Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 39:5 - ಕನ್ನಡ ಸತ್ಯವೇದವು C.L. Bible (BSI)

5 ಹೀಗೆ ತನ್ನ ಮನೆಮಂದಿರದ ಮೇಲೂ ಆಸ್ತಿಪಾಸ್ತಿಯ ಮೇಲೂ ಜೋಸೆಫನನ್ನೇ ಆಡಳಿತಗಾರನನ್ನಾಗಿ ನೇಮಿಸಿದ. ಜೋಸೆಫನ ಪ್ರಯುಕ್ತ ಸರ್ವೇಶ್ವರ ಆ ಈಜಿಪ್ಟಿನವನ ಮನೆತನವನ್ನು ಹರಸಿದರು. ಮನೆಯಲ್ಲೂ ಸರ್ವೇಶ್ವರ ಸ್ವಾಮಿಯ ಆಶೀರ್ವಾದವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವನು ಯೋಸೇಫನನ್ನು ತನ್ನ ಮನೆಯ ಮೇಲೆಯೂ, ಆಸ್ತಿಯ ಮೇಲೆಯೂ ಮೇಲ್ವಿಚಾರಕನನ್ನಾಗಿ ಇಟ್ಟಿದ್ದರಿಂದ ಯೆಹೋವನು ಯೋಸೇಫನ ನಿಮಿತ್ತವಾಗಿ ಆ ಐಗುಪ್ತನ ಮನೆಯನ್ನು ಅಭಿವೃದ್ಧಿಗೆ ತಂದನು. ಮನೆಯಲ್ಲಾಗಲಿ, ಹೊಲದಲ್ಲಾಗಲಿ ಅವನಿಗಿದ್ದ ಎಲ್ಲಾದರ ಮೇಲೆ ಯೆಹೋವನ ಆಶೀರ್ವಾದವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವನು ಯೋಸೇಫನನ್ನು ತನ್ನ ಮನೆಯ ಮೇಲೆಯೂ ಆಸ್ತಿಯ ಮೇಲೆಯೂ ಅಧ್ಯಕ್ಷನಾಗಿ ಇಟ್ಟಂದಿನಿಂದ ಯೆಹೋವನು ಯೋಸೇಫನ ನಿವಿುತ್ತವಾಗಿ ಆ ಐಗುಪ್ತ್ಯನ ಮನೆಯನ್ನು ಅಭಿವೃದ್ಧಿಗೆ ತಂದನು. ಮನೆಯಲ್ಲಾಗಲಿ ಹೊಲದಲ್ಲಾಗಲಿ ಅವನಿಗಿದ್ದ ಎಲ್ಲಾದರ ಮೇಲೆ ಯೆಹೋವನ ಆಶೀರ್ವಾದವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಪೋಟೀಫರನು ಯೋಸೇಫನಿಗೆ ಮನೆಯ ಮೇಲ್ವಿಚಾರಣೆಯನ್ನು ಕೊಟ್ಟು ಆಸ್ತಿಗೆ ಅವನನ್ನು ಜವಾಬ್ದಾರನನ್ನಾಗಿ ಮಾಡಿದ ಮೇಲೆ ಯೆಹೋವನು ಪೋಟೀಫರನ ಮನೆಯನ್ನೂ ಬೆಳೆಗಳನ್ನೂ ಆಸ್ತಿಯನ್ನೂ ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವನನ್ನು ಮನೆಯಲ್ಲಿಯೂ, ತನಗಿದ್ದ ಎಲ್ಲದರ ಮೇಲೆಯೂ ಮೇಲ್ವಿಚಾರಕನನ್ನಾಗಿ ಮಾಡಿದಂದಿನಿಂದ ಯೆಹೋವ ದೇವರು ಆ ಈಜಿಪ್ಟಿನವನ ಮನೆಯನ್ನು ಯೋಸೇಫನಿಗಾಗಿ ಆಶೀರ್ವದಿಸಿದರು. ಮನೆಯಲ್ಲಿಯೂ ಹೊಲದಲ್ಲಿಯೂ ಅವನಿಗಿದ್ದ ಎಲ್ಲದರ ಮೇಲೆಯೂ ಯೆಹೋವ ದೇವರ ಆಶೀರ್ವಾದವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 39:5
9 ತಿಳಿವುಗಳ ಹೋಲಿಕೆ  

ಅದಕ್ಕೆ ಲಾಬಾನನು, “ನನ್ನ ಮೇಲೆ ದಯವಿಟ್ಟು ನನ್ನ ಬಳಿಯಲ್ಲೇ ತಂಗಿರು. ಸರ್ವೇಶ್ವರ ಸ್ವಾಮಿ ನಿನ್ನ ನಿಮಿತ್ತ ನನ್ನನ್ನು ಅಭಿವೃದ್ಧಿಗೊಳಿಸಿದ್ದಾರೆಂದು ಶಾಸ್ತ್ರೋಕ್ತವಾಗಿ ತಿಳಿದುಕೊಂಡಿದ್ದೇನೆ.


‘ಪೌಲನೇ, ಭಯಪಡಬೇಡ. ನೀನು ಚಕ್ರವರ್ತಿಯ ಸಮ್ಮುಖದಲ್ಲಿ ನಿಲ್ಲಲೇಬೇಕಾಗಿದೆ; ಇಗೋ, ನಿನ್ನ ಸಂಗಡ ಪ್ರಯಾಣಮಾಡುವ ಎಲ್ಲರ ಪ್ರಾಣಗಳನ್ನು ದೇವರು ನಿನ್ನ ನಿಮಿತ್ತ ಉಳಿಸಿದ್ದಾರೆ,’ ಎಂದು ಅಭಯವಿತ್ತನು.


ಶಾಶ್ವತವಾಗಲಿ ಶ್ರೀನಾಮ ಆತನಿಗೆ I ಬೆಳಗಲಿ ಆತನ ಕೀರ್ತಿ ಸೂರ್ಯನಿರುವವರೆಗೆ I ಆತನಾಶೀರ್ವಾದ ಕೋರಲಿ ಸರ್ವರು ತಮಗೆ I ಶುಭವೆನ್ನಲಿ ಸಕಲ ರಾಷ್ಟ್ರಗಳು ಆತನಿಗೆ II


ನಾನು ನಿನ್ನನ್ನು ದೊಡ್ಡ ಜನಾಂಗವಾಗಿ ಮಾಡುತ್ತೇನೆ. ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರಿಗೆ ಘನತೆಗೌರವವನ್ನು ತರುತ್ತೇನೆ. ನೀನೇ ಆದರ್ಶದ ಆಶೀರ್ವಾದವಾಗಿ ಬೆಳಗುವೆ.


ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ.


ಅಮರ ಭಾಗ್ಯಗಳನು ನೀನನುಗ್ರಹಿಸಿದೆ I ಶ್ರೀಸನ್ನಿಧಿಯಲಾತನನು ತೋಷಗೊಳಿಸಿದೆ II


ದೇವರು ಆ ಬಯಲುಸೀಮೆಯ ಪಟ್ಟಣಗಳನ್ನು ನಾಶಮಾಡಿದಾಗ ಲೋಟನು ವಾಸವಾಗಿದ್ದ ಊರುಗಳನ್ನೇನೋ ಹಾಳುಮಾಡಿದರು, ಆದರೆ ಅಬ್ರಹಾಮನನ್ನು ನೆನಪಿಗೆ ತಂದುಕೊಂಡು ಲೋಟನನ್ನು ತಪ್ಪಿಸಿ ಕಾಪಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು