ಆದಿಕಾಂಡ 39:4 - ಕನ್ನಡ ಸತ್ಯವೇದವು C.L. Bible (BSI)4 ಜೋಸೆಫ್ ಅವನ ಕೃಪೆಗೆ ಪಾತ್ರನಾದ. ದಣಿ ಅವನನ್ನು ತನ್ನ ಆಪ್ತಸೇವಕನನ್ನಾಗಿ ನೇಮಿಸಿಕೊಂಡ. ಅದು ಮಾತ್ರವಲ್ಲ, ತನ್ನ ಮನೆಯಲ್ಲೇ ಮೇಲ್ವಿಚಾರಕನನ್ನಾಗಿ ಮಾಡಿ, ತನ್ನ ಆಸ್ತಿಪಾಸ್ತಿಯನ್ನೆಲ್ಲ ಅವನ ವಶಕ್ಕೆ ಒಪ್ಪಿಸಿದ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆದುದರಿಂದ ಅವನ ದಣಿಯು ಯೋಸೇಫನ ಮೇಲೆ ದಯೆ ಇಟ್ಟು, ಅವನನ್ನು ಸ್ವಂತ ಸೇವಕನನ್ನಾಗಿ ನೇಮಿಸಿಕೊಂಡನು. ಇದಲ್ಲದೆ ಆ ದಣಿಯು ಅವನಿಗೆ ತನ್ನ ಮನೆಯಲ್ಲಿ ಪಾರುಪತ್ಯವನ್ನು ಕೊಟ್ಟು ತನ್ನ ಆಸ್ತಿಯನ್ನೆಲ್ಲಾ ಅವನ ವಶಕ್ಕೆ ಒಪ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವನ ಮೇಲೆ ದಯೆ ಇಟ್ಟು ಅವನನ್ನು ಸ್ವಂತ ಸೇವಕನನ್ನಾಗಿ ನೇವಿುಸಿಕೊಂಡನು. ಇದಲ್ಲದೆ ಆ ದಣಿಯು ಅವನಿಗೆ ತನ್ನ ಮನೆಯಲ್ಲಿ ಪಾರುಪತ್ಯವನ್ನು ಕೊಟ್ಟು ತನ್ನ ಆಸ್ತಿಯನ್ನೆಲ್ಲಾ ಅವನ ವಶಕ್ಕೆ ಒಪ್ಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಪೋಟೀಫರನು ಯೋಸೇಫನ ವಿಷಯದಲ್ಲಿ ತುಂಬ ಸಂತೋಷಪಟ್ಟು ಸ್ವಂತ ಸೇವಕನನ್ನಾಗಿ ಮಾಡಿಕೊಂಡನು; ಅಲ್ಲದೆ ಮನೆಯ ಮೇಲ್ವಿಚಾರಣೆಯನ್ನು ಒಪ್ಪಿಸಿಕೊಟ್ಟನು; ತನ್ನ ಆಸ್ತಿಗೆಲ್ಲಾ ಮೇಲಾಧಿಕಾರಿಯನ್ನಾಗಿ ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆದ್ದರಿಂದ ಯೋಸೇಫನು ಪೋಟೀಫರನ ದೃಷ್ಟಿಯಲ್ಲಿ ದಯೆಹೊಂದಿ ಅವನ ಸೇವೆ ಮಾಡಿದನು. ಪೋಟೀಫರನು ಅವನನ್ನು ತನ್ನ ಮನೆಯ ಮೇಲೆ ಮೇಲ್ವಿಚಾರಕನನ್ನಾಗಿ ಮಾಡಿ, ತನಗಿದ್ದದ್ದನ್ನೆಲ್ಲಾ ಅವನ ಕೈಗೆ ಒಪ್ಪಿಸಿದನು. ಅಧ್ಯಾಯವನ್ನು ನೋಡಿ |