Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 38:7 - ಕನ್ನಡ ಸತ್ಯವೇದವು C.L. Bible (BSI)

7 ಆದರೆ ಯೆಹೂದನ ಈ ಹಿರಿಯ ಮಗ ಸರ್ವೇಶ್ವರ ಸ್ವಾಮಿಯ ದೃಷ್ಟಿಯಲ್ಲಿ ಕೆಟ್ಟವನಾಗಿದ್ದನು. ಆದ್ದರಿಂದ ಸರ್ವೇಶ್ವರ ಅವನನ್ನು ಸಾವಿಗೀಡುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಯೆಹೋವನ ದೃಷ್ಟಿಯಲ್ಲಿ ಕೆಟ್ಟವನಾಗಿದ್ದುದರಿಂದ ಯೆಹೋವನು ಅವನನ್ನು ಸಾಯುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದರೆ ಯೆಹೂದನ ಚೊಚ್ಚಲಮಗನಾದ ಏರನು ಯೆಹೋವನ ದೃಷ್ಟಿಯಲ್ಲಿ ಕೆಟ್ಟವನಾದ್ದರಿಂದ ಯೆಹೋವನು ಅವನನ್ನು ಸಾಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ಏರನು ಅನೇಕ ಕೆಟ್ಟಕಾರ್ಯಗಳನ್ನು ಮಾಡಿದ್ದರಿಂದ ಯೆಹೋವನು ಅವನನ್ನು ಸಾಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದರೆ ಯೆಹೂದನ ಜೇಷ್ಠಪುತ್ರ ಏರನು ಯೆಹೋವ ದೇವರ ದೃಷ್ಟಿಯಲ್ಲಿ ದುಷ್ಟನಾಗಿದ್ದುದರಿಂದ, ಯೆಹೋವ ದೇವರು ಅವನನ್ನು ಸಾವಿಗೀಡುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 38:7
11 ತಿಳಿವುಗಳ ಹೋಲಿಕೆ  

ಯೆಹೂದನ ಹೆಂಡತಿ ಶೂನನ ಮಗಳಾದ ಕಾನಾನಳು. ಅವಳಿಂದ ಏರ್, ಓನಾನ್, ಶೇಲಹ ಎಂಬ ಮೂರು ಮಕ್ಕಳು ಜನಿಸಿದರು. ಅವನ ಹಿರಿಯ ಮಗ ಏರನು ಬಹಳ ದುಷ್ಟ. ಆದುದರಿಂದ ಸರ್ವೇಶ್ವರ ಅವನನ್ನು ಕೊಂದುಹಾಕಿದರು.


ಯೆಹೂದನ ಮಕ್ಕಳು - ಏರ್, ಓನಾನ್, ಶೆಲಾಹ, ಪೆರೆಜ್ ಮತ್ತು ಜೆರಹ (ಇವರಲ್ಲಿ ಏರ್ ಹಾಗೂ ಓನಾನ್ ಕಾನಾನ್ ನಾಡಿನಲ್ಲೇ ಕಾಲವಾಗಿದ್ದರು). ಪೆರೆಚನ ಮಕ್ಕಳು - ಹೆಚ್ರೋನ್ ಮತ್ತು ಹಾಮೂಲ್.


ಯೆಹೂದನ ಮಕ್ಕಳಲ್ಲಿ ಏರ್, ಓನಾನ್ಯರು ಕಾನಾನ ನಾಡಿನಲ್ಲಿ ಸತ್ತರು.


ನಾವು ಈ ಸ್ಥಳವನ್ನು ನಾಶಮಾಡುವುದಕ್ಕೆ ಬಂದವರು. ಇಲ್ಲಿಯವರ ವಿಷಯವಾಗಿ ಬಂದ ಆಪಾದನೆ ದೊಡ್ಡದಾದುದರಿಂದ ಇವರನ್ನು ನಾಶಮಾಡುವುದಕ್ಕಾಗಿ ಸರ್ವೇಶ್ವರ ನಮ್ಮನ್ನು ಕಳಿಸಿದ್ದಾರೆ,” ಎಂದು ತಿಳಿಸಿದರು.


ಸೋದೋಮಿನ ಪಟ್ಟಣದವರು ಬಹಳ ದುಷ್ಟರು; ಪ್ರಭುವಿನ ದೃಷ್ಟಿಯಲ್ಲಿ ಕಡುಪಾಪಿಗಳು.


ದುರ್ಜನರನು ದೇವಾ, ನೀ ದಬ್ಬಿಬಿಡುವೆ ಪಾತಾಳಕೆ I ಅರ್ಧಾಯುಷ್ಯವನೂ ಬಾಳಬಿಡೆ ವಂಚಕ ಕೊಲೆಗಾರರಿಗೆ I ನಾನಾದರೋ ಓ ದೇವಾ, ನೆಮ್ಮಿಗೊಂಡಿರುವೆ ನಿನಗೆ II


ಇದಲ್ಲದೆ, ಅವನು ತನ್ನ ಮಕ್ಕಳನ್ನು ಬೆನ್‍ಹಿನ್ನೋಮ್ ಕಣಿವೆಯಲ್ಲಿ ಬಲಿಯಗ್ನಿ ಪರೀಕ್ಷೆಗೆ ಗುರಿಪಡಿಸಿದನು; ಕಣಿ ಹೇಳಿಸುವುದು, ಶಕುನ ನೋಡಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಭೂತಪ್ರೇತಗಳನ್ನು ವಿಚಾರಿಸುವವರನ್ನು ಸಂಪರ್ಕಿಸುವುದು ಇವೇ ಮೊದಲಾದ ದುಷ್ಕೃತ್ಯಗಳಿಂದ ಸರ್ವೇಶ್ವರನಿಗೆ ಕೋಪ ಬರಿಸಿದನು.


ಆದರೆ ನೋಹನ ವಿಷಯದಲ್ಲಿ ಸರ್ವೇಶ್ವರ ಸ್ವಾಮಿಗೆ ಮೆಚ್ಚುಗೆಯಿತ್ತು.


ಯೆಹೂದನು ತನ್ನ ಜೇಷ್ಠಪುತ್ರ ಏರನಿಗೆ ‘ತಾಮಾರ್’ ಎಂಬ ಹೆಣ್ಣನ್ನು ತಂದು ಮದುವೆಮಾಡಿದನು.


ಮನುಷ್ಯನು ಮನುಷ್ಯನಿಗೆ ವಿರುದ್ಧ ಅಪರಾಧ ಮಾಡಿದರೆ ದೇವರು ಮಧ್ಯಸ್ಥಿಕೆಯನ್ನು ವಹಿಸುತ್ತಾರೆ. ಆದರೆ ಮನುಷ್ಯನು ಸರ್ವೇಶ್ವರನಿಗೆ ವಿರುದ್ಧ ಅಪರಾಧ ಮಾಡಿದರೆ ಮಧ್ಯಸ್ಥಿಕೆ ವಹಿಸುವವರಾರು?” ಎಂದು ಎಚ್ಚರಿಸಿದನು. ಆದರೂ ಅವರು ತಮ್ಮ ತಂದೆಯ ಮಾತಿಗೆ ಕಿವಿಗೊಡಲಿಲ್ಲ. ಎಂದೇ ಅವರನ್ನು ಕೊಲ್ಲಬೇಕೆಂಬುದು ಸರ್ವೇಶ್ವರನ ಚಿತ್ತವಾಗಿತ್ತು.


ಅನಂತರ ಅವನು, “ನನ್ನ ದೇವರಾದ ಸರ್ವೇಶ್ವರಾ, ನನಗೆ ಆಶ್ರಯವಿತ್ತ ಈ ವಿಧವೆಯ ಮಗನನ್ನು ನೀವು ಸಾಯಿಸಿ ಆಕೆಗೂ ಕೇಡನ್ನುಂಟುಮಾಡಿದ್ದೇಕೆ?” ಎಂದು ಹೇಳಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು