ಆದಿಕಾಂಡ 38:5 - ಕನ್ನಡ ಸತ್ಯವೇದವು C.L. Bible (BSI)5 ಮತ್ತೊಮ್ಮೆ ಆಕೆ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತಳು. ಅದಕ್ಕೆ ‘ಶೇಲಹ’ ಎಂದು ಹೆಸರಿಟ್ಟಳು. ಆಕೆ ಈ ಮಗುವನ್ನು ಹೆರುವಾಗ ಯೆಹೂದನು ಕೆಜೀಬ್ ಊರಿನಲ್ಲಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವಳು ಪುನಃ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತಳು. ಅದಕ್ಕೆ “ಶೇಲಹ” ಎಂದು ಹೆಸರಿಟ್ಟಳು. ಅವಳು ಆ ಮಗುವನ್ನು ಹೆತ್ತಾಗ ಯೆಹೂದನು ಕಜೀಬೂರಿನಲ್ಲಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅವಳು ಮತ್ತೊಂದು ಸಾರಿ ಗರ್ಭಿಣಿಯಾಗಿ ಗಂಡುಮಗುವನ್ನು ಹೆತ್ತು ಅದಕ್ಕೆ ಶೇಲಹನೆಂದು ಹೆಸರಿಟ್ಟಳು; ಅವಳು ಆ ಮಗುವನ್ನು ಹೆರುವಾಗ ಯೆಹೂದನು ಕಜೀಬೂರಿನಲ್ಲಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆಕೆಗೆ ಮೂರನೆಯ ಮಗನು ಹುಟ್ಟಿದಾಗ ಆಕೆ ಅದಕ್ಕೆ ಶೇಲಹ ಎಂದು ಹೆಸರಿಟ್ಟಳು. ಆ ಮಗು ಹುಟ್ಟಿದಾಗ ಯೆಹೂದನು ಕಜೀಬೂರಿನಲ್ಲಿ ವಾಸಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆಕೆಯು ಮತ್ತೊಂದು ಸಾರಿ ಮಗನನ್ನು ಹೆತ್ತು, ಅವನಿಗೆ ಶೇಲಹ ಎಂದು ಹೆಸರಿಟ್ಟಳು. ಆಕೆಯು ಅವನನ್ನು ಹೆತ್ತಾಗ, ಯೆಹೂದನು ಕೆಜೀಬಿನಲ್ಲಿ ಇದ್ದನು. ಅಧ್ಯಾಯವನ್ನು ನೋಡಿ |