Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:3 - ಕನ್ನಡ ಸತ್ಯವೇದವು C.L. Bible (BSI)

3 ಜೋಸೆಫನು ಯಕೋಬನಿಗೆ ಮುಪ್ಪಿನಲ್ಲಿ ಹುಟ್ಟಿದ ಮಗ. ಎಂದೇ ಯಕೋಬನಿಗೆ ಅವನ ಮೇಲೆ ಮಿಕ್ಕ ಮಕ್ಕಳಿಗಿಂತ ಮಿಗಿಲಾದ ಪ್ರೀತಿ. ಅಲಂಕೃತವಾದ ಒಂದು ನಿಲುವಂಗಿಯನ್ನೂ ಅವನಿಗೆ ಮಾಡಿಸಿಕೊಟ್ಟಿದ್ದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನಲ್ಲಿ ಹುಟ್ಟಿದವನಾಗಿದ್ದುದರಿಂದ ಅವನನ್ನು ತನ್ನ ಎಲ್ಲಾ ಮಕ್ಕಳಿಗಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದನು, ಅಲ್ಲದೆ ಅವನಿಗೆ ಬಣ್ಣಬಣ್ಣದ ಒಂದು ನಿಲುವಂಗಿಯನ್ನು ಹೊಲಿಸಿ ಕೊಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನಲ್ಲಿ ಹುಟ್ಟಿದವನಾದ್ದರಿಂದ ಇಸ್ರಾಯೇಲನು ಅವನನ್ನು ತನ್ನ ಎಲ್ಲಾ ಮಕ್ಕಳಿಗಿಂತ ಹೆಚ್ಚಾಗಿ ಪ್ರೀತಿಸಿ ಅವನಿಗೆ ನಿಲುವಂಗಿಯನ್ನು ಮಾಡಿಸಿಕೊಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇಸ್ರೇಲನು ತುಂಬ ಮುಪ್ಪಿನವನಾಗಿದ್ದಾಗ ಯೋಸೇಫನು ಹುಟ್ಟಿದ್ದರಿಂದ ಇಸ್ರೇಲನು ತನ್ನ ಬೇರೆ ಗಂಡುಮಕ್ಕಳಿಗಿಂತಲೂ ಹೆಚ್ಚಾಗಿ ಯೋಸೇಫನನ್ನು ಪ್ರೀತಿಸಿದನು. ಯಾಕೋಬನು ತನ್ನ ಮಗನಿಗೆ ಸುಂದರವಾದ ನಿಲುವಂಗಿಯನ್ನು ಮಾಡಿಸಿ ಕೊಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನ ವಯಸ್ಸಿನಲ್ಲಿ ಹುಟ್ಟಿದ ಮಗನಾಗಿದ್ದುದರಿಂದ ಅವನು ತನ್ನ ಎಲ್ಲಾ ಮಕ್ಕಳಿಗಿಂತ ಅವನನ್ನು ಹೆಚ್ಚು ಪ್ರೀತಿಮಾಡಿ, ಅವನಿಗೆ ಅನೇಕ ಬಣ್ಣಗಳ ಅಂಗಿಯನ್ನು ಹೊಲಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:3
10 ತಿಳಿವುಗಳ ಹೋಲಿಕೆ  

(ಆಕೆ ನಾನಾ ವರ್ಣಗಳುಳ್ಳ ಒಂದು ನಿಲುವಂಗಿಯನ್ನು ಧರಿಸಿಕೊಂಡಿದ್ದಳು. ಕನ್ಯೆಯರಾದ ರಾಜಪುತ್ರಿಯರು ಅದೇ ತರದ ವಸ್ತ್ರಗಳನ್ನು ಹಾಕಿಕೊಳ್ಳುತ್ತಿದ್ದರು.) ಸೇವಕನು ಆಕೆಯನ್ನು ಹೊರಗೆ ಕಳುಹಿಸಿ ಕದಮುಚ್ಚಿದನು.


ಆ ಅಂಗಿಯನ್ನು ತಮ್ಮ ತಂದೆಗೆ ಕಳಿಸಿದರು. ಅದನ್ನು ತಂದವರು, “ಇದು ನಮಗೆ ಸಿಕ್ಕಿತು; ಇದು ನಿಮ್ಮ ಮಗನ ಅಂಗಿಯೋ ಅಲ್ಲವೋ ನೋಡಿ,” ಎಂದು ಹೇಳಿದರು.


ಜೋಸೆಫನು ತನ್ನ ಅಣ್ಣಂದಿರ ಹತ್ತಿರಕ್ಕೆ ಬಂದಾಗ ಅವರು ಅವನ ಮೇಲಿದ್ದ ನಿಲುವಂಗಿಯನ್ನು ತೆಗೆದುಬಿಟ್ಟರು.


ಪಿತ ಪುತ್ರನನ್ನು ಪ್ರೀತಿಸಿ ಸರ್ವಸ್ವವನ್ನೂ ಆತನ ಕೈಗೆ ಕೊಟ್ಟಿದ್ದಾರೆ.


ನೀನು ಪುಣ್ಯಕ್ಷೇತ್ರಗಳನ್ನು ನಿರ್ಮಿಸಿ, ನಿನ್ನ ನಾನಾ ಶೈಲಿಯ ವಸ್ತ್ರಗಳಿಂದ ಅವುಗಳನ್ನು ಅಲಂಕರಿಸಿ, ಹಿಂದೆಂದೂ ನಡೆಯದಂತಹ, ಮುಂದೆ ಎಂದೂ ನಡೆಯಬಾರದಂತಹ ವ್ಯಭಿಚಾರವನ್ನು ನಡೆಸಿದೆ.


‘ನಿಶ್ಚಯವಾಗಿ ಸಿಕ್ಕಿರಬೇಕು ಅವರಿಗೆ ಕೊಳ್ಳೆ ಹಂಚಿಕೊಳ್ಳುತ್ತಿರಬೇಕು ಅದನು ತಮ್ಮತಮ್ಮಲ್ಲೆ ಪ್ರತಿಯೊಬ್ಬ ಸೈನಿಕನಿಗೆ ಒಬ್ಬೊಬ್ಬ ದಾಸಿಯರು ಸೀಸೆರನಿಗೊ, ಬಣ್ಣಬಣ್ಣವಾದ ಬಟ್ಟೆಬರೆಗಳು ವಿಚಿತ್ರ ಕಸೂತಿಹಾಕಿದ ಒಂದೆರಡು ವಸ್ತ್ರಗಳು, ಕಂಠಮಾಲೆಗಳು’.


ಬಳಿಕ ಅವರು ಒಂದು ಹೋತವನ್ನು ಕೊಯ್ದು, ಅದರ ರಕ್ತದಲ್ಲಿ ಜೋಸೆಫನ ನಿಲುವಂಗಿಯನ್ನು ಅದ್ದಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು