Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 4:13 - ಕನ್ನಡ ಸತ್ಯವೇದವು C.L. Bible (BSI)

13 ಅದಕ್ಕೆ ಕಾಯಿನನು, “ಸರ್ವೇಶ್ವರಾ, ಈ ಶಿಕ್ಷೆ ನನ್ನಿಂದ ಸಹಿಸಲಾಗದಷ್ಟು ಕಠಿಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಕಾಯಿನನು ಯೆಹೋವನಿಗೆ, “ನನ್ನ ಅಪರಾಧದ ಫಲ ಸಹಿಸಲಾರದಷ್ಟಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಕಾಯಿನನು ಯೆಹೋವನಿಗೆ - ನನ್ನ ಅಪರಾಧಫಲ ತಾಳಕೂಡದಷ್ಟಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅದಕ್ಕೆ ಕಾಯಿನನು ಯೆಹೋವನಿಗೆ, “ಈ ಶಿಕ್ಷೆಯನ್ನು ನಾನು ಸಹಿಸಲಾರೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಕಾಯಿನನು ಯೆಹೋವ ದೇವರಿಗೆ, “ನನ್ನ ಶಿಕ್ಷೆಯು ತಾಳಲಾರದಷ್ಟು ದೊಡ್ಡದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 4:13
7 ತಿಳಿವುಗಳ ಹೋಲಿಕೆ  

ಕತ್ತಲಿಂದ ಹಿಂದಿರುಗುವ ನಂಬಿಕೆ ಅವನಿಗಿಲ್ಲ ಕತ್ತಿ ತನಗಾಗಿ ಕಾದಿದೆಯೆಂಬುದರಲ್ಲಿ ಸಂದೇಹವಿಲ್ಲ.


ಮನುಷ್ಯರು ಆ ಕಡು ಕಾವಿನಲ್ಲಿ ಬೆಂದು ನರಳಿದರು. ಈ ಮಾರಕ ವ್ಯಾಧಿಗಳ ಮೇಲೆ ಅಧಿಕಾರ ಇದ್ದ ದೇವರನ್ನೂ ದೂಷಿಸಿದರು. ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ಅವರು ದೇವರಿಗೆ ಅಭಿಮುಖರಾಗಲಿಲ್ಲ; ಅವರ ಮಹಿಮೆಯನ್ನು ಸ್ತುತಿಸಲಿಲ್ಲ.


ತಮ್ಮ ನೋವು ಬಾಧೆಗಳ ನಿಮಿತ್ತವೂ ತಮ್ಮ ಉರಿ ಹುಣ್ಣುಗಳ ನಿಮಿತ್ತವೂ ಸ್ವರ್ಗದ ದೇವರನ್ನು ದೂಷಿಸಿದರು. ತಮ್ಮ ದುಷ್ಕೃತ್ಯಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಲೇ ಇಲ್ಲ.


ಆಕಾಶದಿಂದ ಮನುಷ್ಯರ ಮೇಲೆ ಆಲಿಕಲ್ಲಿನ ಮಳೆ ಸುರಿಯಿತು. ಒಂದೊಂದು ಆಲಿಕಲ್ಲಿನ ತೂಕ ಸುಮಾರು ಐವತ್ತು ಕಿಲೊಗ್ರಾಮಿನಷ್ಟು ಇತ್ತು. ಆ ಆಲಿಕಲ್ಲಿನ ವಿಪತ್ತು ಅಧಿಕವಾದುದರಿಂದಲೂ ಭಯಂಕರವಾದುದರಿಂದಲೂ ಜನರು ದೇವರನ್ನು ದೂಷಿಸಿದರು.


ಇದನ್ನು ನೀನು ವ್ಯವಸಾಯ ಮಾಡಿದರೂ ಇನ್ನು ಮುಂದೆ ಇದು ಫಲಕೊಡುವುದಿಲ್ಲ. ನೆಲೆಯಿಲ್ಲದೆ ನೀನು ಲೋಕದಲ್ಲಿ ಅಲೆಮಾರಿಯಾಗಿರಬೇಕು,” ಎಂದರು.


ಈ ನಾಡಿನಿಂದ ನನ್ನನ್ನು ಹೊರದೂಡುತ್ತಿರುವಿರಿ, ತಮ್ಮ ಸಾನ್ನಿಧ್ಯ ನನಗಿನ್ನು ದೊರಕದು; ನೆಲೆ ಇಲ್ಲದ ನಾನು ಲೋಕದಲ್ಲಿ ಅಲೆಮಾರಿಯಾಗಿರಬೇಕು; ಕಂಡಕಂಡವರೆಲ್ಲರು ನನ್ನನ್ನು ಕೊಲ್ಲುವರು” ಎಂದು ಹೇಳಿದನು.


ಈಗ ನಿನ್ನ ದುರ್ನಡತೆಯ ಮತ್ತು ದುರಾಚಾರಗಳ ಫಲವನ್ನು ಅವಳಂತೆ ಅನುಭವಿಸಬೇಕಾಗಿ ಬಂತು.” ಇದು ಸರ್ವೇಶ್ವರನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು