Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 38:15 - ಕನ್ನಡ ಸತ್ಯವೇದವು C.L. Bible (BSI)

15 ಯೆಹೂದನು ಆಕೆಯನ್ನು ನೋಡಿದಾಗ ಆಕೆಯ ಮುಖದ ಮೇಲೆ ಮುಸುಕು ಇತ್ತು; ಸೊಸೆ ಎಂದು ತಿಳಿಯದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆಹೂದನು ಆಕೆಯನ್ನು ಕಂಡಾಗ ಮುಖದ ಮೇಲೆ ಮುಸುಕು ಇದ್ದದರಿಂದ ಸೊಸೆ ಎಂದು ತಿಳಿಯದೆ ವೇಶ್ಯಾಸ್ತ್ರೀಯೆಂದು ಭಾವಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೆಹೂದನು ಆಕೆಯನ್ನು ಕಂಡಾಗ ಆಕೆಯ ಮುಖದ ಮೇಲೆ ಮುಸುಕು ಇದ್ದದರಿಂದ ಸೊಸೆ ಎಂದು ತಿಳಿಯದೆ ಸೂಳೆಯೆಂದು ಭಾವಿಸಿ ಮಾರ್ಗದಿಂದ ಓರೆಯಾಗಿ ಆಕೆಯ ಬಳಿಗೆ ಹೋಗಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೆಹೂದನು ಆ ದಾರಿಯಲ್ಲಿ ಪ್ರಯಾಣ ಮಾಡುತ್ತಿರಲು ಆಕೆಯನ್ನು ಕಂಡು ವೇಶ್ಯೆಯೆಂದು ಭಾವಿಸಿದನು. (ಆಕೆಯು ವೇಶ್ಯೆಯಂತೆ ಮುಸುಕು ಹಾಕಿಕೊಂಡಿದ್ದಳು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೆಹೂದನು ಅವಳನ್ನು ಕಂಡಾಗ, ಅವಳು ಮುಖ ಮುಚ್ಚಿಕೊಂಡಿದ್ದರಿಂದ ಅವಳು ವೇಶ್ಯೆಯೆಂದು ತಿಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 38:15
4 ತಿಳಿವುಗಳ ಹೋಲಿಕೆ  

ಆಗ ಆಕೆ, ‘ಶೇಲಹನು ಪ್ರಾಯಸ್ಥನಾಗಿದ್ದರೂ ನನ್ನನ್ನು ಅವನಿಗೆ ಮದುವೆ ಮಾಡಿಕೊಡಲಿಲ್ಲವಲ್ಲಾ’ ಎಂದುಕೊಂಡು ತನ್ನ ವಿಧವೆ ವಸ್ತ್ರಗಳನ್ನು ತೆಗೆದಿಟ್ಟಳು. ಮುಸುಕನ್ನು ಹಾಕಿಕೊಂಡು ತನ್ನನ್ನೇ ಮರೆಸಿಕೊಂಡಳು. ತಿಮ್ನಾ ಊರಿನ ದಾರಿಯಲ್ಲಿ ಇರುವ ಏನಯಿಮ್ ಊರಿನ ಬಾಗಿಲ ಬಳಿಯಲ್ಲೆ ಕುಳಿತುಕೊಂಡಳು.


ಆಕೆ ವೇಶ್ಯೆ ಎಂದೇ ಭಾವಿಸಿ, ದಾರಿಯಿಂದ ಓರೆಯಾಗಿ, ಆಕೆಯ ಬಳಿಗೆ ಹೋಗಿ, “ಸಂಭೋಗಕ್ಕೆ ಬರುತ್ತೀಯಾ?" ಎಂದು ಕರೆದನು. “ಬರಬೇಕಾದರೆ ಏನು ಕೊಡುತ್ತೀಯಾ?" ಎಂದಳು ಆಕೆ.


ಇಗೋ, ಅವನನ್ನು ಎದುರುಗೊಳ್ಳುತ್ತಾಳೆ ವೇಷಧಾರಿಯಾದ ಕಪಟಸ್ತ್ರೀಯೊಬ್ಬಳು.


“ಇಬ್ಬರೂ ಒಂದೇ ಶರೀರವಾಗುತ್ತಾರೆ,” ಎಂದು ಬರೆಯಲಾಗಿದೆ. ವೇಶ್ಯೆಯ ಸಂಸರ್ಗ ಮಾಡುವವನು ಅವಳೊಂದಿಗೆ ಒಂದೇ ದೇಹವಾಗುತ್ತಾನೆ, ಎಂದು ನಿಮಗೆ ತಿಳಿಯದೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು