Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 38:10 - ಕನ್ನಡ ಸತ್ಯವೇದವು C.L. Bible (BSI)

10 ಈ ನಡತೆ ಸರ್ವೇಶ್ವರ ಸ್ವಾಮಿಯ ದೃಷ್ಟಿಯಲ್ಲಿ ಕೆಟ್ಟದಾಗಿತ್ತು. ಆದ್ದರಿಂದ ಸರ್ವೇಶ್ವರ ಅವನನ್ನೂ ಸಾವಿಗೀಡುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಈ ನಡತೆ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿದ್ದುದರಿಂದ ಆತನು ಅವನನ್ನೂ ಸಾಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಈ ನಡತೆ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿದ್ದದರಿಂದ ಆತನು ಅವನನ್ನೂ ಸಾಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಇದು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿದ್ದರಿಂದ ಆತನು ಓನಾನನನ್ನು ಸಹ ಸಾಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವನು ಮಾಡಿದ್ದು ಯೆಹೋವ ದೇವರ ದೃಷ್ಟಿಯಲ್ಲಿ ಮೆಚ್ಚಿಗೆಯಾಗಿರಲಿಲ್ಲ. ಆದ್ದರಿಂದ ಅವರು ಇವನನ್ನೂ ಸಾವಿಗೀಡುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 38:10
13 ತಿಳಿವುಗಳ ಹೋಲಿಕೆ  

ಯೆಹೂದನ ಮಕ್ಕಳು - ಏರ್, ಓನಾನ್, ಶೆಲಾಹ, ಪೆರೆಜ್ ಮತ್ತು ಜೆರಹ (ಇವರಲ್ಲಿ ಏರ್ ಹಾಗೂ ಓನಾನ್ ಕಾನಾನ್ ನಾಡಿನಲ್ಲೇ ಕಾಲವಾಗಿದ್ದರು). ಪೆರೆಚನ ಮಕ್ಕಳು - ಹೆಚ್ರೋನ್ ಮತ್ತು ಹಾಮೂಲ್.


ಯೆಹೂದನ ಮಕ್ಕಳಲ್ಲಿ ಏರ್, ಓನಾನ್ಯರು ಕಾನಾನ ನಾಡಿನಲ್ಲಿ ಸತ್ತರು.


ಇಸ್ರಯೇಲರು ತಮಗೆ ದುರವಸ್ಥೆ ಪ್ರಾಪ್ತವಾಯಿತೆಂದು ಸರ್ವೇಶ್ವರ ಸ್ವಾಮಿಗೆ ವಿರುದ್ಧ ಗುಣಗುಟ್ಟಿದರು. ಅದಕ್ಕೆ ಕೋಪಗೊಂಡ ಸರ್ವೇಶ್ವರ ಅವರ ಮಧ್ಯೆ ಬೆಂಕಿ ಬೀಳುವಂತೆ ಮಾಡಿದರು. ಇದರ ಪರಿಣಾಮವಾಗಿ ಪಾಳೆಯದ ಕಡೇಭಾಗದಲ್ಲಿದ್ದವರು ಸುಟ್ಟುಹೋದರು.


ಇದನ್ನು ನೋಡಿ ಸ್ವಾಮಿಯ ದೂತನಾದ ಹಗ್ಗಾಯನು ಜನರಿಗೆ, “ನಾನು ನಿಮ್ಮೊಡನೆ ಇದ್ದೇನೆ ಎಂದು ಸರ್ವೇಶ್ವರ ನುಡಿದಿದ್ದಾರೆ. ಇದು ಸರ್ವೇಶ್ವರಸ್ವಾಮಿಯ ಸಂದೇಶ,” ಎಂದನು.


ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲಾ ಅವರ ಬಳಿಗೆ ತಡಮಾಡದೆ ಕಳುಹಿಸುತ್ತಾಬಂದೆ. ‘ಎಚ್ಚರಿಕೆ, ನಾನು ಹೇಸುವ ಈ ಅಸಹ್ಯಕಾರ್ಯಗಳನ್ನು ಮಾಡಬೇಡಿ’ ಎಂದು ಪ್ರಕಟಿಸುತ್ತಾ ಬಂದೆ.


ಸರ್ವೇಶ್ವರ ನಿನ್ನ ಹರ್ಷವನ್ನು ಕಂಡು ಬೇಸರಗೊಂಡಾನು; ತನ್ನ ಕೋಪವನ್ನು ಅವನ ಕಡೆಯಿಂದ ತಿರುಗಿಸಿಬಿಟ್ಟಾನು.


ಆಪತ್ಕಾಲ ಬಂದಾಗ ದುಷ್ಟನು ಹಾಳಾಗುತ್ತಾನೆ; ಮರಣವೇಳೆಯಲ್ಲೂ ನೀತಿವಂತ ನಂಬಿಕೆಯಿಂದಿರುತ್ತಾನೆ.


ಜನಗಣತಿ ಮಾಡಿದ್ದು ದೇವರಿಗೆ ಕೆಟ್ಟದ್ದು ಎಂದು ಕಂಡಿತು. ಆದ್ದರಿಂದ ಅವರು ಇಸ್ರಯೇಲರನ್ನು ಶಿಕ್ಷಿಸಿದರು.


ದುಃಖಕಾಲ ತೀರಿದನಂತರ ದಾವೀದನು ಆಕೆಯನ್ನು ತನ್ನ ಮನೆಗೆ ಕರೆಯಿಸಿ ತನ್ನ ಹೆಂಡತಿಯನ್ನಾಗಿ ಮಾಡಿಕೊಂಡನು. ಆಕೆ ಅವನಿಂದ ಒಬ್ಬ ಮಗನನ್ನು ಹೆತ್ತಳು. ದಾವೀದನ ಈ ಕೃತ್ಯ ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದಾಗಿತ್ತು.


ಅದಕ್ಕೆ ಬಿಳಾಮನು, “ನಾನು ಪಾಪಮಾಡಿದೆ, ನೀನೆ ನನಗೆದುರಾಗಿ ದಾರಿಯಲ್ಲಿ ನಿಂತಿರುವುದು ನನಗೆ ತಿಳಿಯದೆ ಹೋಯಿತು. ನಾನು ಮಾಡುವುದು ನಿನಗೆ ಕೆಟ್ಟದ್ದಾಗಿ ತೋರಿದರೆ ಹಿಂದಕ್ಕೆ ತಿರುಗಿಕೊಳ್ಳುತ್ತೇನೆ,” ಎಂದನು.


ಮನುಷ್ಯನು ಮನುಷ್ಯನಿಗೆ ವಿರುದ್ಧ ಅಪರಾಧ ಮಾಡಿದರೆ ದೇವರು ಮಧ್ಯಸ್ಥಿಕೆಯನ್ನು ವಹಿಸುತ್ತಾರೆ. ಆದರೆ ಮನುಷ್ಯನು ಸರ್ವೇಶ್ವರನಿಗೆ ವಿರುದ್ಧ ಅಪರಾಧ ಮಾಡಿದರೆ ಮಧ್ಯಸ್ಥಿಕೆ ವಹಿಸುವವರಾರು?” ಎಂದು ಎಚ್ಚರಿಸಿದನು. ಆದರೂ ಅವರು ತಮ್ಮ ತಂದೆಯ ಮಾತಿಗೆ ಕಿವಿಗೊಡಲಿಲ್ಲ. ಎಂದೇ ಅವರನ್ನು ಕೊಲ್ಲಬೇಕೆಂಬುದು ಸರ್ವೇಶ್ವರನ ಚಿತ್ತವಾಗಿತ್ತು.


ಅನಂತರ ಅವನು, “ನನ್ನ ದೇವರಾದ ಸರ್ವೇಶ್ವರಾ, ನನಗೆ ಆಶ್ರಯವಿತ್ತ ಈ ವಿಧವೆಯ ಮಗನನ್ನು ನೀವು ಸಾಯಿಸಿ ಆಕೆಗೂ ಕೇಡನ್ನುಂಟುಮಾಡಿದ್ದೇಕೆ?” ಎಂದು ಹೇಳಿ,


ಯೆಹೂದನ ಹೆಂಡತಿ ಶೂನನ ಮಗಳಾದ ಕಾನಾನಳು. ಅವಳಿಂದ ಏರ್, ಓನಾನ್, ಶೇಲಹ ಎಂಬ ಮೂರು ಮಕ್ಕಳು ಜನಿಸಿದರು. ಅವನ ಹಿರಿಯ ಮಗ ಏರನು ಬಹಳ ದುಷ್ಟ. ಆದುದರಿಂದ ಸರ್ವೇಶ್ವರ ಅವನನ್ನು ಕೊಂದುಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು