ಆದಿಕಾಂಡ 4:14 - ಕನ್ನಡ ಸತ್ಯವೇದವು C.L. Bible (BSI)14 ಈ ನಾಡಿನಿಂದ ನನ್ನನ್ನು ಹೊರದೂಡುತ್ತಿರುವಿರಿ, ತಮ್ಮ ಸಾನ್ನಿಧ್ಯ ನನಗಿನ್ನು ದೊರಕದು; ನೆಲೆ ಇಲ್ಲದ ನಾನು ಲೋಕದಲ್ಲಿ ಅಲೆಮಾರಿಯಾಗಿರಬೇಕು; ಕಂಡಕಂಡವರೆಲ್ಲರು ನನ್ನನ್ನು ಕೊಲ್ಲುವರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಇಗೋ, ನೀನು ಈ ಹೊತ್ತು ನನ್ನನ್ನು ಸ್ವದೇಶದಿಂದ ಓಡಿಸಿ ಬಿಟ್ಟಿದ್ದೀಯಲ್ಲಾ! ನಿನ್ನ ಸಮ್ಮುಖದಿಂದ ಮರೆಯಾಗಿರುವೆನು. ಆದ್ದರಿಂದ ನಾನು ಭೂಮಿಯಲ್ಲಿ ಅಲೆಮಾರಿಯಾಗಿ ದೇಶಭ್ರಷ್ಟನೂ ಆಗಬೇಕಾಯಿತು; ಇದಲ್ಲದೆ ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನೀನು ಈ ಹೊತ್ತು ನನ್ನನ್ನು ಸ್ವದೇಶದಿಂದ ಹೊರಡಿಸುತ್ತೀಯಲ್ಲಾ; ನಿನ್ನ ಸಾನ್ನಿಧ್ಯವು ತಪ್ಪಿತು; ನಾನು ಲೋಕದಲ್ಲಿ ಅಲೆಯುವವನೂ ದೇಶಭ್ರಷ್ಟನೂ ಆಗಬೇಕಾಯಿತು. ಇದಲ್ಲದೆ ನನ್ನನ್ನು ಕಂಡವರು ಕೊಲ್ಲುವರು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನೀನು ನನ್ನನ್ನು ನನ್ನ ದೇಶದಿಂದ ಬಲವಂತವಾಗಿ ಹೊರಡಿಸುತ್ತಿರುವೆ. ನಿನ್ನನ್ನು ನೋಡುವುದಕ್ಕಾಗಲಿ ನಿನ್ನ ಸಮೀಪದಲ್ಲಿ ಇರುವುದಕ್ಕಾಗಲಿ ನನಗೆ ಸಾಧ್ಯವಿರುವುದಿಲ್ಲ! ನನಗೆ ಮನೆಯೂ ಇಲ್ಲ! ನಾನು ಭೂಮಿಯ ಮೇಲೆ ಸ್ಥಳದಿಂದ ಸ್ಥಳಕ್ಕೆ ಬಲವಂತವಾಗಿ ಅಲೆದಾಡಬೇಕಾಗುವುದು. ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಇಗೋ, ನೀವು ಈ ದಿನ ನನ್ನನ್ನು ಸ್ವದೇಶದಿಂದ ಓಡಿಸುತ್ತಿದ್ದೀರಲ್ಲಾ! ನಿಮ್ಮ ಸಮ್ಮುಖದಿಂದ ನಾನು ಮರೆಯಾಗಿರಬೇಕಾಯಿತು. ಭೂಮಿಯಲ್ಲಿ ಅಲೆಮಾರಿಯಾಗಿರಬೇಕು. ಇದಲ್ಲದೆ ನನ್ನನ್ನು ಕಂಡವರು ಕೊಲ್ಲುವರು,” ಎಂದನು. ಅಧ್ಯಾಯವನ್ನು ನೋಡಿ |
ಈಗ ನೋಡಿ, ಬಳಗದವರೆಲ್ಲರು ನಿನ್ನ ದಾಸಿಯಾದ ನನಗೆ ವಿರೋಧವಾಗಿದ್ದಾರೆ; ‘ತಮ್ಮನನ್ನು ಕೊಂದವನೆಲ್ಲಿ? ಅವನನ್ನು ನಮಗೆ ಒಪ್ಪಿಸು; ತಮ್ಮನ ಪ್ರಾಣಕ್ಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥವಿಲ್ಲದ ಹಾಗೆ ಮಾಡಿಬಿಡುತ್ತೇವೆ,’ ಎನ್ನುತ್ತಾರೆ. ಹೀಗೆ ಅವರು ನನಗುಳಿದಿರುವ ಒಂದು ಕೆಂಡವನ್ನೂ ಆರಿಸಿಬಿಟ್ಟು ನನ್ನ ಗಂಡನ ಹೆಸರನ್ನೂ ಸಂತಾನವನ್ನೂ ಭೂಲೋಕದ ಮೇಲಿನಿಂದ ಅಳಿಸಬೇಕೆಂದು ಇದ್ದಾರೆ,” ಎಂದು ಉತ್ತರಕೊಟ್ಟಳು.