Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 4:1 - ಕನ್ನಡ ಸತ್ಯವೇದವು C.L. Bible (BSI)

1 ಆದಾಮನು ತನ್ನ ಹೆಂಡತಿಯ ಜೊತೆ ಕೂಡಲು ಆಕೆ ಗರ್ಭಿಣಿಯಾಗಿ ಕಾಯಿನನನ್ನು ಹೆತ್ತಳು. “ಸರ್ವೇಶ್ವರ ಸ್ವಾಮಿಯ ಅನುಗ್ರಹದಿಂದ ಒಂದು ಗಂಡುಮಗುವನ್ನು ಪಡೆದಿದ್ದೇನೆ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆದಾಮನು ತನ್ನ ಹೆಂಡತಿಯಾದ ಹವ್ವಳನ್ನು ಸಂಗಮಿಸಲು ಆಕೆ ಗರ್ಭಿಣಿಯಾಗಿ ಕಾಯಿನನನ್ನು ಹೆತ್ತು, “ನಾನು ಯೆಹೋವನ ಅನುಗ್ರಹದಿಂದ ಗಂಡು ಮಗುವನ್ನು ಪಡೆದಿದ್ದೇನೆ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆ ಪುರುಷನು ತನ್ನ ಹೆಂಡತಿಯಾದ ಹವ್ವಳನ್ನು ಕೂಡಲು ಆಕೆ ಗರ್ಭಿಣಿಯಾಗಿ ಕಾಯಿನನನ್ನು ಹೆತ್ತು - ಯೆಹೋವನ ಅನುಗ್ರಹದಿಂದ ಗಂಡುಮಗುವನ್ನು ಪಡೆದಿದ್ದೇನೆ ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆದಾಮ ಮತ್ತು ಹವ್ವಳು ಕೂಡಿದರು. ಆದ್ದರಿಂದ ಹವ್ವಳಿಗೆ ಒಂದು ಮಗು ಜನಿಸಿತು. ಹವ್ವಳು, “ಯೆಹೋವನ ಸಹಾಯದಿಂದ ಗಂಡುಮಗುವನ್ನು ಪಡೆದಿದ್ದೇನೆ” ಎಂದು ಹೇಳಿ ಆ ಮಗುವಿಗೆ ಕಾಯಿನ ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆದಾಮನು ತನ್ನ ಹೆಂಡತಿಯಾದ ಹವ್ವಳನ್ನು ಕೂಡಲು, ಆಕೆಯು ಗರ್ಭಿಣಿಯಾಗಿ, ಕಾಯಿನನನ್ನು ಹೆತ್ತು, “ನಾನು ಯೆಹೋವ ದೇವರ ಅನುಗ್ರಹದಿಂದ ಗಂಡು ಮಗುವನ್ನು ಪಡೆದಿದ್ದೇನೆ,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 4:1
8 ತಿಳಿವುಗಳ ಹೋಲಿಕೆ  

ತನ್ನ ಸಹೋದರನನ್ನೇ ಕೊಂದ ಕಾಯಿನನಂತೆ ನಾವು ಇರಬಾರದು. ಅವನು ಕಡುಕೇಡಿಗನ ಕುವರ. ಅವನು ಕೊಂದುದಾದರೂ ಏಕೆ? ತನ್ನ ಕೃತ್ಯಗಳು ದುಷ್ಟವಾಗಿದ್ದು ತನ್ನ ಸಹೋದರನ ಕೃತ್ಯಗಳು ಧರ್ಮಿಷ್ಠವಾಗಿದ್ದುದರಿಂದ ಅಲ್ಲವೇ?


ಹಗೆತನವಿರಿಸುವೆನು ನಿನಗೂ ಈ ಮಹಿಳೆಗೂ ನಿನ್ನ ಸಂತಾನಕ್ಕೂ ಇವಳ ಸಂತಾನಕ್ಕೂ ಜಜ್ಜುವುದಿವಳ ಸಂತಾನ ನಿನ್ನ ತಲೆಯನ್ನು ಕಚ್ಚುವೆ ನೀನಾ ಸಂತಾನದ ಹಿಮ್ಮಡಿಯನ್ನು.”


ಆದಾಮ್ ಮತ್ತು ಅವನ ಹೆಂಡತಿಗೆ ಮತ್ತೊಂದು ಗಂಡುಮಗು ಆಯಿತು. ಅಕೆ, “ಕಾಯಿನನು ಕೊಂದುಹಾಕಿದ ಹೇಬೆಲನಿಗೆ ಬದಲಾಗಿ ದೇವರು ನನಗೆ ಬೇರೆ ಸಂತಾನವನ್ನು ಅನುಗ್ರಹಿಸಿದ್ದಾರೆ,” ಎಂದುಕೊಂಡು ಅವನಿಗೆ “ಸೇತ್" ಎಂದು ನಾಮಕರಣ ಮಾಡಿದಳು.


ಪ್ರಭು ಶಪಿಸಿದ ಭೂಮಿಯಲ್ಲಿ ನಾವು ಕೈಕೆಸರಾಗಿಸಿಕೊಂಡು ಪಡುವ ಶ್ರಮೆಯಲ್ಲಿ ಈ ಮಗನು ಉಪಶಮನ ತರುವನು ಎಂದುಕೊಂಡು ಅವನಿಗೆ ನೋಹ ಎಂದು ಹೆಸರಿಟ್ಟನು.


ಆದಕಾರಣ ಈ ಗುಂಪಿನಲ್ಲಿರುವ ಎಲ್ಲ ಗಂಡುಮಕ್ಕಳನ್ನು ಮತ್ತು ಪುರುಷ ಸಂಗಮಮಾಡಿದ ಎಲ್ಲ ಹೆಂಗಸರನ್ನು ಕೊಲ್ಲಬೇಕು.


ಅದಲ್ಲದೆ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕಾಗಿ ಆ ವನದ ಪೂರ್ವದಿಕ್ಕಿನಲ್ಲೆ ‘ಕೆರೂಬಿ’ಯರನ್ನೂ ಪ್ರಜ್ವಲಿಸುತ್ತಾ ಎಲ್ಲ ಕಡೆ ಸುತ್ತುವ ಕತ್ತಿಯನ್ನೂ ಇರಿಸಿದರು.


ತರುವಾಯ ಅವನ ತಮ್ಮನಾದ ಹೇಬೆಲನಿಗೆ ಜನ್ಮವಿತ್ತಳು. ಹೇಬೆಲನು ಕುರಿಗಾಹಿಯಾದನು; ಕಾಯಿನನು ವ್ಯವಸಾಯಗಾರನಾದನು.


ಪ್ರಭುವಿನಿಂದ ಬಂದ ಸೊತ್ತು - ಪುತ್ರಸಂತಾನ I ಕರುಳ ಕುಡಿಯು ಆತ ನೀಡುವ ಬಹುಮಾನ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು