Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:5 - ಕನ್ನಡ ಸತ್ಯವೇದವು C.L. Bible (BSI)

5 ಒಮ್ಮೆ ಜೋಸೆಫನಿಗೆ ಒಂದು ಕನಸು ಬಿತ್ತು. ಅದನ್ನು ತನ್ನ ಅಣ್ಣಂದಿರಿಗೆ ತಿಳಿಸಿದಾಗ ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಒಂದು ದಿನ ಯೋಸೇಫನು ಕನಸು ಕಂಡು ಅದನ್ನು ತನ್ನ ಅಣ್ಣಂದಿರಿಗೆ ತಿಳಿಸಿದಾಗ ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಒಂದು ದಿನ ಯೋಸೇಫನು ಕನಸುಕಂಡು ಅದನ್ನು ತನ್ನ ಅಣ್ಣಂದಿರಿಗೆ ತಿಳಿಸಲು ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಒಂದು ದಿನ ಯೋಸೇಫನು ವಿಶೇಷವಾದ ಕನಸನ್ನು ಕಂಡನು. ಯೋಸೇಫನು ಈ ಕನಸನ್ನು ತನ್ನ ಅಣ್ಣಂದಿರಿಗೆ ತಿಳಿಸಿದಾಗ ಅವರು ಅವನನ್ನು ಮತ್ತಷ್ಟು ದ್ವೇಷಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೋಸೇಫನು ಒಂದು ಕನಸನ್ನು ಕಂಡು ತನ್ನ ಸಹೋದರರಿಗೆ ತಿಳಿಸಿದಾಗ, ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:5
20 ತಿಳಿವುಗಳ ಹೋಲಿಕೆ  

ಆ ರಾತ್ರಿ ಅವನಿಗೆ ಒಂದು ಕನಸು ಬಿತ್ತು, ಆ ಕನಸಿನಲ್ಲಿ ಒಂದು ನಿಚ್ಚಣಿಗೆ ನೆಲದ ಮೆಲೆ ನಿಂತಿತ್ತು; ಅದರ ತುದಿ ಆಕಾಶವನ್ನು ಮುಟ್ಟಿತ್ತು. ಅದರ ಮೇಲೆ ದೇವದೂತರು ಹತ್ತುತ್ತಾ ಇಳಿಯುತ್ತಾ ಇದ್ದರು.


ನಿಮ್ಮ ಸಂದೇಶವನ್ನು ಇವರಿಗೆ ತಿಳಿಸಿದ್ದೇನೆ. ನಾನು ಲೋಕಕ್ಕೆ ಸೇರಿದವನಲ್ಲ. ಅಂತೆಯೇ, ಇವರೂ ಲೋಕಕ್ಕೆ ಸೇರಿದವರಲ್ಲ. ಈ ಕಾರಣ, ಲೋಕಕ್ಕೆ ಇವರ ಮೇಲೆ ದ್ವೇಷವಿದೆ.


“ತರುವಾಯ ಎಲ್ಲಾ ಮಾನವರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಪುತ್ರಪುತ್ರಿಯರು ಪ್ರವಾದನೆ ಮಾಡುವರು; ನಿಮ್ಮ ಹಿರಿಯರು ಸ್ವಪ್ನಶೀಲರಾಗುವರು; ನಿಮ್ಮ ಯುವಕರಿಗೆ ದಿವ್ಯದರ್ಶನಗಳಾಗುವುವು.


ಹೀಗಿರುವಲ್ಲಿ ಭಯಂಕರವಾದ ಕನಸೊಂದನ್ನು ಕಂಡೆ. ನಿದ್ರೆಯಲ್ಲಿ ನನಗೆ ತೋಚಿದ ಆಲೋಚನೆಗಳು ಹಾಗು ಮನಸ್ಸಿಗೆ ಬಿದ್ದ ಸ್ವಪ್ನಗಳು ನನ್ನನ್ನು ಕಳವಳಕ್ಕೆ ಈಡುಮಾಡಿದವು.


ಅವರ ವಿಷಯವಾಗಿ ತಾನು ಕಂಡಿದ್ದ ಕನಸುಗಳನ್ನು ಜೋಸೆಫನು ನೆನಪಿಗೆ ತಂದುಕೊಂಡನು. ಅವರನ್ನು ನೋಡಿ, “ನೀವು ಗೂಢಚಾರರು; ನಮ್ಮ ದೇಶದ ದುರ್ಬಲ ಸ್ಥಳಗಳನ್ನು ಪತ್ತೆಹಚ್ಚುವುದಕ್ಕಾಗಿ ಬಂದವರು,” ಎಂದನು.


ತನ್ನ ಪರಿಚಾರಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಸ್ವಾಮಿ ಸರ್ವೇಶ್ವರ ಏನೂ ಮಾಡುವುದಿಲ್ಲ.


ಅವರು ಸಮೀಪಿಸಿದಾಗ, “ನನ್ನ ಮಾತಿಗೆ ಕಿವಿಗೊಡಿ ನಿಮ್ಮಲ್ಲಿ ಪ್ರವಾದಿಯಿದ್ದರೆ ಅವನಿಗೆ ಕಾಣಿಸಿಕೊಳ್ಳುವೆ ಜ್ಞಾನದೃಷ್ಟಿಯಲ್ಲಿ ಇಲ್ಲವೆ ಅವನ ಸಂಗಡ ಮಾತಾಡುವೆ ಸ್ವಪ್ನದಲ್ಲಿ.


ತಂದೆ ತನ್ನ ಎಲ್ಲ ಮಕ್ಕಳಿಗಿಂತ ಇವನನ್ನೇ ಹೆಚ್ಚಾಗಿ ಪ್ರೀತಿಸುವುದನ್ನು ಕಂಡು, ಅಣ್ಣಂದಿರು ಆ ಜೋಸೆಫನನ್ನು ಹಗೆಮಾಡಿದರು. ಅವನೊಡನೆ ಸ್ನೇಹಭಾವದಿಂದಲೂ ಮಾತಾಡದೆಹೋದರು.


ದೇವರಾದ ಸರ್ವೇಶ್ವರ ಆ ರಾತ್ರಿ ಕನಸಿನಲ್ಲಿ ಅವನಿಗೆ ಕಾಣಿಸಿಕೊಂಡರು; “ನಿನಗೆ ಯಾವ ವರಬೇಕು ಕೇಳಿಕೋ,” ಎಂದು ಹೇಳಿದರು.


ನೆಬೂಕದ್ನೆಚ್ಚರನು ತನ್ನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಒಂದು ಕನಸು ಕಂಡು ತತ್ತರಗೊಂಡನು. ಅವನಿಗೆ ನಿದ್ರೆ ತಪ್ಪಿತು.


ಪ್ರಭುವಿನ ಮೈತ್ರಿ, ಭಯಭಕುತಿಯುಳ್ಳವರಿಗೆ I ಅಂಥವರಿಗೆ ವ್ಯಕ್ತ, ಆತನ ಒಡಂಬಡಿಕೆ II


ಬಿಲ್ಲುಗಾರರೆಸಗಿದರು ಅವನ ಮೇಲೆ ಆಕ್ರಮಣ ಸುತ್ತುವರೆದರವನನು ಎಸೆದು ಬಿರುಸುಬಾಣ.


ಎರಡು ವರ್ಷಗಳಾದ ಮೇಲೆ ಫರೋಹನಿಗೆ ಒಂದು ಕನಸುಬಿತ್ತು. ಆ ಕನಸಿನಲ್ಲಿ ಅವನು ನೈಲ್ ನದಿಯ ತೀರದಲ್ಲಿ ನಿಂತಿದ್ದನು.


ಕೆಲವು ಕಾಲವದ ಮೇಲೆ, ಆ ಇಬ್ಬರು ನೌಕರರಿಗೂ ಅಂದರೆ, ಈಜಿಪ್ಟಿನ ಅರಸ ಸೆರೆಗೆ ಹಾಕಿಸಿದ್ದ ಪಾನಸೇವಕನಿಗೂ ಅಡಿಗೆಭಟ್ಟನಿಗೂ, ಒಂದೇ ರಾತ್ರಿ ಕನಸುಬಿತ್ತು. ಅವರ ಕನಸುಗಳಿಗೆ ಬೇರೆಬೇರೆ ಅರ್ಥವಿತ್ತು.


ಅದಕ್ಕೆ ಅವನ ಅಣ್ಣಂದಿರು, “ಏನು, ನೀನು ನಿಜವಾಗಿ ನಮ್ಮನ್ನು ಆಳುವೆಯಾ? ನಮ್ಮ ಮೇಲೆ ದೊರೆತನ ಮಾಡುವೆಯಾ?” ಎಂದು ಪ್ರಶ್ನಿಸಿದರು. ಅವನ ಕನಸುಗಳು, ಅವನ ಮಾತುಗಳು ಅವರನ್ನು ಮತ್ತಷ್ಟು ಹಗೆಗಳನ್ನಾಗಿ ಮಾಡಿದವು.


“ಆಡುಕುರಿಗಳು ಸಂಗಮ ಮಾಡುವ ಕಾಲದಲ್ಲಿ ನಾನೊಂದು ಕನಸನ್ನು ಕಂಡೆ. ಅದರಲ್ಲಿ ಕಣ್ಣೆತ್ತಿ ನೋಡುತ್ತಿದ್ದ ನನಗೆ ಮೇಕೆಗಳ ಮೇಲೆ ಹಾರಿದ ಹೋತಗಳೆಲ್ಲವು ರೇಖೆ, ಚುಕ್ಕೆ, ಮಚ್ಚೆಗಳುಳ್ಳವುಗಳಾಗಿಯೆ ಕಾಣಿಸಿದವು.


ಆ ಕನಸಿನಲ್ಲಿ ದೇವದೂತನು, ‘ಯಕೋಬನೇ’ ಎಂದು ಕರೆದನು. ನಾನು, ‘ಇಗೋ, ಇದ್ದೇನೆ’, ಎಂದು ಹೇಳಿದೆ.


ಅವನು ಅವರಿಗೆ, “ನಾನು ಕನಸಿನಲ್ಲಿ ಕಂಡದ್ದನ್ನು ಹೇಳುತ್ತೇನೆ ಕೇಳಿ;


ಆದರೆ ದೇವರು ಅಬೀಮೆಲೆಕನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ನೀನು ಆ ಮಹಿಳೆಯನ್ನು ಸೇರಿಸಿಕೊಂಡ ಕಾರಣ ಸಾಯತಕ್ಕವನು, ಆಕೆಗೆ ಗಂಡನಿದ್ದಾನೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು