Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 4:11 - ಕನ್ನಡ ಸತ್ಯವೇದವು C.L. Bible (BSI)

11 ನಿನ್ನ ಕೈ ಸುರಿಸಿದ ನಿನ್ನ ತಮ್ಮನ ರಕ್ತವನ್ನು ಕುಡಿದ ಈ ನೆಲದಿಂದಾಗಿ ನೀನು ಶಾಪಗ್ರಸ್ತನು; ತಿರಸ್ಕೃತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಈಗ ನೀನು ನಿನ್ನ ಕೈಯಿಂದ ಸುರಿಸಿದ, ನಿನ್ನ ತಮ್ಮನ ರಕ್ತದಿಂದ ನೆನೆದ ಈ ಭೂಮಿಯಿಂದ ನಿನಗೆ ಶಾಪ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನೀನು ಸುರಿಸಿದ ನಿನ್ನ ತಮ್ಮನ ರಕ್ತವನ್ನು ಕುಡಿದ ಈ ಭೂವಿುಯನ್ನು ಬಿಟ್ಟುಹೋಗಬೇಕೆಂದು ನಿನಗೆ ಶಾಪ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನೀನು ನಿನ್ನ ತಮ್ಮನನ್ನು ಕೊಂದುಹಾಕಿದೆ. ನಿನ್ನ ಕೈಗಳಿಂದ ಸುರಿಸಿದ ಅವನ ರಕ್ತವನ್ನು ಕುಡಿಯಲು ಭೂಮಿಯು ಬಾಯಿ ತೆರೆಯಿತು. ಆದ್ದರಿಂದ ಈಗ ಅದು ಶಾಪಗ್ರಸ್ತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನೀನು ಈಗ ಶಾಪಗ್ರಸ್ತನಾಗಿದ್ದಿ. ನೀನು ಸುರಿಸಿದ ನಿನ್ನ ತಮ್ಮನ ರಕ್ತವನ್ನು ಸ್ವೀಕರಿಸಲು ಬಾಯಿತೆರೆದಿರುವ ಭೂಮಿಯಿಂದ ತಿರಸ್ಕಾರವಾಗಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 4:11
11 ತಿಳಿವುಗಳ ಹೋಲಿಕೆ  

ಧರ್ಮಶಾಸ್ತ್ರದ ವಿಧಿನಿಯಮಗಳನ್ನೇ ಆಧಾರವಾಗಿಟ್ಟುಕೊಂಡು ಬಾಳುವವರು ಶಾಪಗ್ರಸ್ತರು. ಏಕೆಂದರೆ, “ಧರ್ಮಗ್ರಂಥದಲ್ಲಿ ಬರೆದಿರುವುದನ್ನೆಲ್ಲಾ ಅನುದಿನವೂ ಕೈಗೊಂಡು ನಡೆಯದ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಲಿಖಿತವಾಗಿದೆ.


ಪೊಡವಿಯೇ, ನನ್ನ ನೆತ್ತರನ್ನು ನೀ ಮುಚ್ಚಬೇಡ ನಾನು ಮಾಡುತ್ತಿರುವ ಮೊರೆಯನ್ನು ನಿಲ್ಲಿಸಬೇಡ.


ಆಗ. ಸರ್ವೇಶ್ವರರಾದ ದೇವರು, ಇಂತೆಂದರು ಸರ್ಪಕ್ಕೆ: “ಈ ಪರಿಯ ಕೃತ್ಯವನ್ನು ನೀನೆಸಗಿದುದರಿಂದ ಶಾಪಗ್ರಸ್ತನಾದೆ ಎಲ್ಲ ಪಶು ಪ್ರಾಣಿಗಳಿಗಿಂತ; ಹರಿದಾಡುವೆ ಹೊಟ್ಟೆಯ ಮೇಲೆ ಇಂದಿನಿಂದ ತಿನ್ನುವೆ ಮಣ್ಣನೆ ಜೀವಮಾನ ಪರಿಯಂತ


ಆದರೆ ಭೂಮಿ ಆಕೆಯ ನೆರವಿಗೆ ಬಂದಿತು. ಅದು ತನ್ನ ಬಾಯನ್ನು ತೆರೆದು ಘಟಸರ್ಪದ ಬಾಯಿಂದ ಹೊರಬಂದ ನದಿಯನ್ನು ಕುಡಿದುಬಿಟ್ಟಿತು.


ಇಗೋ, ಸರ್ವೇಶ್ವರ ಜಗದ ಜನಕ್ಕೆ ಅವರವರ ಪಾಪದ ಫಲವನ್ನು ಉಣಿಸಲು ತಮ್ಮ ನಿವಾಸದಿಂದ ಹೊರಟಿರುವರು. ಭೂಮಿ ತನ್ನಲ್ಲಿ ಇಂಗಿದ ರಕ್ತವನ್ನು ಬೆಳಕಿಗೆ ತರುವುದು; ಭೂನಿವಾಸಿಗಳಲ್ಲಿ ಹತರಾದವರನ್ನು ಇನ್ನು ಮರೆಮಾಚದು.


ಈ ನಾಡಿನಿಂದ ನನ್ನನ್ನು ಹೊರದೂಡುತ್ತಿರುವಿರಿ, ತಮ್ಮ ಸಾನ್ನಿಧ್ಯ ನನಗಿನ್ನು ದೊರಕದು; ನೆಲೆ ಇಲ್ಲದ ನಾನು ಲೋಕದಲ್ಲಿ ಅಲೆಮಾರಿಯಾಗಿರಬೇಕು; ಕಂಡಕಂಡವರೆಲ್ಲರು ನನ್ನನ್ನು ಕೊಲ್ಲುವರು” ಎಂದು ಹೇಳಿದನು.


ಪ್ರಭು ಶಪಿಸಿದ ಭೂಮಿಯಲ್ಲಿ ನಾವು ಕೈಕೆಸರಾಗಿಸಿಕೊಂಡು ಪಡುವ ಶ್ರಮೆಯಲ್ಲಿ ಈ ಮಗನು ಉಪಶಮನ ತರುವನು ಎಂದುಕೊಂಡು ಅವನಿಗೆ ನೋಹ ಎಂದು ಹೆಸರಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು