Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:15 - ಕನ್ನಡ ಸತ್ಯವೇದವು C.L. Bible (BSI)

15 ಜೋಸೆಫನು ಹೊರಟ. ಶೆಕೆಮ್‍ಗೆ ಬಂದು ಅಡವಿಯೊಳಗೆ ತಿರುಗಾಡುತ್ತಿರುವಾಗ ಒಬ್ಬ ಮನುಷ್ಯನನ್ನು ಕಂಡ. ಆ ಮನುಷ್ಯ, “ಏನು ಹುಡುಕುತ್ತಾ ಇದ್ದೀಯಾ?” ಎಂದು ವಿಚಾರಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವನು ಶೆಕೆಮಿಗೆ ಬಂದು ಅಲ್ಲಿ ಅಡವಿಯೊಳಗೆ ತಿರುಗಾಡುತ್ತಿರುವಾಗ ಒಬ್ಬ ಮನುಷ್ಯನು ಅವನನ್ನು ಕಂಡು, “ಏನು ಹುಡುಕುತ್ತೀ?” ಎಂದು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವನು ಶೆಕೆವಿುಗೆ ಬಂದು ಅಲ್ಲಿ ಅಡವಿಯೊಳಗೆ ತಿರುಗಾಡುತ್ತಿರುವಾಗ ಒಬ್ಬ ಮನುಷ್ಯನು ಅವನನ್ನು ಕಂಡು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಶೆಕೆಮಿನಲ್ಲಿ ದಾರಿತಪ್ಪಿ ಯೋಸೇಫನು ಹೊಲಗಳಲ್ಲಿ ಅಲೆದಾಡುತ್ತಿರಲು ಅವನನ್ನು ಕಂಡ ಒಬ್ಬನು, “ಏನು ಹುಡುಕುತ್ತಿರುವೆ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಒಬ್ಬಾನೊಬ್ಬ ಮನುಷ್ಯನು ಯೋಸೇಫನು ಹೊಲದಲ್ಲಿ ಅಲೆದಾಡುವುದನ್ನು ಕಂಡು ಅವನಿಗೆ, “ನೀನು ಏನು ಹುಡುಕುತ್ತಿದ್ದೀ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:15
10 ತಿಳಿವುಗಳ ಹೋಲಿಕೆ  

ಅದೇ ಕ್ಷಣದಲ್ಲಿ ಸೀಸೆರನನ್ನು ಹಿಂದಟ್ಟುತ್ತಿದ್ದ ಬಾರಾಕನು ಅಲ್ಲಿಗೆ ಬಂದನು. ಯಾಯೇಲಳು ಹೊರಗೆ ಹೋಗಿ ಅವನನ್ನು ಎದುರುಗೊಂಡು, “ಬಾ, ನೀನು ಹುಡುಕುವ ಮನುಷ್ಯನನ್ನು ತೋರಿಸುತ್ತೇನೆ,” ಎಂದು ಹೇಳಲು ಅವನು ಒಳಗೆ ಹೋಗಿ ಸೀಸೆರನು ಸತ್ತುಬಿದ್ದದ್ದನ್ನು ಕಂಡನು. ಅವನ ತಲೆಯಲ್ಲಿ ಗೂಟವು ಜಡಿದಿತ್ತು.


ಯೇಸು, “ಏಕಮ್ಮಾ ಅಳುತ್ತಿರುವೇ? ಏನನ್ನು ಹುಡುಕುತ್ತಿರುವೇ?’ ಎಂದು ಕೇಳಿದಾಗಲೂ ಮರಿಯಳು ಅವರು ತೋಟಗಾರನೆಂದು ಭಾವಿಸಿ, “ಅಯ್ಯಾ, ನೀವೇನಾದರೂ ಅವರನ್ನು ಕೊಂಡೊಯ್ದಿದ್ದರೆ ಎಲ್ಲಿ ಇಟ್ಟಿರುವಿರಿ, ಹೇಳಿ; ನಾನು ತೆಗೆದುಕೊಂಡು ಹೋಗುತ್ತೇನೆ,” ಎಂದು ಹೇಳಿದಳು.


ಯೇಸು ಮತ್ತೊಮ್ಮೆ, “ನೀವು ಯಾರನ್ನು ಹುಡುಕುತ್ತಿದ್ದೀರಿ?” ಎಂದು ಕೇಳಲು, “ನಜರೇತಿನ ಯೇಸುವನ್ನು,” ಎಂದು ಉತ್ತರಬಂದಿತು.


ಯೇಸು ಸ್ವಾಮಿಗೆ ತಮಗೆ ಸಂಭವಿಸಲಿರುವುದೆಲ್ಲವೂ ತಿಳಿದಿತ್ತು. ಎಂದೇ ಮುಂದೆ ಬಂದು, “ನೀವು ಯಾರನ್ನು ಹುಡುಕುತ್ತಿದ್ದೀರಿ?” ಎಂದು ಕೇಳಿದರು.


ಅಷ್ಟರಲ್ಲಿ ಹಿಂದಿರುಗಿ ಬಂದ ಶಿಷ್ಯರು ಯೇಸು ಆ ಮಹಿಳೆಯೊಡನೆ ಮಾತನಾಡುತ್ತಿರುವುದನ್ನು ಕಂಡು ಆಶ್ಚರ್ಯಪಟ್ಟರು. ಆದರೆ, “ಏನು ಬೇಕು?” ಎಂದು ಆಕೆಯನ್ನಾಗಲಿ. “ಆಕೆಯೊಡನೆ ಏಕೆ ಮಾತನಾಡುತ್ತಿದ್ದೀರಿ?” ಎಂದು ಯೇಸುವನ್ನಾಗಲಿ ಅವರು ಕೇಳಲಿಲ್ಲ.


ಯೇಸು ಸ್ವಾಮಿ, ತಮ್ಮನ್ನು ಹಿಂಬಾಲಿಸಿ ಬರುತ್ತಿರುವುದನ್ನು ನೋಡಿ, “ನಿಮಗೆ ಏನು ಬೇಕು?” ಎಂದು ಕೇಳಿದರು. ಅವರು, “ರಬ್ಬೀ, ತಾವು ವಾಸಮಾಡುವುದೆಲ್ಲಿ?” ಎಂದು ವಿಚಾರಿಸಿದರು. (’ರಬ್ಬಿ’ ಎಂದರೆ ಗುರುದೇವ ಎಂದು ಅರ್ಥ.)


ಆಗ ಎಲೀಷನು, “ನೀವು ಹೋಗಬೇಕೆಂದಿದ್ದ ಪಟ್ಟಣವೂ ದಾರಿಯೂ ಇದಲ್ಲ; ನನ್ನ ಜೊತೆಯಲ್ಲೇ ಬನ್ನಿ, ನೀವು ಹುಡುಕುತ್ತಿರುವ ವ್ಯಕ್ತಿಯ ಬಳಿಗೆ ನಿಮ್ಮನ್ನು ಕರೆದುಕೊಂಡು ಹೋಗುತ್ತೇನೆ,” ಎಂದು ಹೇಳಿ ಅವರನ್ನು ಸಮಾರಿಯಕ್ಕೆ ಕರೆದುಕೊಂಡು ಹೋದನು.


ಮಾರನೆಯ ದಿನ ಬೆಳಿಗ್ಗೆ ಅಬ್ರಹಾಮನು ಹಾಗರಳಿಗೆ ಬುತ್ತಿಯನ್ನೂ ನೀರಿನ ತಿತ್ತಿಯನ್ನೂ ಕೊಟ್ಟು, ಹೆಗಲ ಮೇಲೆ ಮಗುವನ್ನು ಕೂರಿಸಿ ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು.


ಅವನು, “ಇಗೋ ಸಿದ್ಧನಿದ್ದೇನೆ,” ಎಂದ. ಯಕೋಬನು ಅವನಿಗೆ, "ನೀನು ಹೋಗಿ ನಿನ್ನ ಅಣ್ಣಂದಿರ ಹಾಗೂ ಆಡುಕುರಿಗಳ ಯೋಗಕ್ಷೇಮವನ್ನು ವಿಚಾರಿಸಿಕೊಂಡು ಬಾ,” ಎಂದು ಅಪ್ಪಣೆಕೊಟ್ಟು ಅವನನ್ನು ಹೆಬ್ರೋನ್ ಕಣಿವೆಯಿಂದ ಕಳಿಸಿಕೊಟ್ಟ.


ಜೋಸೆಫನು, “ನನ್ನ ಅಣ್ಣಂದಿರನ್ನು ಹುಡುಕುತ್ತಾ ಇದ್ದೇನೆ; ಅವರು ಆಡುಕುರಿಗಳನ್ನು ಎಲ್ಲಿ ಮೇಯಿಸುತ್ತಿದ್ದಾರೆ, ದಯವಿಟ್ಟು ಹೇಳು” ಎಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು