಅಂದರೆ, ತೇಮಾನ್ಯದಿಂದ ಎಲೀಫಜನೂ, ಶೂಹ್ಯದಿಂದ ಬಿಲ್ದದನು, ನಾಮಾಥ್ಯದಿಂದ ಚೋಫರನೂ ಹೊರಟುಬಂದರು. ಯೋಬನಿಗೆ ತಮ್ಮ ಸಂತಾಪವನ್ನು ವ್ಯಕ್ತಪಡಿಸಿ ಅವನನ್ನು ಸಾಂತ್ವನಗೊಳಿಸಬೇಕೆಂಬ ಒಂದೇ ಉದ್ದೇಶದಿಂದ ಅವರು ಆತನ ಬಳಿಗೆ ಬಂದರು.


ಬರುತಿಹನು ದೇವನು ಎದೋಮಿನಿಂದ ಆ ಪರಮಪಾವನಸ್ವಾಮಿ ಪಾರಾನ್ ಪರ್ವತದಿಂದ. ಆವರಿಸುವುದು ಆತನ ಪ್ರಭಾವ ಆಕಾಶಮಂಡಲವನು ತುಂಬಿಹುದು ಆತನ ಮಹಿಮೆ ಭೂಮಂಡಲವನು.


ಆದುದರಿಂದ ನಾನು ತೇಮಾನ್ ಪಟ್ಟಣದ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಬೊಚ್ರದ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು.


ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾನು ಎದೋಮಿನ ಮೇಲೆ ಕೈಯೆತ್ತಿ, ಅದರೊಳಗಿಂದ ಜನರನ್ನೂ ಪಶುಗಳನ್ನೂ ನಿರ್ಮೂಲಪಡಿಸಿ, ತೇಮೊನಿನಿಂದ ದೆದಾನಿನವರೆಗೂ ಅದನ್ನು ಹಾಳುಮಾಡಿ, ಪ್ರಜೆಗಳನ್ನು ಖಡ್ಗಕ್ಕೆ ಸಿಕ್ಕಿಸುವೆನು.


ಹೀಗಿರಲು, ಸರ್ವೇಶ್ವರನಾದ ನಾನು, ಎದೋಮಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ ತೇಮಾನ್ಯರನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ; ಕಾಡುಮೃಗಗಳು ಹಿಂಡಿನ ಮರಿಗಳನ್ನು ಖಂಡಿತವಾಗಿ ಎಳೆದುಕೊಂಡು ಹೋಗುವುವು. ಅವುಗಳ ನಾಶಕ್ಕಾಗಿ ಹುಲ್ಲುಗಾವಲು ನಿಶ್ಚಯವಾಗಿ ಕಳವಳಪಡುವುದು.


ಎದೋಮನ್ನು ಕುರಿತು ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: “ತೇಮಾನ್ ನಾಡಿಗಿದ್ದ ಬುದ್ಧಿ ಏನಾಯಿತು? ವಿವೇಕಿಗಳಿಗಿದ್ದ ಆಲೋಚನಾಶಕ್ತಿ ಅಳಿದುಹೋಯಿತೋ? ಅವರ ಜ್ಞಾನ ಮಾಯವಾಯಿತೋ?


ದುರುಳನೋರ್ವ ಮಹಾಗರ್ವದಿಂದ ಬಾಳುತ್ತಿದ್ದ I ಹುಲುಸಾಗಿ ಬೆಳೆದ ದೇವದಾರು ಮರದಂತಿದ್ದ II


ಅವರ ಸಂತಾನ ಅವರ ಸಮ್ಮುಖದಲ್ಲಿ ಸುಸ್ಥಿರವಾಗಿದೆ ಅವರ ಕುಟುಂಬ ಅವರ ಕಣ್ಮುಂದೆಯೇ ಅಚಲವಾಗಿದೆ.


ಆಗ ತೇಮಾನ್ಯನಾದ ಎಲೀಫಜನು ಹೀಗೆಂದನು:


ಯೋಬಾಬ ಮೃತನಾದ ಮೇಲೆ ತೇಮಾನೀಯರ ನಾಡಿನ ಹುಷಾಮ ಅರಸನಾದ.


ಕಳವಳಗೊಂಡರು ಎದೋಮ್ಯರ ಕುಲನಾಯಕರು ಗಡಗಡನೆ ನಡುಗುತ್ತಿಹರು ಮೋವಾಬ್ಯರ ಮುಖಂಡರು. ಕರಗಿ ನೀರಾಗಿ ಹೋದರು ಕಾನಾನ್ ನಾಡಿನವರು.


ಏಸಾವನ ಹೆಂಡತಿ ಒಹೊಲೀಬಾಮಳ ಸಂತಾನದಲ್ಲಿ ಹುಟ್ಟಿದ ಕುಲನಾಯಕರು ಯಾರೆಂದರೆ - ಯೆಗೂಷ್, ಯಳಾಮ ಮತ್ತು ಕೊರಹ. ಇವರೇ ಅನಾಹನ ಮಗಳೂ ಏಸಾವನ ಹೆಂಡತಿಯೂ ಆಗಿದ್ದ ಒಹೊಲೀಬಾಮಳ ಸಂತಾನದವರು.


ಏಸಾವನಿಗೆ ಆದಾಳು ಎಲೀಫಜನನ್ನು ಹೆತ್ತಳು. ಬಾಸೆಮತಳು ರೆಗೂವೇಲನನ್ನು ಹೆತ್ತಳು.


ಏಸಾವನ ಹೆಂಡತಿಯೂ ಸಿಬೆಯೋನನ ಮಗ ಅನಾಹನ ಮಗಳೂ ಆಗಿದ್ದ ಒಹೊಲೀಬಾಮಳಿಗೆ ಯೆಗೂಷ್, ಯಳಾಮ್ ಮತ್ತು ಕೋರಹ ಎಂಬ ಮೂರು ಮಕ್ಕಳಿದ್ದರು.


ಕೊರಹ, ಗತಾಮ, ಅಮಾಲೇಕ ಎಂಬ ಕುಲನಾಯಕರು ಹುಟ್ಟಿದರು. ಈ ಅಧಿಪತಿಗಳು ಎದೋಮ್ಯರ ನಾಡಿನಲ್ಲಿ ಆದಾಳ ಸಂತತಿಯಲ್ಲಿ ಹುಟ್ಟಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು