Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:24 - ಕನ್ನಡ ಸತ್ಯವೇದವು C.L. Bible (BSI)

24 ಅವನನ್ನು ಹಿಡಿದು ಬಾವಿಯೊಳಗೆ ಹಾಕಿದರು. ಆ ಬಾವಿ ನೀರಿಲ್ಲದೆ ಬರಿದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವನನ್ನು ಹಿಡಿದು ಆ ಗುಂಡಿಯೊಳಗೆ ಹಾಕಿದರು. ಆ ಗುಂಡಿ ನೀರಿಲ್ಲದೆ ಬರಿದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವನನ್ನು ಹಿಡಿದು ಆ ಗುಂಡಿಯೊಳಗೆ ಹಾಕಿದರು. ಆ ಗುಂಡಿ ನೀರಿಲ್ಲದೆ ಬರಿದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನೀರಿಲ್ಲದ ಒಂದು ಬಾವಿಯೊಳಗೆ ತಳ್ಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅವನನ್ನು ತೆಗೆದುಕೊಂಡು ಗುಂಡಿಯಲ್ಲಿ ಹಾಕಿದರು. ಆ ಗುಂಡಿ ನೀರಿಲ್ಲದೆ ಬರಿದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:24
12 ತಿಳಿವುಗಳ ಹೋಲಿಕೆ  

ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿದ್ದ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದ ಇಳಿಸಿ ಅಲ್ಲೇ ಬಿಟ್ಟುಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು. ಯೆರೆಮೀಯನು ಅದರೊಳಗೆ ಹೂತುಕೊಂಡನು.


ರಕ್ತ ಸುರಿಸಿ ನೀವು ನನ್ನೊಡನೆ ಮಾಡಿಕೊಂಡ ಒಡಂಬಡಿಕೆಯ ನಿಮಿತ್ತ ಕರೆತರುವೆನು ನಿಮ್ಮವರನು ಸೆರೆಯಾಳತ್ವದಿಂದ ಮೇಲೆತ್ತುವೆನು ನಿಮ್ಮವರನು ಆ ಸೆರೆಬಾವಿಯಿಂದ.


ಯಾವನನ್ನು ಕುರಿತು ನಾವು: “ನಮ್ಮ ಬಾಳಿನ ಉಸಿರು, ದೇವರಿಂದ ಅಭಿಷಿಕ್ತನು, ಇವನ ಆಶ್ರಯದಿಂದಲೆ ರಾಷ್ಟ್ರಗಳ ನಡುವೆ ನಮಗೆ ಉಳಿವು” ಎಂದುಕೊಂಡೆವೋ ಅಂಥವನೇ ಸಿಕ್ಕಿಬಿದ್ದಿದ್ದಾನೆ ಹಗೆಗಳು ತೋಡಿದ ಗುಳಿಯೊಳಗೆ!


ಆಪ್ತರೂ ಹೇಸಿ ದೂರಸರಿವಂತೆ ಮಾಡಿರುವೆ I ಬಂಧಿತನಾದ ನಾನು ಬಿಡಿಸಿಕೊಳ್ಳಲಾಗದಿರುವೆ II


ದಬ್ಬಿರುವೆ ನೀನೆನ್ನನು ಅಧೋಲೋಕಕೆ I ಅಗಾಧಸ್ಥಳಕೆ, ಗಾಢ ಅಂಧಕಾರಕೆ II


ಮೇಲೆತ್ತಿದನು ವಿನಾಶದ ಕೆಸರಿಂದ, ಕರಾಳ ಕೂಪದಿಂದ I ಗೋರ್ಕಲ್ಲ ಮೇಲಿರಿಸಿ ಹೆಜ್ಜೆಯಿಡಿಸಿದನು ಅತಿ ಧೈರ್ಯದಿಂದ II


ನಿಷ್ಕಾರಣ ಕೊಲೆಮಾಡಲೆನ್ನ ಬಲೆಯೊಡ್ಡಿಹರು I ಆ ಕಾರಣ ಪ್ರಾಣ ತೆಗೆಯಲು ಗುಂಡಿ ತೋಡಿಹರು II


ಜೋಸೆಫನು ತನ್ನ ಅಣ್ಣಂದಿರ ಹತ್ತಿರಕ್ಕೆ ಬಂದಾಗ ಅವರು ಅವನ ಮೇಲಿದ್ದ ನಿಲುವಂಗಿಯನ್ನು ತೆಗೆದುಬಿಟ್ಟರು.


ತರುವಾಯ ಅವರು ಊಟಕ್ಕೆ ಕುಳಿತುಕೊಂಡರು. ಅಷ್ಟರಲ್ಲಿ, ಇಷ್ಮಾಯೇಲರ ಗುಂಪೊಂದು ಗಿಲ್ಯಾದಿನಿಂದ ಬರುವುದು ಅವರ ಕಣ್ಣಿಗೆ ಕಾಣಿಸಿತು. ಇವರು ತಮ್ಮ ಒಂಟೆಗಳ ಮೇಲೆ ಪರಿಮಳ ಪದಾರ್ಥ, ಸುಗಂಧ ತೈಲ, ರಸಗಂಧ ಇವುಗಳನ್ನು ಹೇರಿಕೊಂಡು, ಈಜಿಪ್ಟಿಗೆ ಪ್ರಯಾಣಮಾಡುತ್ತಿದ್ದರು.


ಆಗ ಅವರು ತಮ್ಮತಮ್ಮೊಳಗೆ, “ನಾವು ನಮ್ಮ ತಮ್ಮನಿಗೆ ಮಾಡಿದ ದ್ರೋಹಕ್ಕೆ ತಕ್ಕ ದಂಡನೆಯನ್ನು ಅನುಭವಿಸುತ್ತಿದ್ದೇವೆ. ಅವನು ನಮ್ಮನ್ನು ಕಳಕಳಿ ಬೇಡಿಕೊಂಡ. ಅವನ ಪ್ರಾಣಸಂಕಟವನ್ನು ತಿಳಿದೂ ನಾವು ಅವನ ಮೊರೆಗೆ ಕಿವಿಗೊಡಲಿಲ್ಲ. ಆದ್ದರಿಂದಲೆ ಈ ಸಂಕಟದಲ್ಲಿ ಸಿಕ್ಕಿಹಾಕಿಕೊಂಡು ಇದ್ದೇವೆ,” ಎಂದು ಮಾತಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು