Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 4:10 - ಕನ್ನಡ ಸತ್ಯವೇದವು C.L. Bible (BSI)

10 ಆಗ ಸರ್ವೇಶ್ವರ, “ನೀನು ಎಂಥ ಕೃತ್ಯ ಎಸಗಿದೆ? ಪ್ರತೀಕಾರಕ್ಕಾಗಿ ನೆಲದಿಂದ ನಿನ್ನ ತಮ್ಮನ ರಕ್ತ ಕೂಗಿ ನನಗೆ ಮೊರೆಯಿಡುತ್ತಿದೆ, ಕೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದಕ್ಕೆ ಯೆಹೋವನು, “ನೀನು ಏನು ಮಾಡಿದೆ? ನಿನ್ನ ತಮ್ಮನ ರಕ್ತವು ಭೂಮಿಯ ಕಡೆಯಿಂದ ಕೂಗಿ ನನಗೆ ಮೊರೆಯಿಡುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅದಕ್ಕೆ ಯೆಹೋವನು - ನೀನು ಏನು ಮಾಡಿದಿ? ನಿನ್ನ ತಮ್ಮನ ರಕ್ತವು ಭೂವಿುಯ ಕಡೆಯಿಂದ ನನ್ನನ್ನು ಕೂಗುತ್ತದೆ, ಕೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅದಕ್ಕೆ ಯೆಹೋವನು, “ನೀನು ಮಾಡಿದ್ದೇನು? ನೀನು ನಿನ್ನ ತಮ್ಮನನ್ನೇ ಕೊಲೆಮಾಡಿದೆ! ಅವನ ರಕ್ತವು ಭೂಮಿಯ ಕಡೆಯಿಂದ ನನ್ನನ್ನು ಕೂಗುತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅದಕ್ಕೆ ಯೆಹೋವ ದೇವರು, “ನೀನು ಏನು ಮಾಡಿದೆ? ನಿನ್ನ ತಮ್ಮನ ರಕ್ತವು ಭೂಮಿಯಿಂದ ನನ್ನನ್ನು ಕೂಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 4:10
24 ತಿಳಿವುಗಳ ಹೋಲಿಕೆ  

ಹೊಸ ಒಡಂಬಡಿಕೆಯ ಮಧ್ಯಸ್ಥರಾದ ಯೇಸುಸ್ವಾಮಿಯ ಬಳಿಗೆ, ಹೇಬೆಲನ ರಕ್ತಕ್ಕಿಂತಲೂ ಅಮೋಘವಾಗಿ ಮೊರೆಯಿಡುವ ಪ್ರೋಕ್ಷಣಾರಕ್ತದ ಬಳಿಗೆ ನೀವು ಬಂದಿದ್ದೀರಿ.


ವಿಶ್ವಾಸವಿದ್ದುದರಿಂದಲೇ ಹೇಬೆಲನು ಕಾಯಿನನಿಗಿಂತ ಉತ್ತಮವಾದ ಬಲಿಯನ್ನು ದೇವರಿಗೆ ಸಮರ್ಪಿಸಿದನು. ವಿಶ್ವಾಸದಿಂದಲೇ ತಾನು ಸತ್ಪುರುಷನೆಂದು ಸನ್ಮಾನಿತನಾದನು. ಅವನ ಕಾಣಿಕೆ ತಮಗೆ ಸ್ವೀಕೃತವಾಯಿತೆಂದು ದೇವರೇ ಸಾದರಪಡಿಸಿದರು. ಅವನು ಮೃತನಾಗಿದ್ದರೂ ಅವನ ವಿಶ್ವಾಸದ ಮೂಲಕ ಇಂದಿಗೂ ಮಾತನಾಡುತ್ತಿದ್ದಾನೆ.


ಇಸ್ರಯೇಲ್ ಮನೆತನವೇ ಸೇನಾಧೀಶ್ವರ ಸರ್ವೇಶ್ವರ ನೆಟ್ಟ ಆ ದ್ರಾಕ್ಷಿಯ ತೋಟ. ಜುದೇಯದ ಜನರೇ ಆತ ನಾಟಿಮಾಡಿದಾ ಸುಂದರ ಸಸಿತೋಟ. ನ್ಯಾಯನೀತಿಯನು ನಿರೀಕ್ಷಿಸಿದನಾತ ಆದರೆ ಸಿಕ್ಕಿತವನಿಗೆ ರಕ್ತಪಾತ ! ಸತ್ಸಂಬಂಧವನು ಎದುರುನೋಡಿದನಾತ ಇಗೋ, ದಕ್ಕಿತವನಿಗೆ ದುಃಖಿತರ ಆರ್ತನಾದ !


ಅವರ ಜೀವ ಆತನ ದೃಷ್ಟಿಯಲಿ ಅಮೂಲ್ಯ I ಜುಲುಮೆ ಶೋಷಣೆಗಳ ನೀಗಿಪುದು ಆತನ ಕಾರ್ಯ II


ನಿಮ್ಮ ಹೊಲಗಳಲ್ಲಿ ದುಡಿದ ಆಳುಗಳ ಕೂಲಿಯನ್ನು ಮೋಸದಿಂದ ಹಿಡಿದಿಟ್ಟುಕೊಂಡಿದ್ದೀರಿ. ನೀವು ಕೊಡದ ಕೂಲಿಯೇ ನಿಮಗೆ ವಿರುದ್ಧವಾಗಿ ಕೂಗಿಕೊಳ್ಳುತ್ತಿದೆ. ಕೂಲಿಯಾಳುಗಳ ಗೋಳಾಟ ಸ್ವರ್ಗಸೇನಾಧೀಶ್ವರನಾದ ಪ್ರಭುವಿನ ಕಿವಿಗೂ ಬಿದ್ದಿದೆ.


ರಕ್ತಪಾತ ಲೆಕ್ಕಿಸಿ ಸೇಡು ತೀರಿಸುವಾತ I ದೀನದಲಿತರ ಮೊರೆಯನೆಂದಿಗು ಮರೆಯನಾತ II


“ನೀವು ಈ ಪ್ರಕಾರ ನಡೆದುಕೊಂಡರೆ ನಿಮ್ಮ ನಾಡು ಅಪವಿತ್ರವಾಗುವುದಿಲ್ಲ. ರಕ್ತಪಾತವು ನಾಡನ್ನು ಅಪವಿತ್ರಗೊಳಿಸುತ್ತದೆ. ಅದಕ್ಕೆ ಕೊಲ್ಲಲ್ಪಟ್ಟವನ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.


ಪೊಡವಿಯೇ, ನನ್ನ ನೆತ್ತರನ್ನು ನೀ ಮುಚ್ಚಬೇಡ ನಾನು ಮಾಡುತ್ತಿರುವ ಮೊರೆಯನ್ನು ನಿಲ್ಲಿಸಬೇಡ.


ನಿಮ್ಮ ರಕ್ತಸುರಿಸಿ ಪ್ರಾಣತೆಗೆಯುವವರೆಗೆ ಮುಯ್ಯಿತೀರಿಸುವೆನು - ಮೃಗವಾಗಿದ್ದರೆ ಅದಕ್ಕೂ, ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯಿತೀರಿಸುವೆನು.


ನೀವಿದನ್ನೆಲ್ಲ ಮಾಡಿದರೂ ನಾ ಮೌನಿಯೆನ್ನುವಿರಾ? I ನಾ ಕೂಡ ನಿಮ್ಮಂಥವನು ಎಂದುಕೊಂಡಿರಾ? II ನಿಮ್ಮ ದುಷ್ಟತನವನು ಕಣ್ಮುಂದೆಯಿಡುವೆನು I ನೀವು ಅಪರಾಧಿಗಳೆಂದು ಸ್ಥಾಪಿಸದೆಬಿಡೆನು II


ಆಗ ಸರ್ವೇಶ್ವರ, “ಈಜಿಪ್ಟಿನಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಾನು ಕಣ್ಣಾರೆ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡಿಸಿಕೊಳ್ಳುವವರ ಬಗ್ಗೆ ಅವರು ಇಟ್ಟ ಮೊರೆ ನನಗೆ ಕೇಳಿಸಿದೆ. ಅವರ ಕಷ್ಟದುಃಖವನ್ನೆಲ್ಲಾ ನಾನು ಬಲ್ಲೆ.


ನಗರಗಳಲ್ಲಿ ನರಳುವವರಿದ್ದಾರೆ ಗಾಯಗೊಂಡವರು ಮೊರೆಯಿಡುತ್ತಾರೆ ಆದರೆ ದೇವರು ಕಿವಿಗೊಡದಿದ್ದಾನೆ.


ಅಹಾಬನಿಗೆ ಸರ್ವೇಶ್ವರ, ‘ನನ್ನ ಮಾತನ್ನು ಕೇಳು, ನೀನು ನಿನ್ನೆ ಸುರಿಸಿದ ನಾಬೋತನ ಮತ್ತು ಅವನ ಮಕ್ಕಳ ರಕ್ತವನ್ನು ನಿಶ್ಚಯವಾಗಿ ನೋಡಿದ್ದೇನೆ. ನೀನು ಅವರ ರಕ್ತವನ್ನು ಸುರಿಸಿದ ಹೊಲದಲ್ಲೇ ನಿನಗೆ ಮುಯ್ಯಿತೀರಿಸುವೆನು,’ ಎಂದು ಪ್ರವಾದಿಯಿಂದ ಹೇಳಿಸಿದ್ದು ನಿನಗೆ ನೆನಪಿರುತ್ತದಲ್ಲವೆ?’ ಎಂದಿದ್ದರು. ಸರ್ವೇಶ್ವರನ ಆ ನುಡಿ ನೆರವೇರುವಂತೆ ಇವನ ಶವವನ್ನು ಆ ಹೊಲದಲ್ಲೇ ಹಾಕಿಬಿಡು,” ಎಂದು ಹೇಳಿದನು.


ಆಕಾನನಿಗೆ ಯೆಹೋಶುವನು, “ಮಗನೇ, ನೀನು ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ಸ್ತುತಿಸಿ ಸ್ತೋತ್ರ ಸಲ್ಲಿಸು. ನೀನು ಮಾಡಿದ್ದನ್ನು ಮುಚ್ಚುಮರೆಯಿಲ್ಲದೆ ನನಗೆ ತಿಳಿಸು, ಎಂದನು


ಇದಲ್ಲದೆ ಸರ್ವೇಶ್ವರ, “ಸೊದೋಮ್ ಗೊಮೋರಗಳ ವಿರುದ್ಧ ಎಷ್ಟೋ ಘನತರವಾದ ದೂರುಗಳು ನನಗೆ ಬಂದಿವೆ; ಆ ಊರಿನವರ ಮೇಲೆ ಹೊರಿಸಲಾಗಿರುವ ಪಾಪಕೃತ್ಯವೂ ಘೋರವಾದುದು.


ಸರ್ವೇಶ್ವರನಾದ ದೇವರು ಆ ಮಹಿಳೆಯನ್ನು, “ಇದೇನು ನೀನು ಮಾಡಿದ್ದು?” ಎಂದು ಕೇಳಲು ಆಕೆ, “ಸರ್ಪವು ನನ್ನನ್ನು ವಂಚಿಸಿ ತಿನ್ನುವಂತೆ ಮಾಡಿತು,” ಎಂದು ಉತ್ತರಕೊಟ್ಟಳು.


ಪೇತ್ರನು, “ನೀನೂ ನಿನ್ನ ಪತಿಯೂ ಸರ್ವೇಶ್ವರನ ಆತ್ಮವನ್ನು ಪರೀಕ್ಷಿಸಲು ಹವಣಿಸಿದಿರೋ? ಇಗೋ, ನಿನ್ನ ಪತಿಯನ್ನು ಸಮಾಧಿಮಾಡಿಬಂದವರ ಕಾಲಿನ ಸಪ್ಪಳ. ಅವರು ಬಾಗಿಲ ಬಳಿಯಲ್ಲೇ ಇದ್ದಾರೆ. ಅವರು ನಿನ್ನನ್ನೂ ಹೊತ್ತುಕೊಂಡು ಹೋಗುವರು,” ಎಂದನು.


ಆಗ ಪೇತ್ರನು, “ಅನನೀಯಾ, ನಿನ್ನ ಆಸ್ತಿಯ ವಿಕ್ರಯದಿಂದ ಬಂದ ಹಣದ ಒಂದು ಭಾಗವನ್ನು ಬಚ್ಚಿಟ್ಟುಕೊಂಡು, ನೀನು ಪವಿತ್ರಾತ್ಮ ಅವರಿಗೆ ಏಕೆ ವಂಚನೆಮಾಡಿದೆ? ನಿನ್ನ ಹೃದಯದಲ್ಲಿ ಪಿಶಾಚಿಗೇಕೆ ಎಡೆಮಾಡಿಕೊಟ್ಟೆ?


“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡಿನಲ್ಲಿ ಹತನಾದ ಒಬ್ಬ ವ್ಯಕ್ತಿಯ ಶವವು ಅಡವಿಯಲ್ಲಿ ಬಿದ್ದಿರುವುದನ್ನು ನೀವು ಕಂಡಾಗ ಮತ್ತು ಅವನನ್ನು ಕೊಂದವನು ಯಾರೆಂಬುದು ತಿಳಿಯದೆಹೋದರೆ


ಸಮುವೇಲನು, ಅವನನ್ನು ನೋಡಿ, “ಇದೇನು ನೀನು ಮಾಡಿದ್ದು?” ಎಂದು ಕೇಳಿದನು. ಅವನು, “ಜನರು ಚದರಿಹೋಗುವುದನ್ನು, ನೀವು ನಿಯಮಿತಕಾಲಕ್ಕೆ ಬಾರದಿರುವುದನ್ನು ಹಾಗು ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ನಮಗೆ ವಿರೋಧವಾಗಿ ಕೂಡಿಕೊಂಡಿರುವುದನ್ನು ನೋಡಿದೆ;


ಸಮಾರಿಯದಲ್ಲಿ ಸರ್ವೇಶ್ವರನ ಒಬ್ಬ ಪ್ರವಾದಿ ಇದ್ದನು. ಅವನ ಹೆಸರು ಓದೇದ್. ಅವನು ಸಮಾರಿಯಕ್ಕೆ ಬರುತ್ತಿದ್ದ ಸೈನ್ಯದವರನ್ನು ಎದುರುಗೊಂಡು, “ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರನು ಯೆಹೂದ್ಯರ ಮೇಲೆ ಕೋಪಗೊಂಡು ಅವರನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟರು. ಅವರನ್ನು ಸಂಹರಿಸುವುದರಲ್ಲಿ ನಿಮ್ಮ ರೌದ್ರ ಆಕಾಶವನ್ನು ಮುಟ್ಟಿತು.


ಮೃತ್ಯುವಿನ ಬಾಯಿಂದೆನ್ನ ಬದುಕಿಸುವ ಪ್ರಭು, ಕನಿಕರಿಸು I ವೈರಿ-ವಿರೋಧಿಗಳೆನಗೆ ಗೈದ ಕಿರುಕುಳವನು, ನೀ ಗಮನಿಸು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು