Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:13 - ಕನ್ನಡ ಸತ್ಯವೇದವು C.L. Bible (BSI)

13 ಯಕೋಬನು ಜೋಸೆಫನಿಗೆ, “ನಿನ್ನ ಅಣ್ಣಂದಿರು ಶೆಕೆಮಿನಲ್ಲಿ ಆಡುಕುರಿಗಳನ್ನು ಮೇಯಿಸುತ್ತಿದ್ದಾರೆ, ಅಲ್ಲವೆ? ಅವರ ಬಳಿಗೆ ನಿನ್ನನ್ನು ಕಳಿಸಬೇಕೆಂದಿದ್ದೇನೆ,” ಎನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಅಣ್ಣಂದಿರು ಶೆಕೆಮಿನಲ್ಲಿ ಆಡುಕುರಿಗಳನ್ನು ಮೇಯಿಸುತ್ತಿದ್ದಾರಲ್ಲಾ ಅವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೆ, ಹೋಗು” ಎಂದು ಹೇಳಿದನು. ಅದಕ್ಕೆ ಅವನು, “ಆಗಲಿ, ಹೋಗುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೋಸೇಫನಿಗೆ - ನಿನ್ನ ಅಣ್ಣಂದಿರು ಶೆಕೆವಿುನಲ್ಲಿ ಆಡುಕುರಿಗಳನ್ನು ಮೇಯಿಸುತ್ತಿದ್ದಾರಲ್ಲಾ; ಅವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೆ ಬಾ ಎಂದು ಹೇಳಲು ಅವನು - ಇಗೋ ಇದ್ದೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಇಸ್ರೇಲನು ಯೋಸೇಫನಿಗೆ, “ಶೆಕೆಮಿಗೆ ಹೋಗು. ನಿನ್ನ ಅಣ್ಣಂದಿರು ಅಲ್ಲಿ ನನ್ನ ಆಡುಕುರಿಗಳನ್ನು ಮೇಯಿಸುತ್ತಿದ್ದಾರೆ” ಎಂದು ಹೇಳಿದನು. ಯೋಸೇಫನು, “ಸರಿ, ಹೋಗುವೆನು” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದ್ದರಿಂದ ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಸಹೋದರರು ಶೆಕೆಮಿನಲ್ಲಿ ಮಂದೆಯನ್ನು ಮೇಯಿಸುತ್ತಾರಲ್ಲಾ. ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ ಹೋಗು,” ಎಂದನು. ಅದಕ್ಕೆ ಅವನು, “ಆಗಲಿ ಹೋಗುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:13
13 ತಿಳಿವುಗಳ ಹೋಲಿಕೆ  

ಕಡೆಗೆ ತೋಟದ ಯಜಮಾನನು, ‘ಏನುಮಾಡಲಿ? ನನ್ನ ಮುದ್ದುಮಗನನ್ನೇ ಕಳುಹಿಸುತ್ತೇನೆ; ಬಹುಶಃ ಅವನಿಗಾದರೂ ಮರ್ಯಾದೆಕೊಟ್ಟಾರು,’ ಎಂದುಕೊಂಡ.


“ಗಮನಿಸಿರಿ, ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಸೂಕ್ಷ್ಮಬುದ್ಧಿಯುಳ್ಳವರೂ ಪಾರಿವಾಳಗಳಂತೆ ಸರಳಜೀವಿಗಳೂ ಆಗಿರಿ.


ಆದರೆ, ಏಲಿ, “ಮಗನೇ, ಸಮುವೇಲನೇ”, ಎಂದು ಕರೆದಾಗ ಅವನು, “ಇಗೋ, ಇದ್ದೇನೆ,” ಎಂದನು.


ಸರ್ವೇಶ್ವರ ಸಮುವೇಲನನ್ನು ಮೂರನೆಯ ಸಾರಿ ಕರೆದರು. ಅವನು ತಟ್ಟನೆ ಏಲಿಯ ಹತ್ತಿರ ಓಡಿ, “ಇಗೋ, ಬಂದಿದ್ದೇನೆ, ನನ್ನನ್ನು ಕರೆದಿರಲ್ಲಾ,” ಎಂದನು. ಹುಡುಗನನ್ನು ಕರೆದವರು ಸರ್ವೇಶ್ವರನೇ ಎಂದು ಏಲಿಗೆ ತಿಳಿಯಿತು.


ಯಕೋಬನು ತಂದೆಯ ಬಳಿಗೆ ಹೋಗಿ, “ಅಪ್ಪಾ” ಎಂದು ಕರೆದನು. ತಂದೆಯು, “ಏನು ಮಗನೇ, ನೀನು ಯಾವ ಮಗನು?” ಎಂದು ಕೇಳಿದನು.


ಇಸಾಕನಿಗೆ ಮುಪ್ಪಿನಿಂದ ಕಣ್ಣು ಕಾಣಲಾರದಷ್ಟು ಮಬ್ಬಾಯಿತು. ಅವನು ತನ್ನ ಹಿರಿಯ ಮಗ ಏಸಾವನನ್ನು ಕರೆದು, "ಮಗನೇ,” ಎನ್ನಲು ಏಸಾವನು, “ಇಗೋ, ಇಲ್ಲೇ ಇದ್ದೇನೆ,” ಎಂದನು.


ಈ ಘಟನೆಗಳಾದ ಬಳಿಕ ದೇವರು ಅಬ್ರಹಾಮನನ್ನು ಪರೀಕ್ಷಿಸುವುದಕ್ಕೋಸ್ಕರ, “ಅಬ್ರಹಾಮನೇ,” ಎಂದು ಕರೆದರು. ಅವನು “ಇಗೋ, ಸಿದ್ಧನಿದ್ದೇನೆ” ಎಂದನು.


ಯಕೋಬನು ಮೆಸಪೊಟೇಮಿಯಾದಿಂದ ಹಿಂದಿರುಗಿ ಬಂದು ಕಾನಾನ್ ನಾಡಿನ ಶೆಕೆಮ್ ಪಟ್ಟಣಕ್ಕೆ ಸುರಕ್ಷಿತವಾಗಿ ಸೇರಿದನು. ಆ ಪಟ್ಟಣದ ಮುಂದೆಯೇ ತನ್ನ ಗುಡಾರಗಳನ್ನು ಹಾಕಿಸಿಕೊಂಡನು.


ಒಮ್ಮೆ ಜೋಸೆಫನ ಅಣ್ಣಂದಿರು ತಂದೆಯ ಆಡುಕುರಿಗಳನ್ನು ಮೇಯಿಸಲು ಶೆಕೆಮಿಗೆ ಹೋಗಿದ್ದರು.


ಆದರೆ ಸರ್ವೇಶ್ವರನ ದೂತನು ಆಕಾಶದಿಂದ, "ಅಬ್ರಹಾಮನೇ, ಹೇ ಅಬ್ರಹಾಮನೇ" ಎಂದು ಕರೆದನು. ಅದಕ್ಕೆ ಅಬ್ರಹಾಮನು, “ಇಗೋ ಸಿದ್ಧನಿದ್ದೇನೆ” ಎಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು