Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 38:16 - ಕನ್ನಡ ಸತ್ಯವೇದವು C.L. Bible (BSI)

16 ಆಕೆ ವೇಶ್ಯೆ ಎಂದೇ ಭಾವಿಸಿ, ದಾರಿಯಿಂದ ಓರೆಯಾಗಿ, ಆಕೆಯ ಬಳಿಗೆ ಹೋಗಿ, “ಸಂಭೋಗಕ್ಕೆ ಬರುತ್ತೀಯಾ?" ಎಂದು ಕರೆದನು. “ಬರಬೇಕಾದರೆ ಏನು ಕೊಡುತ್ತೀಯಾ?" ಎಂದಳು ಆಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮಾರ್ಗದಿಂದ ಓರೆಯಾಗಿ ಆಕೆಯ ಬಳಿಗೆ ಹೋಗಿ, “ನಾನು ನಿನ್ನ ಬಳಿಗೆ ಬರಲೇ ಎಂದು ಕೇಳಿದನು” ಆಕೆ, “ನೀನು ನನ್ನಲ್ಲಿ ಬರಬೇಕಾದರೆ, ನನಗೆ ಏನು ಕೊಡುತ್ತೀ?” ಎಂದು ಕೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಾನು ನಿನ್ನ ಸಂಗಮ ಮಾಡುವದಕ್ಕೆ ಒಪ್ಪುತ್ತೀಯಾ ಅನ್ನಲು ಆಕೆ - ನನ್ನಲ್ಲಿ ಬರಬೇಕಾದರೆ ನೀನು ಏನು ಕೊಡುತ್ತೀ ಎಂದು ಕೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದ್ದರಿಂದ ಯೆಹೂದನು ಆಕೆಯ ಬಳಿಗೆ ಹೋಗಿ, “ನಾನು ನಿನ್ನನ್ನು ಕೂಡಬಹುದೇ?” ಎಂದು ಕೇಳಿದನು. (ಆಕೆ ತನ್ನ ಸೊಸೆಯಾದ ತಾಮಾರಳೆಂದು ಯೆಹೂದನಿಗೆ ತಿಳಿದಿರಲಿಲ್ಲ.) ಅವಳು “ನೀನು ನನಗೆ ಏನು ಕೊಡುವೆ?” ಎಂದು ಕೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಮಾರ್ಗದಿಂದ ಆಕೆಯ ಕಡೆಗೆ ತಿರುಗಿಕೊಂಡು ಅವನು, “ನನ್ನನ್ನು ನಿನ್ನ ಬಳಿಗೆ ಬರಗೊಡಿಸು,” ಎಂದನು. ಏಕೆಂದರೆ ಅವಳು ತನ್ನ ಸೊಸೆಯೆಂದು ಅವನಿಗೆ ತಿಳಿದಿರಲಿಲ್ಲ. ಅವಳು, “ನೀನು ನನ್ನ ಬಳಿಗೆ ಬಂದರೆ, ನನಗೆ ಏನು ಕೊಡುವೆ?” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 38:16
7 ತಿಳಿವುಗಳ ಹೋಲಿಕೆ  

ಹಣದ ವ್ಯಾಮೋಹವೇ ಎಲ್ಲಾ ಕೇಡುಗಳಿಗೂ ಮೂಲ. ಹಣದ ವ್ಯಾಮೋಹದಿಂದಲೇ ಹಲವರು ವಿಶ್ವಾಸದಿಂದ ದೂರ ಸರಿದು, ತಮ್ಮ ಹೃದಯಗಳನ್ನು ಹಲತರದ ತಿವಿತಗಳಿಗೆ ಗುರಿಮಾಡುತ್ತಾರೆ.


“ನಿಮಗೆ ನಾನು ಯೇಸುವನ್ನು ಹಿಡಿದುಕೊಟ್ಟರೆ ನನಗೇನು ಕೊಡುವಿರಿ?” ಎಂದು ಅವರನ್ನು ವಿಚಾರಿಸಿದನು. ಅವರೋ, ಅವನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ನಿಗದಿಮಾಡಿಕೊಟ್ಟರು.


ಕೂಡಲೇ ಅವನು ಆಕೆಯನ್ನು ಹಿಡಿದು, “ನನ್ನ ತಂಗೀ, ಬಂದು ನನ್ನ ಸಂಗಡ ಮಲಗಿಕೋ,” ಎಂದನು.


ಸಾಮಾನ್ಯವಾಗಿ ಸೂಳೆಯರಿಗೆ ಹಣ ಕೊಡುವುದುಂಟು; ನೀನಾದರೋ ನಿನ್ನ ಎಲ್ಲಾ ಮಿಂಡರಿಗೆ ನೀನೇ ಹಣ ನೀಡುತ್ತಿರುವೆ. ಅವರು ಎಲ್ಲ ಕಡೆಯಿಂದಲೂ ಬಂದು ನಿನ್ನಲ್ಲಿ ವ್ಯಭಿಚಾರಮಾಡುವಂತೆ ಅವರಿಗೆ ಬಹುಮಾನ ಕೊಡುತ್ತಿರುವೆ.


ಸೂಳೆತನದಿಂದಾಗಲಿ ಜಾರತ್ವದಿಂದಾಗಲಿ ಸಂಪಾದಿಸಿದ ಹಣವನ್ನು ಹರಕೆಯಾಗಿ ನಿಮ್ಮ ದೇವರಾದ ಸರ್ವೇಶ್ವರನ ಮಂದಿರದೊಳಗೆ ತರಲೇಬಾರದು; ಈ ಎರಡೂ ಅವರಿಗೆ ಅಸಹ್ಯವಾದುವು.


ಯೆಹೂದನು ಆಕೆಯನ್ನು ನೋಡಿದಾಗ ಆಕೆಯ ಮುಖದ ಮೇಲೆ ಮುಸುಕು ಇತ್ತು; ಸೊಸೆ ಎಂದು ತಿಳಿಯದೆ ಹೋಯಿತು.


“ಹಿಂಡಿನಿಂದ ಒಂದು ಹೋತಮರಿಯನ್ನು ಕಳಿಸುತ್ತೇನೆ,” ಎಂದ ಆತ. ಆಗ ಆಕೆ, "ಅದನ್ನು ಕಳಿಸುವ ತನಕ ನನ್ನಲ್ಲಿ ಏನಾದರು ಒತ್ತೆಯಿಡಬೇಕು,” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು