Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 36:24 - ಕನ್ನಡ ಸತ್ಯವೇದವು C.L. Bible (BSI)

24 ಸಿಬೆಯೋನನಿಗೆ ಅಯ್ಯಾ ಮತ್ತು ಅನಾಹ ಎಂಬ ಇಬ್ಬರು ಮಕ್ಕಳು. ಈ ಅನಾಹನೇ ತನ್ನ ತಂದೆ ಸಿಬೆಯೋನನ ಕತ್ತೆಗಳನ್ನು ಮೇಯಿಸುತ್ತಿದ್ದಾಗ ಕಾಡಿನಲ್ಲಿ ಬಿಸಿ ನೀರಿನ ಒರತೆಗಳನ್ನು ಕಂಡುಹಿಡಿದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಸಿಬೆಯೋನನ ಮಕ್ಕಳು: ಅಯ್ಯಾ ಮತ್ತು ಅನಾಹ ಎಂಬವರು. ಈ ಅನಾಹನೇ ತನ್ನ ತಂದೆಯಾದ ಸಿಬಿಯೋನನ ಕತ್ತೆಗಳನ್ನು ಮೇಯಿಸುತ್ತಿದ್ದಾಗ ಕಾಡಿನಲ್ಲಿ ಬಿಸಿ ನೀರಿನ ಒರತೆಗಳನ್ನು ಕಂಡುಕೊಂಡವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಸಿಬೆಯೋನನ ಮಕ್ಕಳು - ಅಯ್ಯಾ, ಅನಾಹ. ಈ ಅನಾಹನೇ ತನ್ನ ತಂದೆಯಾದ ಸಿಬೆಯೋನನ ಕತ್ತೆಗಳನ್ನು ಮೇಯಿಸುತ್ತಿದ್ದಾಗ ಕಾಡಿನಲ್ಲಿ ಬಿಸಿನೀರಿನ ಒರತೆಗಳನ್ನು ಕಂಡುಕೊಂಡವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಸಿಬೆಯೋನನಿಗೆ ಅಯ್ಯಾ ಮತ್ತು ಅನಾಹ ಎಂಬ ಇಬ್ಬರು ಗಂಡುಮಕ್ಕಳಿದ್ದರು. (ತನ್ನ ತಂದೆಯ ಕತ್ತೆಗಳನ್ನು ಮೇಯಿಸುತ್ತಿದ್ದಾಗ ಬಿಸಿನೀರಿನ ಒರತೆಗಳನ್ನು ಕಂಡುಕೊಂಡವನೇ ಅನಾಹ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಸಿಬೆಯೋನನ ಮಕ್ಕಳು: ಅಯ್ಯಾಹ ಮತ್ತು ಅನಾಹ ಎಂಬುವರು. ತನ್ನ ತಂದೆ ಸಿಬೆಯೋನನ ಕತ್ತೆಗಳನ್ನು ಕಾಯುವಾಗ ಕಾಡಿನಲ್ಲಿ ಬಿಸಿನೀರಿನ ಒರತೆಗಳನ್ನು ಕಂಡುಕೊಂಡವನೂ ಅರಣ್ಯದಲ್ಲಿ ಹೇಸರಗತ್ತೆಗಳನ್ನು ಕಂಡುಕೊಂಡವನು ಈ ಅನಾಹನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 36:24
12 ತಿಳಿವುಗಳ ಹೋಲಿಕೆ  

ಇದಲ್ಲದೆ, ಅವರು ರಥಾಶ್ವಗಳಿಗಾಗಿ ಹಾಗು ಸವಾರಿಕುದುರೆಗಳಿಗಾಗಿ ನೇಮಕವಾದಷ್ಟು ಜವೆಗೋದಿಯನ್ನೂ ಹುಲ್ಲನ್ನೂ ಕುದುರೆಗಳಿದ್ದ ಸ್ಥಳಕ್ಕೆ ತಂದು ಒಪ್ಪಿಸುತ್ತಿದ್ದರು.


ಯಾಜಕ ಚಾದೋಕ್, ಪ್ರವಾದಿ ನಾತಾನ್ ಹಾಗು ಯೆಹೋಯಾದಾವನ ಮಗ ಬೆನಾಯ ಇವರನ್ನೂ ಕೆರೇತ್ಯ-ಪೆಲೇತ್ಯರನ್ನೂ ಅರಸರು ಅವನ ಜೊತೆಯಲ್ಲಿ ಕಳುಹಿಸಿದ್ದಾರೆ. ಅವರು ಅವನನ್ನು ಅರಸನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿದ್ದಾರೆ.


ಆಗ ಯಾಜಕ ಚಾದೋಕ್, ಪ್ರವಾದಿ ನಾತಾನ್ ಹಾಗು ಯೆಹೋಯಾದಾವನ ಮಗ ಬೆನಾಯ ಎಂಬವರು ‘ಕೆರೇತ್ಯ’, ‘ಪೆಲೇತ್ಯ’ ಎಂಬ ಕಾವಲುದಂಡುಗಳನ್ನು ತೆಗೆದುಕೊಂಡು, ಸೊಲೊಮೋನನನ್ನು ಅರಸ ದಾವೀದನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿ, ಗೀಹೋನಿಗೆ ಕರೆದುಕೊಂಡು ಹೋದರು.


ಅಬ್ಷಾಲೋಮನು ದಾವೀದನ ಸೇವಕರ ಕೈಗೆ ಸಿಕ್ಕಿದನು. ಅದು ಹೇಗೆಂದರೆ, ಅವನು ಹತ್ತಿದ್ದ ಹೇಸರಗತ್ತೆ ಒಂದು ದೊಡ್ಡ ಓಕ್ ಮರದ ಕೆಳಗೆ ಹಾದುಹೋಗುವಾಗ ಅವನ ತಲೆ ನಿಬಿಡವಾದ ಅದರ ಕೊಂಬೆಗಳಲ್ಲಿ ಸಿಕ್ಕಿಕೊಂಡಿತು; ಆ ಹೇಸರಗತ್ತೆ ಅವನ ಕೆಳಗಿನಿಂದ ಓಡಿಹೋಯಿತು. ಅವನು ಭೂಮಿಗೂ ಆಕಾಶಕ್ಕೂ ಮಧ್ಯೆ ನೇತಾಡಬೇಕಾಯಿತು.


ಅಬ್ಷಾಲೋಮನ ಆಳುಗಳು ಅವನ ಆಜ್ಞೆಯಂತೆ ಅಮ್ನೋನನನ್ನು ಕೊಂದರು. ರಾಜಪುತ್ರರೆಲ್ಲರೂ ತಮ್ಮ ತಮ್ಮ ಹೇಸರಗತ್ತೆಗಳನ್ನು ಹತ್ತಿ ಓಡಿಹೋದರು.


(ತತ್ಪೂರ್ವದಲ್ಲಿ ಏಮಿಯರು ಆ ನಾಡಿನಲ್ಲಿ ವಾಸವಾಗಿದ್ದರು. ಅವರು ಬಲಿಷ್ಠರೂ ಬಹುಮಂದಿಯೂ ಅನಾಕಿಮರಂತೆ ಎತ್ತರವಾದವರೂ ಆಗಿದ್ದರು.


“ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು. ನಿಮ್ಮ ಜಾನುವಾರಗಳಿಂದ ಬೆರಕೆ ತಳಿಯನ್ನು ಪಡೆಯಲು ಅವಕಾಶವೀಯಬಾರದು; ನಿಮ್ಮ ಹೊಲದಲ್ಲಿ ಇಬ್ಬಗೆಯ ಬೀಜವನ್ನು ಬಿತ್ತಬಾರದು; ನಾರು ಮತ್ತು ಉಣ್ಣೆಯಿಂದ ನೇಯ್ದ ಬಟ್ಟೆಯನ್ನು ಹಾಕಿಕೊಳ್ಳಬಾರದು.


ನಾಡಿನ ಜನರಿಗೆ ತಗಲುವಂಥ ವ್ಯಾಧಿಯೇ ಕುದುರೆ, ಹೇಸರಗತ್ತೆ, ಒಂಟೆ, ಕತ್ತೆ ಮುಂತಾದ ಪಾಳೆಯದಲ್ಲಿನ ಎಲ್ಲ ಪಶುಪ್ರಾಣಿಗಳಿಗೂ ತಗಲುವುದು.


ಏಸಾವನು ಕಾನಾನ್ಯರ ಮಹಿಳೆಯರಲ್ಲಿ ಹಿತ್ತಿಯನಾದ ಏಲೋನನ ಮಗಳಾದ ಆದಾಳನ್ನು, ಹಿವ್ವಿಯನಾದ ಸಿಬೆಯೋನನ ಮಗಳಾದ ಅನಾಹಳ ಮಗಳು ಒಹೊಲೀಬಾಮಳನ್ನು ಮತ್ತು


ಶೋಬಾಲನ ಮಕ್ಕಳು - ಅಲ್ವಾನ್, ಮಾನಹತ್, ಗೇಬಾಲ್,ಶೆಫೋ ಮತ್ತು ಓನಾಮ್ ಎಂಬುವರು.


ಅನಾಹನ ಮಕ್ಕಳು ದೀಶೋನ್ ಮತ್ತು ಅನಾಹನ ಮಗಳಾದ ಒಹೊಲೀಬಾಮ.


ಶಾರೋನಿನಲ್ಲಿ ಮೇಯುವ ದನಗಳ ಮೇಲೆ‍ ಶಾರೋನ್ಯನಾದ ಶಿಟ್ರೈ; ಕಣಿವೆಗಳಲ್ಲಿ ಮೇಯುವ ದನಗಳ ಮೇಲೆ ಅದ್ಲೈಯ ಮಗನಾದ ಶಾಫಾಟ್;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು