Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 39:1 - ಕನ್ನಡ ಸತ್ಯವೇದವು C.L. Bible (BSI)

1 ಅತ್ತ ಜೋಸೆಫನನ್ನು ತೆಗೆದುಕೊಂಡುಹೋದ ಇಷ್ಮಾಯೇಲ್ಯರು ಈಜಿಪ್ಟ್ ದೇಶವನ್ನು ಸೇರಿದಾಗ ಅವನನ್ನು ಈಜಿಪ್ಟಿನ ಪೋಟೀಫರ್ ಎಂಬವನಿಗೆ ಮಾರಿಬಿಟ್ಟರು. ಪೋಟೀಫರನು ಫರೋಹನ ಆಸ್ಥಾನದ ಒಬ್ಬ ಉದ್ಯೋಗಿ ಮತ್ತು ಅಂಗರಕ್ಷಕರ ದಳಪತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೋಸೇಫನನ್ನು ಕ್ರಯಕ್ಕೆ ತೆಗೆದುಕೊಂಡು ಹೋಗಿದ್ದ ಇಷ್ಮಾಯೇಲರು ಐಗುಪ್ತ ದೇಶಕ್ಕೆ ಹೋದರು. ಅಲ್ಲಿ ಒಬ್ಬ ಐಗುಪ್ತ್ಯನು ಅವನನ್ನು ಅವರಿಂದ ಕ್ರಯಕ್ಕೆ ತೆಗೆದುಕೊಂಡನು. ಇವನು ಫರೋಹನ ಉದ್ಯೋಗಸ್ಥನು, ಐಗುಪ್ತರ ದಂಡಿನ ಮುಖ್ಯಸ್ಥನು ಆಗಿದ್ದ ಪೋಟೀಫರನು ಎಂಬುವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೋಸೇಫನನ್ನು ತೆಗೆದುಕೊಂಡುಹೋದ ಇಷ್ಮಾಯೇಲ್ಯರು ಐಗುಪ್ತದೇಶಕ್ಕೆ ಸೇರಿದಾಗ ಒಬ್ಬ ಐಗುಪ್ತದವನು ಅವನನ್ನು ಅವರಿಂದ ಕ್ರಯಕ್ಕೆ ತೆಗೆದುಕೊಂಡನು; ಇವನು ಯಾರಂದರೆ ಫರೋಹನ ಉದ್ಯೋಗಸ್ಥನೂ ಮೈಗಾವಲಿನವರ ದಳವಾಯಿಯೂ ಆಗಿದ್ದ ಪೋಟೀಫರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೋಸೇಫನನ್ನು ಖರೀದಿಮಾಡಿದ ವ್ಯಾಪಾರಿಗಳು ಅವನನ್ನು ಈಜಿಪ್ಟಿಗೆ ತೆಗೆದುಕೊಂಡು ಬಂದು ಫರೋಹನ ಕಾವಲುಗಾರರ ನಾಯಕನಾದ ಪೋಟೀಫರನಿಗೆ ಮಾರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೋಸೇಫನನ್ನು ಕರೆದುಕೊಂಡುಹೋದ ಇಷ್ಮಾಯೇಲರು ಈಜಿಪ್ಟಿಗೆ ಸೇರಿದಾಗ ಅವನನ್ನು ಈಜಿಪ್ಟಿನ ಪೋಟೀಫರ್ ಎಂಬವನಿಗೆ ಮಾರಿಬಿಟ್ಟರು. ಪೋಟೀಫರನು ಫರೋಹನ ಉದ್ಯೋಗಸ್ಥನೂ ಮೈಗಾವಲಿನ ದಳಪತಿಯೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 39:1
7 ತಿಳಿವುಗಳ ಹೋಲಿಕೆ  

ಕಳಿಸಿದ ಅವರಿಗೆ ಮುಂದಾಗಿ ಒಬ್ಬಾತನನು I ದಾಸತ್ವಕೆ ಮಾರಲಾದ ಆ ಜೋಸೆಫನನು II


ಅಷ್ಟರಲ್ಲಿ, ಮಿದ್ಯಾನಿನ ವರ್ತಕರು ಹಾದುಹೋಗುತ್ತಿದ್ದರು. ಅವರು ಜೋಸೆಫನನ್ನು ಬಾವಿಯೊಳಗಿಂದ ಎತ್ತಿ ಈ ಇಷ್ಮಾಯೇಲರಿಗೆ ಇಪ್ಪತ್ತು ಬೆಳ್ಳಿನಾಣ್ಯಗಳಿಗೆ ಮಾರಿಬಿಟ್ಟರು. ಇವರು ಅವನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡು ಹೋದರು.


ಮಿದ್ಯಾನ್ಯರು ಜೋಸೆಫನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡುಹೋಗಿ ಫರೋಹನ ಆಸ್ಥಾನದಲ್ಲಿದ್ದ ಪೋಟೀಫರನಿಗೆ ಮಾರಿದರು; ಇವನು, ದೊಡ್ಡ ಉದ್ಯೋಗಸ್ಥನೂ ಮೈಗಾವಲಿನವರ ದಳಪತಿಯೂ ಆಗಿದ್ದನು.


ತರುವಾಯ ಅವರು ಊಟಕ್ಕೆ ಕುಳಿತುಕೊಂಡರು. ಅಷ್ಟರಲ್ಲಿ, ಇಷ್ಮಾಯೇಲರ ಗುಂಪೊಂದು ಗಿಲ್ಯಾದಿನಿಂದ ಬರುವುದು ಅವರ ಕಣ್ಣಿಗೆ ಕಾಣಿಸಿತು. ಇವರು ತಮ್ಮ ಒಂಟೆಗಳ ಮೇಲೆ ಪರಿಮಳ ಪದಾರ್ಥ, ಸುಗಂಧ ತೈಲ, ರಸಗಂಧ ಇವುಗಳನ್ನು ಹೇರಿಕೊಂಡು, ಈಜಿಪ್ಟಿಗೆ ಪ್ರಯಾಣಮಾಡುತ್ತಿದ್ದರು.


“ಈ ಪಿತಾಮಹರು ಜೋಸೆಫನ ಮೇಲೆ ಮತ್ಸರ ತಾಳಿ ಅವನನ್ನು ಈಜಿಪ್ಟಿನವರಿಗೆ ಗುಲಾಮನನ್ನಾಗಿ ಮಾರಿದರು. ಆದರೆ ದೇವರು ಅವನೊಂದಿಗೆ ಇದ್ದು,


ಜೋಸೆಫನು, “ಹತ್ತಿರಕ್ಕೆ ಬನ್ನಿ” ಎನ್ನಲು, ಅವರು ಹತ್ತಿರಕ್ಕೆ ಬಂದರು. ಅವನು ಅವರಿಗೆ, “ಈಜಿಪ್ಟ್ ದೇಶಕ್ಕೆ ಹೋಗಲಿ" ಎಂದು ನೀವು ಮಾರಿಬಿಟ್ಟ ನಿಮ್ಮ ತಮ್ಮ ಜೋಸೆಫ್ ನಾನೇ.


ಅವರನ್ನು ಅಂಗರಕ್ಷಕರ ದಳಪತಿಯ ವಠಾರದಲ್ಲಿದ್ದ ಸೆರೆಯಲ್ಲಿ ಹಾಕಿಸಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು