ಆದಿಕಾಂಡ 39:10 - ಕನ್ನಡ ಸತ್ಯವೇದವು C.L. Bible (BSI)10 ಆಕೆ ಜೋಸೆಫನ ಸಂಗಡ ದಿನದಿನವೂ ಅದೇ ಮಾತನ್ನು ಎತ್ತುತ್ತಿದ್ದಳು. ಆದರೆ ಅವನು ಅವಳಿಗೆ ಕಿವಿಗೊಡಲಿಲ್ಲ. ಇವಳ ಸಂಸರ್ಗಕ್ಕಾಗಲಿ ಅವಳ ಬಳಿ ಇರುವುದಕ್ಕಾಗಲಿ ಒಪ್ಪಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವಳು ಯೋಸೇಫನ ಸಂಗಡ ಪ್ರತಿದಿನವೂ ಈ ಮಾತನ್ನು ಆಡಿದ್ದಾಗ್ಯೂ ಅವನು ಅದಕ್ಕೆ ಕಿವಿಗೊಡದೆ ಆಕೆಯನ್ನು ಮೋಹಿಸುವುದಕ್ಕಾಗಲಿ, ಆಕೆಯ ಬಳಿಯಲ್ಲಿರುವುದಕ್ಕಾಗಲೀ ಒಪ್ಪಿಕೊಳ್ಳಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆಕೆ ಯೋಸೇಫನ ಸಂಗಡ ಪ್ರತಿ ದಿನವೂ ಈ ಮಾತನ್ನು ಆಡಿದಾಗ್ಯೂ ಅವನು ಅದಕ್ಕೆ ಕಿವಿಗೊಡದೆ ಆಕೆಯಲ್ಲಿ ಸಂಗಮಮಾಡುವದಕ್ಕಾಗಲಿ ಆಕೆಯ ಬಳಿಯಲ್ಲಿರುವದಕ್ಕಾಗಲಿ ಒಪ್ಪಿಕೊಳ್ಳಲೇ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆ ಸ್ತ್ರೀಯು ಪ್ರತಿದಿನವೂ ಯೋಸೇಫನನ್ನು ಒತ್ತಾಯಿಸಿದಳು. ಆದರೆ ಯೋಸೇಫನು ಆಕೆಯೊಂದಿಗೆ ಮಲಗಿಕೊಳ್ಳಲು ಒಪ್ಪಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವಳು ಪ್ರತಿದಿನ ಯೋಸೇಫನ ಸಂಗಡ ಮಾತನಾಡಿದರೂ, ಅವನು ಅವಳ ಕೂಡ ಮಲಗುವುದಕ್ಕಾಗಲಿ, ಅವಳ ಹತ್ತಿರ ಇರುವುದಕ್ಕಾಗಲಿ ಒಪ್ಪಲಿಲ್ಲ. ಅಧ್ಯಾಯವನ್ನು ನೋಡಿ |