ಆದಿಕಾಂಡ 38:29 - ಕನ್ನಡ ಸತ್ಯವೇದವು C.L. Bible (BSI)29 ಆದರೆ ಅದು ಕೈಯನ್ನು ಹಿಂದಕ್ಕೆ ತೆಗೆದುಕೊಂಡಿತು. ಅದರೊಡನೆ ಇದ್ದ ಇನ್ನೊಂದು ಕೂಸು ಹೊರಗೆ ಬಂದಿತು. ಇದನ್ನು ಕಂಡ ಸೂಲಗಿತ್ತಿ, “ನೀನು ಕಿತ್ತುಕೊಂಡು ಬಂದಿರುತ್ತೀಯಲ್ಲಾ,” ಎಂದಳು. ಈ ಕಾರಣ ಆ ಮಗುವಿಗೆ ‘ಪೆರೆಚ್’ ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಅದು ಕೈಯನ್ನು ಹಿಂದಕ್ಕೆ ತೆಗೆಯಲು, ಅದರೊಡನೆ ಇದ್ದ ಮತ್ತೊಂದು ಶಿಶುವು ಹೊರಗೆ ಬಂದಿತು. ಸೂಲಗಿತ್ತಿಯು ಇದನ್ನು ಕಂಡು, “ನೀನು ಛೇದಿಸಿಕೊಂಡು ಬಂದೆಯಾ?” ಎಂದು ಹೇಳಿ, ಅದಕ್ಕೆ “ಪೆರೆಚ್” ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಸೂಲಗಿತ್ತಿಯು ಇದನ್ನು ಕಂಡು - ನೀನು ಛೇದಿಸಿಕೊಂಡು ಬಂದದ್ದೇನು ಎಂದು ಹೇಳಿದ್ದದರಿಂದ ಅದಕ್ಕೆ ಪೆರೆಚ್ ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಆದರೆ ಆ ಮಗು ತನ್ನ ಕೈಯನ್ನು ಹಿಂದಕ್ಕೆ ಎಳೆದುಕೊಂಡಿತು. ಆಮೇಲೆ ಮತ್ತೊಂದು ಮಗುವು ಮೊದಲು ಹುಟ್ಟಿತು. ಆದ್ದರಿಂದ ದಾದಿಯು, “ನೀನು ಮೊದಲನೆಯವನನ್ನು ಛೇದಿಸಿಕೊಂಡು ಬಂದೆ” ಅಂದಳು. ಆದ್ದರಿಂದ ಅವರು ಆ ಮಗುವಿಗೆ “ಪೆರೆಚ್” ಎಂದು ಹೆಸರಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಆ ಮಗುವು ತನ್ನ ಕೈಯನ್ನು ಹಿಂದಕ್ಕೆ ಎಳೆದಾಗ, ಅವನ ಸಹೋದರನು ಹೊರಗೆ ಬಂದನು. ಆಗ ಅವಳು, “ನೀನು ಕಿತ್ತುಕೊಂಡು ಹೊರಗೆ ಬಂದೆಯಾ?” ಎಂದಳು. ಹೀಗೆ ಅವನಿಗೆ ಪೆರೆಚ್ ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿ |
ಜೆರುಸಲೇಮಿನಲ್ಲಿ ಯೆಹೂದನ ಗೋತ್ರದ ಆರುನೂರ ತೊಂಬತ್ತು ಕುಟುಂಬಗಳು ನೆಲಸಿದವು. ಯೆಹೂದನ ಮಗ ಪೆರೆಚನ ಸಂತತಿಯವರಿಗೆ ಅಮ್ಮೀಹೂದನ ಮಗನೂ ಒಮ್ರಿಯ ಮೊಮ್ಮಗನೂ ಆದ ಊತೈ ನಾಯಕನಾಗಿದ್ದನು. ಇಮ್ರಿ ಮತ್ತು ಬಾನಿ ಎಂಬವರು ಅವನ ಪೂರ್ವಜರಲ್ಲಿ ಇಬ್ಬರು. ಯೆಹೂದನ ಮಗ ಶೇಲಾಹನ ಸಂತಾನದವರಿಗೆ ಆಸಾಯನು ನಾಯಕ ಹಾಗೂ ಗೋತ್ರದ ಮುಖ್ಯಸ್ಥನಾಗಿದ್ದನು. ಯೆಹೂದನ ಮಗ ಜೆರಹನ ಸಂತತಿಯವರಿಗೆ ಯೆಯೂವೇಲ್ ನಾಯಕನಾಗಿದ್ದನು.