Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 38:12 - ಕನ್ನಡ ಸತ್ಯವೇದವು C.L. Bible (BSI)

12 ಬಹಳ ದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ತೀರಿಹೋದಳು. ದುಃಖಶಮನವಾದ ಮೇಲೆ ಯೆಹೂದನು, ತನ್ನ ಕುರಿಗಳಿಗೆ ಉಣ್ಣೇ ಕತ್ತರಿಸುವವರಿದ್ದ ತಿಮ್ನಾ ಊರಿಗೆ ಹೋದನು. ಅದುಲ್ಲಾಮ್ಯದ ತನ್ನ ಗೆಳೆಯ ಹೀರಾ ಅವನ ಜೊತೆಯಲ್ಲಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಬಹಳ ದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ತೀರಿಕೊಂಡಳು. ಯೆಹೂದನು ತನಗೆ ದುಃಖಶಮನವಾದ ಮೇಲೆ ತನ್ನ ಕುರಿಗಳ ಉಣ್ಣೆ ಕತ್ತರಿಸುವವರ ಬಳಿಗೆ ತನ್ನ ಸ್ನೇಹಿತನಾದ ಹೀರಾ ಎಂಬ ಅದುಲ್ಲಾಮ್ಯನ ಜೊತೆಯಲ್ಲಿ ಗಟ್ಟಾ ಹತ್ತಿ ತಿಮ್ನಾ ಊರಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಬಹಳ ದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ತೀರಿಹೋದಳು. ಯೆಹೂದನು ತನಗೆ ದುಃಖ ಶಮನವಾದ ಮೇಲೆ ತನ್ನ ಕುರಿಗಳ ಉಣ್ಣೇ ಕತ್ತರಿಸುವವರ ಬಳಿಗೆ ತನ್ನ ಸ್ನೇಹಿತನಾದ ಹೀರಾ ಎಂಬ ಅದುಲ್ಲಾಮ್ಯನ ಜೊತೆಯಲ್ಲಿ ಗಟ್ಟಾ ಹತ್ತಿ ತಿಮ್ನಾ ಊರಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಮೇಲೆ ಬಹುದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ತೀರಿಕೊಂಡಳು. ಯೆಹೂದನು ತನ್ನ ದುಃಖದ ಸಮಯ ತೀರಿದ ಮೇಲೆ ಅದುಲ್ಲಾಮ್ಯದವನಾದ ತನ್ನ ಸ್ನೇಹಿತ ಹೀರಾನೊಂದಿಗೆ ತನ್ನ ಕುರಿಗಳ ಉಣ್ಣೆ ಕತ್ತರಿಸುವುದಕ್ಕಾಗಿ ತಿಮ್ನಾ ಊರಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಬಹಳ ದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ಸತ್ತಳು. ಯೆಹೂದನು ಆದರಣೆ ಹೊಂದಿದ ಮೇಲೆ, ತಾನೂ, ತನ್ನ ಸ್ನೇಹಿತನಾಗಿರುವ ಅದುಲ್ಲಾಮ್ಯನಾದ ಹೀರಾನನೂ ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವವರ ಬಳಿಗೆ ತಿಮ್ನಾ ಊರಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 38:12
13 ತಿಳಿವುಗಳ ಹೋಲಿಕೆ  

ಅಲ್ಲಿಂದ ಪಶ್ಚಿಮದಲ್ಲಿ ಇರುವ ಸೇಯಿರ್ ಬೆಟ್ಟದ ಕಡೆಗೆ ತಿರುಗಿಕೊಂಡು ಕೆಸಾಲೋನ್ ಎನಿಸಿಕೊಳ್ಳುವ ಯಾರೀಮ್ ಬೆಟ್ಟದ ಉತ್ತರಮಾರ್ಗವಾಗಿ ಇಳಿಯುತ್ತಾ ಬೇತ್ ಷೆಮೆಷಿಗೂ ಅಲ್ಲಿಂದ ತಿಮ್ನಾ ಊರಿಗೂ ಬಂದು


ಅರಸ ದಾವೀದನು, ಅಮ್ನೋನನ ಸಾವಿನ ದುಃಖ ಶಮನವಾದ ಮೇಲೆ ತನ್ನ ಮಗ ಅಬ್ಷಾಲೋಮನನ್ನು ನೋಡಲು ಹಾತೊರೆಯತೊಡಗಿದನು.


ಸಂಸೋನನು ತಿಮ್ನಾ ಊರಿಗೆ ಇಳಿದುಹೋಗಿ ಅಲ್ಲಿನ ಫಿಲಿಷ್ಟಿಯರ ಹೆಣ್ಣುಗಳಲ್ಲಿ ಒಬ್ಬಳನ್ನು ನೋಡಿದನು.


ಇಸಾಕನು ಆಕೆಯನ್ನು ತನ್ನ ತಾಯಿ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು. ಹೀಗೆ ಅವನು ರೆಬೆಕ್ಕಳನ್ನು ವರಿಸಿದನು; ಆಕೆ ಅವನಿಗೆ ಪತ್ನಿಯಾದಳು. ಆಕೆಯ ಮೇಲಿನ ಪ್ರೀತಿ, ತನ್ನ ತಾಯಿ ಸಾರಳನ್ನು ಕಳೆದುಕೊಂಡಿದ್ದ ಅವನಿಗೆ ಸಾಂತ್ವನ ತಂದಿತು.


ಅಬೀಗೈಲಳು ನಾಬಾಲನ ಬಳಿಗೆ ಬಂದಳು. ಅವನು ತನ್ನ ಮನೆಯಲ್ಲಿ ರಾಜರಂತೆ ಒಂದು ದೊಡ್ಡ ಔತಣವನ್ನು ಮಾಡಿಸಿ, ಬಹಳವಾಗಿ ಕುಡಿದು, ಬಹು ಸಂಭ್ರಮದಿಂದಿದ್ದ ಕಾರಣ ಈಕೆ ಮರುದಿವಸದವರೆಗೆ ಇದರ ವಿಷಯವಾಗಿ ಏನೂ ಹೇಳಲಿಲ್ಲ.


ಇತ್ಲಾ, ಏಲೋನ್, ತಿಮ್ಮಾ, ಎಕ್ರೋನ್, ಎಲ್ತೆಕೇ,


ಚೆನಾನ್, ಹದಾಷಾ, ಮಿಗ್ದಲ್ಗಾದ್, ದಿಲಾನ್, ಮಿಚ್ಪೆ, ಯೊಕ್ತೇಲ್,


ತಪ್ಪೂಹ, ಏನಾಮ್, ಯರ್ಮೂತ್,


ಇತ್ತ ಯೆಹೂದನು ತನ್ನ ಅಣ್ಣತಮ್ಮಂದಿರನ್ನು ಬಿಟ್ಟು ಅದುಲ್ಲಾಮ್ ಊರಿನವನಾದ ಹೀರಾ ಎಂಬವನ ಬಳಿ ವಾಸಮಾಡಲು ಹೋದನು.


ಇತ್ತ ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸಲು ಹೋಗಿದ್ದನು. ಅದೇ ಸಮಯದಲ್ಲಿ ರಾಖೇಲಳು ತನ್ನ ತಂದೆಯ ಮನೆಯಲ್ಲಿದ್ದ ಕುಲದೈವಗಳ ವಿಗ್ರಹಗಳನ್ನು ಕದ್ದುಕೊಂಡಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು