Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:8 - ಕನ್ನಡ ಸತ್ಯವೇದವು C.L. Bible (BSI)

8 ಅದಕ್ಕೆ ಅವನ ಅಣ್ಣಂದಿರು, “ಏನು, ನೀನು ನಿಜವಾಗಿ ನಮ್ಮನ್ನು ಆಳುವೆಯಾ? ನಮ್ಮ ಮೇಲೆ ದೊರೆತನ ಮಾಡುವೆಯಾ?” ಎಂದು ಪ್ರಶ್ನಿಸಿದರು. ಅವನ ಕನಸುಗಳು, ಅವನ ಮಾತುಗಳು ಅವರನ್ನು ಮತ್ತಷ್ಟು ಹಗೆಗಳನ್ನಾಗಿ ಮಾಡಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅದಕ್ಕೆ ಅವನ ಅಣ್ಣಂದಿರು ಅವನಿಗೆ, “ನೀನು ನಿಜವಾಗಿ ನಮ್ಮನ್ನು ಆಳುವಿಯಾ? ನೀನು ನಮ್ಮ ಮೇಲೆ ದೊರೆತನ ಮಾಡುವಿಯಾ?” ಎಂದು ಹೇಳಿ ಅವನ ಕನಸುಗಳಿಗಾಗಿಯೂ, ಅದನ್ನು ಅವನು ಅವರಿಗೆ ತಿಳಿಸಿದ್ದಕ್ಕಾಗಿಯು ಮತ್ತಷ್ಟು ಅವನನ್ನು ದ್ವೇಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅದಕ್ಕೆ ಅವನ ಅಣ್ಣಂದಿರು - ನೀನು ನಿಜವಾಗಿ ನಮ್ಮನ್ನು ಆಳುವಿಯಾ? ನೀನು ನಮ್ಮ ಮೇಲೆ ದೊರೆತನಮಾಡುವಿಯಾ ಎಂದು ಅವನಿಗೆ ಹೇಳಿ ಅವನ ಕನಸುಗಳಿಗಾಗಿಯೂ ಮಾತುಗಳಿಗಾಗಿಯೂ ಮತ್ತಷ್ಟು ಹಗೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವನ ಅಣ್ಣಂದಿರು, “ನೀನು ರಾಜನಾಗಿ ನಮ್ಮನ್ನು ಆಳುವೆ ಎಂಬುದು ಇದರ ಅರ್ಥವೆಂದು ನಿನ್ನ ಆಲೋಚನೆಯೋ?” ಎಂದು ಪ್ರಶ್ನಿಸಿ ಆ ಕನಸಿನ ನಿಮಿತ್ತ ಅವನನ್ನು ಮತ್ತಷ್ಟು ದ್ವೇಷಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಅವನ ಸಹೋದರರು ಅವನಿಗೆ, “ನೀನು ನಮ್ಮನ್ನು ನಿಶ್ಚಯವಾಗಿಯೂ ಆಳುವೆಯೋ? ನಿಜವಾಗಿ ನಮ್ಮ ಮೇಲೆ ದೊರೆತನ ಮಾಡುವಿಯೋ?” ಎಂದು ಹೇಳಿ, ಅವನ ಕನಸು ಮತ್ತು ಅವನ ಮಾತುಗಳಿಗೆ ಅವನನ್ನು ಮತ್ತಷ್ಟೂ ದ್ವೇಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:8
19 ತಿಳಿವುಗಳ ಹೋಲಿಕೆ  

“ ‘ನಮ್ಮ ನ್ಯಾಯತೀರಿಸುವ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?’ ಎಂದು ಇಸ್ರಯೇಲರಿಂದ ತಿರಸ್ಕೃತನಾದವನೇ ಆ ಮೋಶೆ. ಉರಿಯುವ ಪೊದೆಯಲ್ಲಿ ಕಾಣಿಸಿಕೊಂಡ ತಮ್ಮ ದೂತನ ಮೂಲಕ ದೇವರು ಅಧಿಪತಿಯನ್ನಾಗಿಯೂ ವಿಮೋಚಕನನ್ನಾಗಿಯೂ ನೇಮಿಸಿದ್ದು ಇವನನ್ನೇ.


ಕೆಲವು ಮಂದಿ ಪುಂಡುಪೋಕರು, “ಇವನೇನೋ ನಮ್ಮನ್ನು ರಕ್ಷಿಸುವವನು!” ಎಂದು ತಾತ್ಸಾರಮಾಡಿ ಕಾಣಿಕೆಗಳನ್ನು ತರಲಿಲ್ಲ. ಆದರೂ ಸೌಲನು ಸುಮ್ಮನಿದ್ದನು.


ಹೀಗಿರುವಲ್ಲಿ, ದೇವರ ಪುತ್ರನನ್ನು ತುಚ್ಛೀಕರಿಸುವವನೂ ತನ್ನನ್ನು ಶುದ್ಧೀಕರಿಸಿದ ಹಾಗು ಒಡಂಬಡಿಕೆಯನ್ನು ಸ್ಥಿರಪಡಿಸುವ ರಕ್ತವನ್ನು ತೃಣೀಕರಿಸುವವನೂ ವರಪ್ರಸಾದವನ್ನು ತರುವ ಪವಿತ್ರಾತ್ಮ ಅವರನ್ನು ತಿರಸ್ಕರಿಸುವವನೂ ಎಂಥಾ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ!


ಇದನ್ನು ಜನರು ಕೇಳಿದ್ದೇ, “ಅಯ್ಯೋ, ಹಾಗೆ ಎಂದಿಗೂ ಸಂಭವಿಸದಿರಲಿ!” ಎಂದರು. ಯೇಸು ಅವರನ್ನು ದಿಟ್ಟಿಸಿ ನೋಡಿ, “ಹಾಗಾದರೆ; ‘ಮನೆ ಕಟ್ಟುವವರು ಬೇಡವೆಂದು ಬಿಸಾಡಿದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು.’ ಎಂದು ಪವಿತ್ರಗ್ರಂಥದಲ್ಲಿ ಹೇಳಿರುವುದರ ಅರ್ಥ ಆದರೂ ಏನು?


ಅವನ ನಾಡಿಗರಾದರೋ ಅವನನ್ನು ದ್ವೇಷಿಸುತ್ತಿದ್ದರು. ‘ಇವನು ನಮಗೆ ರಾಜನಾಗುವುದು ಬೇಡ,’ ಎಂದು ತಿಳಿಸಲು ಅವನ ಹಿಂದೆಯೇ ತಮ್ಮ ಪ್ರತಿನಿಧಿಗಳನ್ನು ಕಳುಹಿಸಿದರು.


ಮನೆಕಟ್ಟುವವರು ಮೂಲೆಗೆಸೆದ ಕಲ್ಲು I ಆಯಿತು ನೋಡು, ಮುಖ್ಯವಾದ ಮೂಲೆಗಲ್ಲು II


ದಾವೀದನು ಜನರ ಸಂಗಡ ಹೀಗೆ ಮಾತಾಡುವುದನ್ನು ಅವನ ಹಿರಿಯ ಅಣ್ಣ ಎಲೀಯಾಬನು ಕೇಳಿದನು. ದಾವೀದನ ಮೇಲೆ ಅವನು ಸಿಟ್ಟುಗೊಂಡು, “ನೀನು ಇಲ್ಲಿಗೆ ಬಂದುದೇಕೆ? ಅಡವಿಯಲ್ಲಿರುವ ನಾಲ್ಕಾರು ಕುರಿಗಳನ್ನು ಯಾರಿಗೊಪ್ಪಿಸಿ ಬಂದೆ? ನಿನ್ನ ಸೊಕ್ಕು, ತುಂಟತನ ನನಗೆ ಗೊತ್ತಿದೆ. ನೀನು ಕದನ-ಕುಚೇಷ್ಟೆ ನೋಡಬಂದಿರುವೆಯಷ್ಟೇ,” ಎಂದು ಗದರಿಸಿದನು.


ಅದಕ್ಕೆ ಅವನು, “ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿ ಹಾಗೂ ನ್ಯಾಯಾಧಿಪತಿಯನ್ನಾಗಿ ನೇಮಿಸಿದವರು ಯಾರು? ಆ ಈಜಿಪ್ಟಿನವನನ್ನು ಕೊಂದುಹಾಕಿದಂತೆ ನನ್ನನ್ನು ಕೊಂದುಹಾಕಬೇಕೆಂದಿರುವೆಯಾ?” ಎಂದನು. ಈ ಮಾತನ್ನು ಕೇಳಿದ್ದೇ ಮೋಶೆ, “ನಾನು ಮಾಡಿದ ಕಾರ್ಯ ಬಯಲಾಗಿಬಿಟ್ಟಿತಲ್ಲಾ!” ಎಂದು ಅಂಜಿದನು.


ಪ್ರಾಚೀನ ಪರ್ವತಗಳಿಗಿ0ತ, ಚಿರಸ್ಥಾಯಿ ಗುಡ್ಡಗಳಿಗಿಂತ ಉತ್ತಮೋತ್ತಮ ನಿನ್ನ ತಂದೆಯಿಂದ ಬರುವ ಆಶೀರ್ವಾದ. ಇಳಿದು ಬರಲೀ ವರದಾನಗಳು ಜೋಸೆಫನ ಮೇಲೆ ಸೋದರರಿಂದ ಬೇರ್ಪಟ್ಟವನ ಶಿರಸ್ಸಿನ ಮೇಲೆ.


ತಂದೆ ತನ್ನ ಎಲ್ಲ ಮಕ್ಕಳಿಗಿಂತ ಇವನನ್ನೇ ಹೆಚ್ಚಾಗಿ ಪ್ರೀತಿಸುವುದನ್ನು ಕಂಡು, ಅಣ್ಣಂದಿರು ಆ ಜೋಸೆಫನನ್ನು ಹಗೆಮಾಡಿದರು. ಅವನೊಡನೆ ಸ್ನೇಹಭಾವದಿಂದಲೂ ಮಾತಾಡದೆಹೋದರು.


ತಂದೆಯಿಂದ ಯಕೋಬನು ಪಡೆದುಕೊಂಡ ಆಶೀರ್ವಾದದ ನಿಮಿತ್ತ ಏಸಾವನು ಯಕೋಬನ ಮೇಲೆ ಹಗೆಗೊಂಡನು. “ತಂದೆಯ ಮರಣಕ್ಕಾಗಿ ದುಃಖಿಸುವ ಕಾಲ ಸಮೀಪಿಸಿತು. ಆ ಬಳಿಕ ನನ್ನ ತಮ್ಮ ಯಕೋಬನನ್ನು ಕೊಂದುಹಾಕುತ್ತೇನೆ,” ಎಂದು ತನ್ನೊಳಗೇ ನೆನಸಿಕೊಂಡನು.


ಜೋಸೆಫನಿಗೆ ಇನ್ನೊಂದು ಕನಸು ಬಿತ್ತು. ಅದನ್ನೂ ಅವನು ಅಣ್ಣಂದಿರಿಗೆ ತಿಳಿಸಿದ: “ನಾನು ಇನ್ನೊಂದು ಕನಸು ಕಂಡಿದ್ದೇನೆ. ಅದರಲ್ಲಿ ಸೂರ್ಯ, ಚಂದ್ರ, ಹಾಗೂ ನಕ್ಷತ್ರಗಳೂ ನನಗೆ ಅಡ್ಡಬಿದ್ದವು,” ಎಂದು ಹೇಳಿದ.


ಅದಕ್ಕೆ ಅವರು, "ಇಲ್ಲ, ಒಡೆಯಾ, ತಮ್ಮ ಸೇವಕರಾದ ನಾವು ಆಹಾರಪದಾರ್ಥಗಳನ್ನು ಕೊಂಡುಕೊಳ್ಳುವುದಕ್ಕೆ ಬಂದಿದ್ದೇವೆ.


ಆಗ ಯೆಹೂದನು ಹತ್ತಿರಕ್ಕೆ ಬಂದು, “ನನ್ನೊಡೆಯಾ, ತಮ್ಮ ಸೇವಕನಾದ ನಾನು ಒಂದು ಮಾತನ್ನು ಅರಿಕೆಮಾಡಿಕೊಳ್ಳುತ್ತೇನೆ; ನನ್ನ ಮೇಲೆ ಸಿಟ್ಟುಮಾಡಬೇಡಿ; ತಾವು ಫರೋಹನಿಗೆ ಸಮಾನರು.


ಇದೂ ಅಲ್ಲದೆ, ಅಣ್ಣಂದಿರು ತಾವೇ ಬಂದು ಅವನಿಗೆ ಅಡ್ಡಬಿದ್ದರು. “ಇಗೋ, ನಾವು ನಿನಗೆ ಗುಲಾಮರು,” ಎಂದು ಹೇಳಿದರು.


ಸೋದರರಿಗೆ ಸಾಮ್ರಾಟನಾದ ಜೋಸೆಫನ ಪಾಲಿಗೆ ಬರಲಿ ಇವನ ಕುಲದ ಮೇಲೆ ನೆಲಸಲಿ ನೆಲಬೆಳೆಸುವ ಫಲಗಳಲಿ ಶ್ರೇಷ್ಠವಾದುದೆಲ್ಲವು ಮುಳ್ಳುಪೊದೆಯಲಿ ಕಾಣಿಸಿಕೊಂಡಾತನ ದಯೆಯು!


ಈ ಮಾತುಗಳು ಸೌಲನಿಗೆ ಹಿಡಿಸಲಿಲ್ಲ. ಅವನು ಕೋಪದಿಂದ, “ದಾವೀದನು ಹತ್ತು ಸಾವಿರಗಟ್ಟಳೆ ಕೊಂದನೆಂದೂ ನಾನು ಸಾವಿರಗಟ್ಟಳೆ ಮಾತ್ರ ಕೊಂದೆನೆಂದು ಹಾಡುತ್ತಾರಲ್ಲಾ! ಹಾಗಾದರೆ ಅವನನ್ನು ರಾಜನನ್ನಾಗಿ ಮಾಡುವುದೊಂದೇ ಕಡಿಮೆ!” ಎಂದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು