ಆದಿಕಾಂಡ 38:24 - ಕನ್ನಡ ಸತ್ಯವೇದವು C.L. Bible (BSI)24 ಸುಮಾರು ಮೂರು ತಿಂಗಳಾದ ಬಳಿಕ, ಯೆಹೂದನಿಗೆ ತನ್ನ ಸೊಸೆ ತಾಮಾರಳು ವ್ಯಭಿಚಾರದಿಂದ ಗರ್ಭವತಿಯಾಗಿದ್ದಾಳೆಂಬ ಸಮಾಚಾರ ಬಂದಿತು. ಅವನು, “ಅವಳನ್ನು ಎಳೆದು ತನ್ನಿ; ಸುಟ್ಟುಹಾಕಬೇಕು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಸುಮಾರು ಮೂರು ತಿಂಗಳಾದ ಮೇಲೆ ಯೆಹೂದನಿಗೆ, “ನಿನ್ನ ಸೊಸೆಯಾದ ತಾಮಾರಳು ವ್ಯಭಿಚಾರದಿಂದ ಬಸುರಾಗಿದ್ದಾಳೆ” ಎಂಬ ವರ್ತಮಾನವನ್ನು ತಿಳಿಸಿದರು. ಆಗ ಯೆಹೂದನು, “ಆಕೆಯನ್ನು ಹೊರಗೆ ಕರತನ್ನಿರಿ, ಆಕೆಯನ್ನು ಸುಡಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಸುಮಾರು ಮೂರು ತಿಂಗಳಾದ ಮೇಲೆ ಯೆಹೂದನು ತನ್ನ ಸೊಸೆಯಾದ ತಾಮಾರಳು ವ್ಯಭಿಚಾರದಿಂದ ಬಸುರಾಗಿದ್ದಾಳೆ ಎಂಬ ವರ್ತಮಾನವನ್ನು ತಿಳಿದು - ಅವಳನ್ನು ಹೊರಗೆ ತನ್ನಿರಿ, ಸುಡಬೇಕಾಗಿದೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಮೂರು ತಿಂಗಳಾದ ಬಳಿಕ, ಯಾರೋ ಒಬ್ಬನು ಯೆಹೂದನಿಗೆ, “ನಿನ್ನ ಸೊಸೆಯಾದ ತಾಮಾರಳು ವ್ಯಭಿಚಾರದಿಂದ ಗರ್ಭಿಣಿಯಾಗಿದ್ದಾಳೆ” ಎಂದು ತಿಳಿಸಿದನು. ಆಗ ಯೆಹೂದನು, “ಆಕೆಯನ್ನು ಎಳೆದುಕೊಂಡು ಹೋಗಿ ಸುಟ್ಟುಬಿಡಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಹೆಚ್ಚು ಕಡಿಮೆ ಮೂರು ತಿಂಗಳಾದ ಮೇಲೆ ಯೆಹೂದನಿಗೆ, “ನಿನ್ನ ಸೊಸೆ ತಾಮಾರಳು ವೇಶ್ಯಾವೃತ್ತಿಮಾಡಿ ವ್ಯಭಿಚಾರದಿಂದ ಗರ್ಭಿಣಿಯಾಗಿದ್ದಾಳೆ,” ಎಂದು ತಿಳಿಸಿದರು. ಆಗ ಯೆಹೂದನು, “ಅವಳನ್ನು ಹೊರಗೆ ತನ್ನಿರಿ, ಅವಳನ್ನು ಸುಡಬೇಕು,” ಎಂದನು. ಅಧ್ಯಾಯವನ್ನು ನೋಡಿ |