Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:35 - ಕನ್ನಡ ಸತ್ಯವೇದವು C.L. Bible (BSI)

35 ದುಃಖಶಮನಮಾಡಲು ಪುತ್ರಪುತ್ರಿಯರೆಲ್ಲರು ಎಷ್ಟು ಪ್ರಯತ್ನಿಸಿದರೂ ಅವನು ಸಾಂತ್ವನಗೊಳ್ಳಲಿಲ್ಲ; "ನಾನು ಹೀಗೆಯೇ ಹಂಬಲಿಸುತ್ತಾ ನನ್ನ ಮಗನಿರುವ ಮೃತ್ಯುಲೋಕವನ್ನು ಸೇರುತ್ತೇನೆ,” ಎಂದು ಮಗನಿಗಾಗಿ ದುಃಖಿಸುತ್ತಲೇ ಇದ್ದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಅವನ ಗಂಡುಮಕ್ಕಳೂ ಮತ್ತು ಹೆಣ್ಣುಮಕ್ಕಳೂ ಎಲ್ಲರೂ ಅವನ ದುಃಖ ಶಮನಮಾಡುವುದಕ್ಕೆ ಪ್ರಯತ್ನಿಸಿದ್ದಾಗ್ಯೂ ಅವನು ಸಮಾಧಾನ ಆದರಣೆ ಹೊಂದಲಾರದೇ, “ನಾನು ಹೀಗೆ ದುಃಖಪಡುತ್ತಾ ನನ್ನ ಮಗನೊಂದಿಗೆ ಸಮಾಧಿ ಸೇರುವೆನು” ಎಂದನು. ಹೀಗೆ ತಂದೆಯು ಮಗನಿಗೋಸ್ಕರ ದುಃಖಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಅವನ ಗಂಡುಮಕ್ಕಳೂ ಹೆಣ್ಣು ಮಕ್ಕಳೂ ಎಲ್ಲರೂ ದುಃಖಶಮನ ಮಾಡುವದಕ್ಕೆ ಪ್ರಯತ್ನಿಸಿದಾಗ್ಯೂ ಅವನು ಶಾಂತಿಯನ್ನು ಹೊಂದಲೊಲ್ಲದೆ - ನಾನು ಹೀಗೇ ಹಂಬಲಿಸುತ್ತಾ ನನ್ನ ಮಗನಿರುವ ಪಾತಾಳವನ್ನು ಸೇರುವೆನು ಅಂದನು. ಹೀಗೆ ತಂದೆಯು ಮಗನಿಗೋಸ್ಕರ ಅಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಯಾಕೋಬನ ಗಂಡುಮಕ್ಕಳು ಮತ್ತು ಹೆಣ್ಣುಮಕ್ಕಳು ಎಷ್ಟೇ ಸಂತೈಸಿದರೂ ಯಾಕೋಬನಿಗೆ ಆದರಣೆಯಾಗಲಿಲ್ಲ. ಯಾಕೋಬನು ಅವರಿಗೆ, “ನಾನು ಸಾಯುವ ತನಕ ನನ್ನ ಮಗನಿಗಾಗಿ ದುಃಖಪಡುವೆ” ಎಂದು ಹೇಳಿ ದುಃಖಿಸುತ್ತಲೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಅವನ ಪುತ್ರಪುತ್ರಿಯರೆಲ್ಲಾ ಅವನನ್ನು ಆದರಿಸಿದರೂ ಅವನು ಆದರಣೆ ಹೊಂದಲೊಲ್ಲದೆ, “ನನ್ನ ಮಗನಿರುವ ಸಮಾಧಿಗೆ ದುಃಖದಿಂದಲೇ ಇಳಿದು ಹೋಗುವೆನು,” ಎಂದನು. ಹೀಗೆ ಅವನ ತಂದೆ ಅವನಿಗೋಸ್ಕರ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:35
18 ತಿಳಿವುಗಳ ಹೋಲಿಕೆ  

ಯೋಬನಿಗೆ ಒದಗಿದ್ದ ಆಪತ್ತಿನ ಸುದ್ದಿ ಆತನ ಮೂವರು ಮಿತ್ರರಿಗೆ ಮುಟ್ಟಿತು. ಅವರು ತಮ್ಮ ತಮ್ಮ ಊರುಗಳಿಂದ, ಅಂದರೆ, ತೇಮಾನ್ಯದಿಂದ ಎಲೀಫಜನೂ, ಶೂಹ್ಯದಿಂದ ಬಿಲ್ದದನು, ನಾಮಾಥ್ಯದಿಂದ ಚೋಫರನೂ ಹೊರಟುಬಂದರು. ಯೋಬನಿಗೆ ತಮ್ಮ ಸಂತಾಪವನ್ನು ವ್ಯಕ್ತಪಡಿಸಿ ಅವನನ್ನು ಸಾಂತ್ವನಗೊಳಿಸಬೇಕೆಂಬ ಒಂದೇ ಉದ್ದೇಶದಿಂದ ಅವರು ಆತನ ಬಳಿಗೆ ಬಂದರು.


ಆಸ್ಥಾನದ ಅಧಿಕಾರಿಗಳು ಅವನನ್ನು ಎಬ್ಬಿಸುವುದಕ್ಕೆ ಹೋದರು. ಆದರೆ ಅವನು ಏಳಲೂ ಇಲ್ಲ, ಅವರೊಡನೆ ಆಹಾರ ತೆಗೆದುಕೊಳ್ಳಲೂ ಇಲ್ಲ.


ಯಕೋಬನು ಅವರಿಗೆ, “ನನ್ನ ಮಗ ನಿಮ್ಮ ಸಂಗಡ ಹೋಗಬಾರದು. ಇವನ ಒಡಹುಟ್ಟಿದ ಅವನು ಸತ್ತುಹೋದ, ಇವನೊಬ್ಬನೇ ಉಳಿದು ಇದ್ದಾನೆ, ದಾರಿಯಲ್ಲಿ ಇವನಿಗೇನಾದರೂ ಆಪತ್ತು ಸಂಭವಿಸಬಹುದು. ಆಗ, ನರೆಕೂದಲಿನ ಈ ಮುದುಕ ದುಃಖದಿಂದಲೆ ಸಮಾಧಿ ಸೇರಲು ನೀವೇ ಕಾರಣರಾಗುತ್ತೀರಿ,” ಎಂದು ಹೇಳಿದ.


ಸರ್ವೇಶ್ವರ ಹೀಗೆನ್ನುತ್ತಾರೆ: “ಕೇಳಿಬರುತ್ತಿದೆ ರಾಮಾ ಊರಿನೊಳು ರೋದನ ಗೋಳಾಟ, ಅಘೋರ ಆಕ್ರಂದನ. ಕಳೆದುಕೊಂಡ ಮಕ್ಕಳಿಗಾಗಿ ಗೋಳಾಡುತ್ತಿಹಳು ರಾಖೇಲಳು ಇನ್ನಿಲ್ಲದ ಅವುಗಳಿಗಾಗಿ ಉಪಶಮನ ಒಲ್ಲೆನೆನುತಿಹಳು.”


ಸಂಕಟದ ವೇಳೆಯೊಳು ಸ್ವಾಮಿಯನು ನಾ ಕರೆದೆ I ಇರುಳೆಲ್ಲ ಆಯಾಸವರಿಯದೆ ಕೈಚಾಚಿದೆ I ಎನ್ನ ಮನಸ್ಸಿತ್ತು ದುಃಖಶಮನಗೊಳ್ಳದೆ II


ಕೊನೆಗೆ ಯಕೋಬನು, “ನನ್ನ ಮಗ ಜೋಸೆಫ್ ಜೀವದಿಂದಿದ್ದಾನೆ, ನನಗೆ ಅಷ್ಟೇ ಸಾಕು! ನಾನು ಸಾಯುವುದಕ್ಕೆ ಮುಂಚೆ ಹೋಗಿ ಅವನನ್ನು ನೋಡುತ್ತೇನೆ,” ಎಂದನು.


ನಾವು ಅವನಿಗೆ, ‘ನಾವು ಸತ್ಯವಂತರೇ ಹೊರತು ಗೂಢಚಾರರೇನು ಅಲ್ಲ,


ಆಗ ಲಾಬಾನನು ಯಕೋಬನಿಗೆ, “ಈ ಮಹಿಳೆಯರು ನನ್ನ ಪುತ್ರಿಯರು, ಈ ಮಕ್ಕಳು ನನ್ನ ಮೊಮ್ಮಕ್ಕಳು, ಈ ಹಿಂಡುಗಳು ನನಗೆ ಸೇರಿದವು; ನಿನ್ನ ಕಣ್ಮುಂದೆ ಇರುವುದೆಲ್ಲವೂ ನನ್ನವೇ. ಇಂತಿರುವಲ್ಲಿ ಈ ನನ್ನ ಪುತ್ರಿಯರಿಗೇ ಆಗಲಿ, ಇವರು ಹೆತ್ತ ಮಕ್ಕಳಿಗೇ ಆಗಲಿ, ನಾನೀಗ ಏನೂ ಹಾನಿ ಮಾಡಹೋಗುವುದಿಲ್ಲ.


ಪೂರ್ಣ ಆಯುಷ್ಯವನ್ನು ಕಳೆದು, ಹಣ್ಣು ಹಣ್ಣು ಮುದುಕನಾಗಿ ಪ್ರಾಣಬಿಟ್ಟು ಅವನು ತನ್ನ ಪಿತೃಗಳ ಬಳಿಗೆ ಸೇರಿದನು.


ಈಗ ಸತ್ತಿದ್ದಾನೆ ಅಲ್ಲವೆ? ನಾನೇಕೆ ಉಪವಾಸ ಮಾಡಬೇಕು? ಅವನನ್ನು ಹಿಂದಕ್ಕೆ ತರಲು ನನ್ನಿಂದಾದೀತೇ? ನಾನಾಗಿ ಅವನ ಬಳಿಗೆ ಹೋಗಬೇಕೇ ಹೊರತು ಅವನು ನನ್ನ ಬಳಿಗೆ ಬರುವುದಿಲ್ಲ,” ಎಂದು ಉತ್ತರಕೊಟ್ಟನು.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲ ಪೂರ್ಣಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿಕ್ಕಿರುವ ಪಾತಾಳದಲ್ಲಿ ಯಾವ ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ಅನಂತರ ಜೋಸೆಫನಿಗೆ, “ನಿನ್ನ ಮುಖವನ್ನು ಮತ್ತೆ ನೋಡುವೆನೆಂದು ನಾನು ನೆನಸಿರಲಿಲ್ಲ. ಈಗ ನಿನ್ನನ್ನು ಮಾತ್ರವಲ್ಲ, ನಿನ್ನ ಮಕ್ಕಳನ್ನೂ ನೋಡುವಂತೆ ದೇವರು ಅನುಗ್ರಹಿಸಿದ್ದಾರೆ!” ಎಂದನು.


ಅರಸನು ಅಬ್ಷಾಲೋಮನಿಗಾಗಿ ಅಳುತ್ತಾ ಗೋಳಾಡುತ್ತಾ ಇದ್ದಾನೆಂಬ ಸಮಾಚಾರ ಯೋವಾಬನಿಗೆ ಮುಟ್ಟಿತು.


ಇವರ ತಂದೆ ಎಫ್ರಯಿಮ್ ಅನೇಕ ದಿನಗಳವರೆಗೆ ಇವರಿಗಾಗಿ ಶೋಕಿಸಿದನು. ಅವನ ಸಹೋದರರು ಬಂದು ಅವನಿಗೆ ಸಂತಾಪ ಸೂಚಿಸಿದರು.


ದೇವರನು ಸ್ಮರಿಸಿ ನಿಟ್ಟುಸಿರಿಡುತಿಹೆನು I ಹಂಬಲಿಸಿ ಮನದಲೇ ನಾ ಮರುಗುತಿಹೆನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು