Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 38:2 - ಕನ್ನಡ ಸತ್ಯವೇದವು C.L. Bible (BSI)

2 ಅಲ್ಲಿ ಕಾನಾನ್ಯಳಾದ ಒಬ್ಬ ಮಹಿಳೆಯನ್ನು ಕಂಡು ಮದುವೆಯಾದನು. ಅವಳ ತಂದೆಯ ಹೆಸರು ಶೂಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅಲ್ಲಿ ಯೆಹೂದನು ಕಾನಾನ್ಯನಾದ ಶೂಗನ ಮಗಳನ್ನು ಕಂಡು ಅವಳನ್ನು ಮದುವೆ ಮಾಡಿಕೊಂಡನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅಲ್ಲಿ ಅವನು ಶೂಗನೆಂದು ಹೆಸರುಳ್ಳ ಒಬ್ಬ ಕಾನಾನ್ಯನ ಮಗಳನ್ನು ಕಂಡು ಅವಳನ್ನು ವರಿಸಿ ಅವಳ ಸಹವಾಸ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೂದನು ಅಲ್ಲಿ ಒಬ್ಬ ಕಾನಾನ್ಯನ ಮಗಳನ್ನು ಕಂಡು ಆಕೆಯನ್ನು ಮದುವೆಮಾಡಿಕೊಂಡನು. ಆ ಹುಡುಗಿಯ ತಂದೆಯ ಹೆಸರು ಶೂಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅಲ್ಲಿ ಯೆಹೂದನು ಕಾನಾನ್ಯನಾದ ಶೂಗನ ಮಗಳನ್ನು ಕಂಡು, ಅವಳನ್ನು ಮದುವೆಯಾಗಿ ಅವಳನ್ನು ಕೂಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 38:2
13 ತಿಳಿವುಗಳ ಹೋಲಿಕೆ  

ಯೆಹೂದನ ಹೆಂಡತಿ ಶೂನನ ಮಗಳಾದ ಕಾನಾನಳು. ಅವಳಿಂದ ಏರ್, ಓನಾನ್, ಶೇಲಹ ಎಂಬ ಮೂರು ಮಕ್ಕಳು ಜನಿಸಿದರು. ಅವನ ಹಿರಿಯ ಮಗ ಏರನು ಬಹಳ ದುಷ್ಟ. ಆದುದರಿಂದ ಸರ್ವೇಶ್ವರ ಅವನನ್ನು ಕೊಂದುಹಾಕಿದರು.


“ನನ್ನ ಮಗ ಇಸಾಕನಿಗೆ ಹೆಣ್ಣನ್ನು ನಾನು ವಾಸಮಾಡುತ್ತಿರುವ ಕಾನಾನ್ಯರಿಂದ ತರಬಾರದು;


ಅವಿಶ್ವಾಸಿಗಳೊಡನೆ ಒಂದಾಗಬೇಡಿ. ಧರ್ಮಕ್ಕೂ ಅಧರ್ಮಕ್ಕೂ ಸಾಟಿಯೆಲ್ಲಿ? ಬೆಳಕಿಗೂ ಕತ್ತಲೆಗೂ ಎಲ್ಲಿಯ ಸಂಬಂಧ?


ಒಂದು ದಿನ ಸಂಜೆ ಹೊತ್ತಿನಲ್ಲಿ ದಾವೀದನು ಮಂಚದಿಂದೆದ್ದು ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿದ್ದನು. ಆಗ ಅಲ್ಲಿಂದ ಬಹು ಸುಂದರಿಯಾದ ಒಬ್ಬ ಸ್ತ್ರೀ ಸ್ನಾನಮಾಡುವುದನ್ನು ಕಂಡನು.


ತರುವಾಯ ಸಂಸೋನನು ಗಾಜಾಕ್ಕೆ ಹೋದಾಗ ಅಲ್ಲಿ ಒಬ್ಬ ವೇಶ್ಯೆಯನ್ನು ಕಂಡು ಅವಳ ಬಳಿಗೆ ಹೋದನು.


ತಂದೆ ತಾಯಿಗಳ ಬಳಿಗೆ ಬಂದು ಅವರಿಗೆ, “ನಾನು ತಿಮ್ನಾ ಊರಲ್ಲಿ ಒಬ್ಬ ಫಿಲಿಷ್ಟಿಯ ಹೆಣ್ಣನ್ನು ನೋಡಿ ಇದ್ದೇನೆ; ಆಕೆಯನ್ನು ನನಗೆ ಮದುವೆ ಮಾಡಿಕೊಡಿ,” ಎಂದು ಹೇಳಿದನು.


ಯೆಹೂದನ ಮಕ್ಕಳು - ಏರ್, ಓನಾನ್, ಶೆಲಾಹ, ಪೆರೆಜ್ ಮತ್ತು ಜೆರಹ (ಇವರಲ್ಲಿ ಏರ್ ಹಾಗೂ ಓನಾನ್ ಕಾನಾನ್ ನಾಡಿನಲ್ಲೇ ಕಾಲವಾಗಿದ್ದರು). ಪೆರೆಚನ ಮಕ್ಕಳು - ಹೆಚ್ರೋನ್ ಮತ್ತು ಹಾಮೂಲ್.


ಹಿವ್ವಿಯನಾದ ಹಮೋರನ ಮಗನೂ ಆ ನಾಡಿಗೆ ಒಡೆಯನೂ ಆದ ಶೆಕೆಮನು ಆಕೆಯನ್ನು ನೋಡಿ, ಎತ್ತಿಕೊಂಡು ಹೋಗಿ, ಆಕೆಯನ್ನು ಜತೆಗೂಡಿ ಮಾನಭಂಗ ಮಾಡಿದನು.


ದೇವಪುತ್ರರೂ ಮನುಷ್ಯಪುತ್ರಿಯರೂ ಕೂಡಿ ಮಕ್ಕಳು ಹುಟ್ಟಿದರು. ಆ ಕಾಲದಿಂದಲೂ ಅದಾದನಂತರವೂ ಜಗದಲ್ಲಿ ‘ನೆಪೀಲಿಯರು’ ಇದ್ದರು. ಇವರೇ ಪ್ರಾಚೀನಕಾಲದ ಸುಪ್ರಸಿದ್ಧ ಪರಾಕ್ರಮಿಗಳು.


ಈ ಮನುಷ್ಯಪುತ್ರಿಯರ ಚೆಲುವನ್ನು ಕಂಡು ದೇವಪುತ್ರರು ತಮಗೆ ಇಷ್ಟಬಂದವರನ್ನೆಲ್ಲ ಮದುವೆಯಾದರು.


ಆಗ ಆ ಮಹಿಳೆ, “ಈ ಮರದ ಹಣ್ಣು ಊಟಕ್ಕೆ ಎಷ್ಟು ಚೆನ್ನಾಗಿದೆ, ನೋಟಕ್ಕೆ ಎಷ್ಟು ರಮಣೀಯವಾಗಿದೆ. ಜ್ಞಾನಾರ್ಜನೆಗೆ ಎಷ್ಟು ಆಕರ್ಷಣೀಯವಾಗಿದೆ” ಎಂದು ತಿಳಿದು, ಅದನ್ನು ತೆಗೆದುಕೊಂಡು ತಿಂದಳು; ಸಂಗಡವಿದ್ದ ಗಂಡನಿಗೂ ಕೊಟ್ಟಳು; ಅವನೂ ತಿಂದನು.


ಯೆಹೂದನ ಮಕ್ಕಳಲ್ಲಿ ಏರ್, ಓನಾನ್ಯರು ಕಾನಾನ ನಾಡಿನಲ್ಲಿ ಸತ್ತರು.


ಆಗ ಇಸಾಕನು ಯಕೋಬನನ್ನು ಕರೆದು, “ನೀನು ಕಾನಾನ್ಯರ ಹೆಣ್ಣನ್ನು ಮದುವೆಮಾಡಿಕೊಳ್ಳಬೇಡ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು