Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 38:23 - ಕನ್ನಡ ಸತ್ಯವೇದವು C.L. Bible (BSI)

23 ಅದಕ್ಕೆ ಯೆಹೂದನು, “ಇನ್ನು ನಾವು ಪರಿಹಾಸ್ಯಕ್ಕೆ ಗುರಿಯಾದೇವು; ನಾನಿಟ್ಟ ಒತ್ತೆಯನ್ನು ಅವಳೇ ಇಟ್ಟುಕೊಳ್ಳಲಿ; ನಾನಂತೂ ಹೋತಮರಿಯನ್ನು ಕಳಿಸಿದ್ದಾಯಿತು; ನಿನ್ನಿಂದಲು ಅವಳನ್ನು ಕಂಡುಹಿಡಿಯಲಾಗಲಿಲ್ಲ,” ಎಂದು ಸುಮ್ಮನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅದಕ್ಕೆ ಯೆಹೂದನು, “ನಾವು ಅಪಹಾಸ್ಯಕ್ಕೆ ಒಳಗಾಗದ ಹಾಗೆ ಆ ವಸ್ತುಗಳನ್ನು ಅವಳೇ ಇಟ್ಟುಕೊಳ್ಳಲಿ. ನಾನಂತೂ ಹೋತಮರಿಯನ್ನು ಕಳುಹಿಸಿಕೊಟ್ಟೆನು. ಅವಳು ನಿನಗೆ ಸಿಕ್ಕಲಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅದಕ್ಕೆ ಯೆಹೂದನು - ಇನ್ನು ಹಾಸ್ಯಕ್ಕೆ ಗುರಿಯಾದೇವು; ನಾನಿಟ್ಟ ಒತ್ತೆಯನ್ನು ಅವಳೇ ಇಟ್ಟುಕೊಳ್ಳಲಿ; ನಾನಂತೂ ಹೋತಮರಿಯನ್ನು ಕಳುಹಿಸಿಕೊಟ್ಟೆನು; ಅವಳು ನಿನಗೆ ಸಿಕ್ಕಲಿಲ್ಲವಷ್ಟೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅದಕ್ಕೆ ಯೆಹೂದನು, “ಆಕೆ ಆ ವಸ್ತುಗಳನ್ನು ಇಟ್ಟುಕೊಳ್ಳಲಿ. ಜನರು ನಮ್ಮನ್ನು ಕಂಡು ನಗುವುದು ನನಗೆ ಇಷ್ಟವಿಲ್ಲ. ನಾನು ಅವಳಿಗೆ ಆಡನ್ನು ಕೊಡಲು ಪ್ರಯತ್ನಿಸಿದೆ. ಆದರೆ ಅವಳು ನಿನಗೆ ಸಿಕ್ಕಲಿಲ್ಲವಷ್ಟೇ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಗ ಯೆಹೂದನು, “ನಾವು ಅಪಹಾಸ್ಯಕ್ಕೆ ಒಳಗಾಗದ ಹಾಗೆ ಅವಳು ಅದನ್ನು ತೆಗೆದುಕೊಂಡು ಹೋಗಲಿ, ಈ ಮೇಕೆಯ ಮರಿಯನ್ನು ನಾನು ಕಳುಹಿಸಿದೆನು, ಆದರೆ ಆಕೆಯು ನಿನಗೆ ಸಿಕ್ಕಲಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 38:23
8 ತಿಳಿವುಗಳ ಹೋಲಿಕೆ  

“ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ಬೆತ್ತಲೆಯಾಗಿ ಎಲ್ಲರ ಮುಂದೆ ಕಾಣಿಸಿಕೊಂಡು ನಾಚಿಕೆಗೀಡಾಗದಂತೆ ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಧರಿಸಿಕೊಂಡಿರುವವನು ಭಾಗ್ಯವಂತನು!”


ಆ ಜನರು ಗುಟ್ಟಾಗಿ ಮಾಡುವ ಕೃತ್ಯಗಳು ಹೇಳುವುದಕ್ಕೂ ಅವಮಾನಕರವಾದುವು.


ಲಜ್ಜೆಗೆಟ್ಟ ಗುಪ್ತಕಾರ್ಯಗಳಿಂದ ನಾವು ದೂರವಿದ್ದೇವೆ. ನಮ್ಮ ನಡತೆಯಲ್ಲಿ ಮೋಸ, ವಂಚನೆ ಎಂಬುದಿಲ್ಲ. ದೇವರ ವಾಕ್ಯವನ್ನು ನಾವು ಅಪಾರ್ಥಗೊಳಿಸುವುದಿಲ್ಲ. ಬದಲಿಗೆ ಸತ್ಯವನ್ನು ಪ್ರಾಮಾಣಿಕವಾಗಿ ಸಾರುತ್ತೇವೆ. ಹೀಗೆ ದೇವರ ಸಮ್ಮುಖದಲ್ಲಿ ಸಜ್ಜನರಾದವರಿಗೆ ಸಾಕ್ಷಿಗಳಾಗಿದ್ದೇವೆ.


ಯಾವ ಕೃತ್ಯಗಳ ವಿಷಯದಲ್ಲಿ ಈಗ ನೀವು ನಾಚಿಕೆಪಡುತ್ತೀರೋ ಅವುಗಳನ್ನು ನೀವು ಹಿಂದೆ ಮಾಡುತ್ತಾ ಬಂದಿರಿ. ಅವುಗಳಿಂದ ನಿಮಗೆ ದೊರೆತ ಪ್ರತಿಫಲವಾದರೂ ಏನು? ಮೃತ್ಯುವೇ ಅವುಗಳ ಅಂತ್ಯಫಲ.


ಪೆಟ್ಟಿಗೂ ಅಪಕೀರ್ತಿಗೂ ಅವನು ಪಾತ್ರನು; ಅವನಿಗಾಗುವ ಅವಮಾನ ತೊಲಗದು ಎಂದಿಗು.


ಹೀಗಿರಲು, ನೀನು ಸರ್ವೇಶ್ವರನಾದ ನನ್ನ ಆಜ್ಞೆಯನ್ನು ತಿರಸ್ಕರಿಸಿ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದೇಕೆ? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡೆ.


ಅವನು ಯೆಹೂದನ ಬಳಿಗೆ ಹಿಂದಿರುಗಿ ಬಂದು, “ನಾನು ಅವಳನ್ನು ಕಾಣಲಿಲ್ಲ; ವಿಚಾರಿಸಿದಾಗ ಆ ಊರಿನವರು ಇಲ್ಲಿ ಯಾವ ವೇಶ್ಯೆಯೂ ಇಲ್ಲವೆಂದರು,” ಎಂದು ವರದಿಮಾಡಿದನು.


ಸುಮಾರು ಮೂರು ತಿಂಗಳಾದ ಬಳಿಕ, ಯೆಹೂದನಿಗೆ ತನ್ನ ಸೊಸೆ ತಾಮಾರಳು ವ್ಯಭಿಚಾರದಿಂದ ಗರ್ಭವತಿಯಾಗಿದ್ದಾಳೆಂಬ ಸಮಾಚಾರ ಬಂದಿತು. ಅವನು, “ಅವಳನ್ನು ಎಳೆದು ತನ್ನಿ; ಸುಟ್ಟುಹಾಕಬೇಕು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು