ಆದಿಕಾಂಡ 37:36 - ಕನ್ನಡ ಸತ್ಯವೇದವು C.L. Bible (BSI)36 ಮಿದ್ಯಾನ್ಯರು ಜೋಸೆಫನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡುಹೋಗಿ ಫರೋಹನ ಆಸ್ಥಾನದಲ್ಲಿದ್ದ ಪೋಟೀಫರನಿಗೆ ಮಾರಿದರು; ಇವನು, ದೊಡ್ಡ ಉದ್ಯೋಗಸ್ಥನೂ ಮೈಗಾವಲಿನವರ ದಳಪತಿಯೂ ಆಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ತೆಗೆದುಕೊಂಡು ಹೋಗಿ ಐಗುಪ್ತ ದೇಶದ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದರು. ಇವನು ಅರಸನ ಮೈಗಾವಲಿನವರ ದಳಪತಿಯೂ ಆಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ವಿುದ್ಯಾನ್ಯರು ಯೋಸೇಫನನ್ನು ಐಗುಪ್ತದೇಶಕ್ಕೆ ತೆಗೆದುಕೊಂಡು ಹೋಗಿ ಫರೋಹನ ಬಳಿಯಲ್ಲಿದ್ದ ದೊಡ್ಡ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದರು; ಇವನು ಮೈಗಾವಲಿನವರ ದಳವಾಯಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಮಿದ್ಯಾನಿನ ವ್ಯಾಪಾರಿಗಳು ಯೋಸೇಫನನ್ನು ಈಜಿಪ್ಟಿನಲ್ಲಿ ಮಾರಿದರು. ಅವರು ಅವನನ್ನು ಫರೋಹನ ಕಾವಲುಗಾರರಿಗೆ ನಾಯಕನಾಗಿದ್ದ ಪೋಟೀಫರನಿಗೆ ಮಾರಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಇದರೊಂದಿಗೆ, ಆ ಮಿದ್ಯಾನ್ಯರು ಯೋಸೇಫನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡುಹೋಗಿ ಪೋಟೀಫರನಿಗೆ ಮಾರಿದರು. ಇವನು ಫರೋಹನ ಉದ್ಯೋಗಸ್ಥನೂ ಮೈಗಾವಲಿನ ದಳಪತಿಯೂ ಆಗಿದ್ದನು. ಅಧ್ಯಾಯವನ್ನು ನೋಡಿ |