Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:14 - ಕನ್ನಡ ಸತ್ಯವೇದವು C.L. Bible (BSI)

14 ಅವನು, “ಇಗೋ ಸಿದ್ಧನಿದ್ದೇನೆ,” ಎಂದ. ಯಕೋಬನು ಅವನಿಗೆ, "ನೀನು ಹೋಗಿ ನಿನ್ನ ಅಣ್ಣಂದಿರ ಹಾಗೂ ಆಡುಕುರಿಗಳ ಯೋಗಕ್ಷೇಮವನ್ನು ವಿಚಾರಿಸಿಕೊಂಡು ಬಾ,” ಎಂದು ಅಪ್ಪಣೆಕೊಟ್ಟು ಅವನನ್ನು ಹೆಬ್ರೋನ್ ಕಣಿವೆಯಿಂದ ಕಳಿಸಿಕೊಟ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇಸ್ರಾಯೇಲ್ಯನು ಅವನಿಗೆ, “ನೀನು ಶೆಕೆಮಿಗೆ ಹೋಗಿ ನಿನ್ನ ಅಣ್ಣಂದಿರ ಯೋಗ ಕ್ಷೇಮವನ್ನೂ, ಆಡುಕುರಿಗಳ ಹಿಂಡಿನ ಯೋಗ ಕ್ಷೇಮವನ್ನೂ ವಿಚಾರಿಸಿಕೊಂಡು ಬಾ” ಎಂದು ಅಪ್ಪಣೆ ಕೊಟ್ಟು, ಅವನನ್ನು ಹೆಬ್ರೋನ್ ಕಣಿವೆಯಿಂದ ಕಳುಹಿಸಲು ಯೋಸೇಫನು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇಸ್ರಾಯೇಲನು ಅವನಿಗೆ - ನೀನು ಹೋಗಿ ನಿನ್ನ ಅಣ್ಣಂದಿರ ಯೋಗಕ್ಷೇಮವನ್ನೂ ಆಡುಕುರಿಗಳ ಯೋಗಕ್ಷೇಮವನ್ನೂ ವಿಚಾರಿಸಿಕೊಂಡು ಬಾ ಎಂದು ಅಪ್ಪಣೆಕೊಟ್ಟು ಅವನನ್ನು ಹೆಬ್ರೋನಿರುವ ತಗ್ಗಿನಿಂದ ಕಳುಹಿಸಲು ಯೋಸೇಫನು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಇಸ್ರೇಲನು, “ನಿನ್ನ ಅಣ್ಣಂದಿರ ಮತ್ತು ಆಡುಕುರಿಗಳ ಕ್ಷೇಮವನ್ನು ವಿಚಾರಿಸಿಕೊಂಡು ಬಂದು ನನಗೆ ತಿಳಿಸು” ಎಂದು ಹೇಳಿ ಅವನನ್ನು ಹೆಬ್ರೋನಿನ ಕಣಿವೆಯಿಂದ ಶೆಕೆಮಿಗೆ ಕಳುಹಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯಾಕೋಬನು ಅವನಿಗೆ, “ಹೋಗಿ ನಿನ್ನ ಸಹೋದರರ ಕ್ಷೇಮಸಮಾಚಾರವನ್ನೂ, ಮಂದೆಗಳ ಕ್ಷೇಮಸಮಾಚಾರವನ್ನೂ ತಿಳಿದುಕೊಂಡು ಬಂದು ನನಗೆ ತಿಳಿಸು,” ಎಂದು ಹೇಳಿ ಹೆಬ್ರೋನ್ ಕಣಿವೆಯಿಂದ ಕಳುಹಿಸಿದನು. ಯೋಸೇಫನು ಶೆಕೆಮಿಗೆ ಬಂದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:14
22 ತಿಳಿವುಗಳ ಹೋಲಿಕೆ  

ಯಕೋಬನು ತನ್ನ ತಂದೆ ಇಸಾಕನ ಬಳಿಗೆ ಮಮ್ರೆಗೆ ಬಂದನು. ಮಮ್ರೆಯು ಹೆಬ್ರೋನೆಂಬ ಕಿರ್ಯತರ್ಬಕ್ಕೆ ಸೇರಿದುದು. ಅದೇ ಅಬ್ರಹಾಮ್ ಹಾಗು ಇಸಾಕನು ಪರದೇಶಸ್ಥರಾಗಿ ವಾಸವಾಗಿದ್ದ ಸ್ಥಳ.


“ಇಂದಾದರೂ ನೀನು ಶಾಂತಿಮಾರ್ಗವನ್ನು ಅರಿತುಕೊಂಡಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು. ಆದರೆ ಅದು ಈಗ ನಿನ್ನ ಕಣ್ಣಿಗೆ ಮರೆಯಾಗಿದೆ.


ಅಕ್ರಮಿಗಳ ದುರ್ಗತಿ ದುರ್ಮಾರ್ಗಿಗಳಿಗೆ I ಶುಭವಾಗಲಿ ಪ್ರಭೂ, ಇಸ್ರಯೇಲರಿಗೆ II


ನಾನು ಯಾವ ನಗರಕ್ಕೆ ನಿಮ್ಮನ್ನು ಸಾಗಿಸಿದ್ದೇನೋ ಅದರ ಕ್ಷೇಮವನ್ನು ಹಾರೈಸಿ, ಅದಕ್ಕಾಗಿ ಸರ್ವೇಶ್ವರನಾದ ನನ್ನನ್ನು ಪ್ರಾರ್ಥಿಸಿರಿ. ಅದರ ಕ್ಷೇಮವೇ ನಿಮ್ಮ ಕ್ಷೇಮ.


ಈ ಇಬ್ಬರನ್ನೂ ವಧಿಸಿದ ಪಾಪವು ಯೋವಾಬನ ತಲೆಯ ಮೇಲೂ ಅವನ ಸಂತಾನದವರ ತಲೆಯ ಮೇಲೂ ಇರಲಿ; ಆದರೆ ದಾವೀದನಿಗೂ ಅವನ ಸಿಂಹಾಸನವನ್ನೇರುವ ಸಂತಾನದವರಿಗೂ ಸರ್ವೇಶ್ವರನಿಂದ ನಿತ್ಯಸೌಭಾಗ್ಯ ದೊರಕಲಿ!” ಎಂದನು.


ಅರಸನು ಅವನನ್ನು, “ಆ ಯುವಕ ಅಬ್ಷಾಲೋಮನು ಸುರಕ್ಷಿತನಾಗಿದ್ದಾನೆಯೋ?’ ಎಂದು ಕೇಳಿದನು. ಅವನು, “ನನ್ನ ಒಡೆಯರಾದ ಅರಸರ ಶತ್ರುಗಳಿಗೂ, ಅವರಿಗೆ ಕೇಡು ಮಾಡುವುದಕ್ಕೆ ನಿಂತವರೆಲ್ಲರಿಗೂ ಆ ಯುವಕನಿಗಾದ ಗತಿಯೇ ಆಗಲಿ!” ಎಂದು ಉತ್ತರಕೊಟ್ಟನು.


ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬನನ್ನು ಆಶೀರ್ವದಿಸಿ, ಹೆಬ್ರೋನ್ ನಗರವನ್ನು ಅವನಿಗೆ ಸೊತ್ತಾಗಿ ಕೊಟ್ಟನು.


ಅವರು ಬೆಟ್ಟವನ್ನು ಹತ್ತಿ ನೆಗೆಬನ್ನು ದಾಟಿ, ಹೆಬ್ರೋನಿಗೆ ಬಂದರು. ಅಲ್ಲಿ ‘ಅನಕಿಮ್’ ವಂಶಸ್ಥರಾದ ಅಹೀಮನ್, ಶೇಷೈ, ತಲ್ಮೈ ಎಂಬವರು ಇದ್ದರು. (ಹೆಬ್ರೋನ್ ಪಟ್ಟಣ ಈಜಿಪ್ಟ್ ದೇಶದಲ್ಲಿರುವ ಚೋಮ್ ಪಟ್ಟಣಕ್ಕಿಂತ ಏಳು ವರ್ಷ ಮೊದಲೆ ಕಟ್ಟಲ್ಪಟ್ಟಿತ್ತು)


ಜೋಸೆಫನು, “ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ; ಆದರೆ ದೇವರು, ಫರೋಹ ಆದ ನಿಮಗೆ ತೃಪ್ತಿಕರವಾದ ಉತ್ತರಕೊಡಬಲ್ಲರು,” ಎಂದು ಹೇಳಿದ.


“ಅವರು ಆರೋಗ್ಯವೇ?” ಎಂದು ಕೇಳಲು ಅವರು, “ಹೌದು ಆರೋಗ್ಯ; ಅಗೋ, ಅವರ ಮಗಳು ರಾಖೇಲಳು ಕುರಿಗಳ ಸಂಗಡ ಬರುತ್ತಿದ್ದಾಳೆ,” ಎಂದರು.


ಇಷ್ಟು ವರ್ಷಗಳಾದ ಮೇಲೆ ಆಕೆ ಕಾನಾನ್ ನಾಡಿನ ಹೆಬ್ರೋನೆಂಬ ಕಿರ್ಯತರ್ಬದಲ್ಲಿ ಕಾಲವಾದಳು. ಅಬ್ರಹಾಮನು ಅಲ್ಲಿಗೆ ಬಂದು ಅವಳಿಗಾಗಿ ಕಣ್ಣೀರಿಟ್ಟು ಗೋಳಾಡಿದನು.


ಅಬ್ರಾಮನು ಅಲ್ಲಿಂದ ಹೊರಟು ಅಲ್ಲಲ್ಲಿ ಗುಡಾರ ಹಾಕಿಸಿಕೊಳ್ಳುತ್ತಾ, ಹೆಬ್ರೋನಿನಲ್ಲಿರುವ ಮಮ್ರೆವೃಕ್ಷಗಳ ತೋಪಿಗೆ ಬಂದು ವಾಸಮಾಡಿದನು. ಸರ್ವೇಶ್ವರ ಸ್ವಾಮಿಗೆ ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.


ಅದರ ಹಿಂದಿನ ಹೆಸರು, ‘ಕಿರ್ಯತ್ ಅರ್ಬ’ ಎಂದು. ಅರ್ಬ ಎಂಬವನು ಈ ಎತ್ತರದ ವ್ಯಕ್ತಿಗಳಲ್ಲಿ ಪ್ರಮುಖನು. ಯುದ್ಧವು ನಿಂತಿತು. ನಾಡಿನಲ್ಲಿ ಶಾಂತಿಸಮಾಧಾನ ನೆಲೆಸಿತು.


ಇದಾದ ಮೇಲೆ ಹೆಬ್ರೋನೆಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಜಮೀನಿನಲ್ಲಿರುವ ಗವಿಯೊಳಗೆ ಸಮಾಧಿಮಾಡಿದನು.


ಜೋಸೆಫನು ಹೊರಟ. ಶೆಕೆಮ್‍ಗೆ ಬಂದು ಅಡವಿಯೊಳಗೆ ತಿರುಗಾಡುತ್ತಿರುವಾಗ ಒಬ್ಬ ಮನುಷ್ಯನನ್ನು ಕಂಡ. ಆ ಮನುಷ್ಯ, “ಏನು ಹುಡುಕುತ್ತಾ ಇದ್ದೀಯಾ?” ಎಂದು ವಿಚಾರಿಸಿದ.


ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನು ಇಸ್ರಯೇಲಿನ ದೇವರಾದ ಸರ್ವೇಶ್ವರನನ್ನು ಸಂಪೂರ್ಣವಾಗಿ ಶ್ರದ್ಧೆಯಿಂದ ಅನುಸರಿಸಿದ್ದರಿಂದ ಹೆಬ್ರೋನ್ ಅವನಿಗೆ ಸೊತ್ತಾಗಿ ಸಿಕ್ಕಿತು.ಅದು ಇಂದಿನವರೆಗೂ ಅವನದೇ ಆಗಿದೆ.


‘ಕಿರ್ಯತರ್ಬ’ ಎಂದು ಈ ಮುಂದೆ ಹೆಸರುಗೊಂಡಿದ್ದ ಹೆಬ್ರೋನಿಗೆ ಹೋಗಿ ಅಲ್ಲಿದ್ದ ಕಾನಾನ್ಯರ ಮೇಲೆ ದಾಳಿಮಾಡಿ ಅವರಲ್ಲಿ ಶೇಷೈ, ಅಹೀಮನ್, ತಲ್ಮೈ ಎಂಬವರನ್ನು ಸೋಲಿಸಿದರು.


ಊರೀಯನು ಬಂದಾಗ ದಾವೀದನು, “ಯೋವಾಬನೂ ಸೈನ್ಯದವರೂ ಹೇಗಿರುತ್ತಾರೆ? ಯುದ್ಧವು ಹೇಗೆ ನಡೆಯುತ್ತಿದೆ?” ಎಂದು ವಿಚಾರಿಸಿದನು.


ಅವನು ಅವರ ಯೋಗಕ್ಷೇಮವನ್ನು ವಿಚಾರಿಸಿದನು. ಬಳಿಕ, “ನೀವು ಹೇಳಿದ ಮುಪ್ಪುವಯಸ್ಸಿನ ನಿಮ್ಮ ತಂದೆ ಕ್ಷೇಮವೋ? ಇನ್ನು ಬದುಕಿದ್ದಾನೋ?" ಎಂದು ಕೇಳಲು


ಅಷ್ಟರಲ್ಲಿ ದಾವೀದನು ತಾನು ತಂದವುಗಳನ್ನೂ ಆಹಾರಪದಾರ್ಥಗಳನ್ನೂ ಕಾಯುವವನ ಬಳಿಯಲ್ಲಿಟ್ಟು ರಣರಂಗಕ್ಕೆ ಓಡಿದನು. ತನ್ನ ಸಹೋದರರ ಯೋಗಕ್ಷೇಮ ವಿಚಾರಿಸಿದನು.


ಎಸ್ತೇರಳ ಯೋಗಕ್ಷೇಮವನ್ನು ವಿಚಾರಿಸಿಕೊಳ್ಳಲು ಮೊರ್ದೆಕೈ ಪ್ರತಿದಿನ ಅಂತಃಪುರದ ಅಂಗಳದ ಬಳಿ ಬಂದು ಹೋಗುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು