Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 4:2 - ಕನ್ನಡ ಸತ್ಯವೇದವು C.L. Bible (BSI)

2 ತರುವಾಯ ಅವನ ತಮ್ಮನಾದ ಹೇಬೆಲನಿಗೆ ಜನ್ಮವಿತ್ತಳು. ಹೇಬೆಲನು ಕುರಿಗಾಹಿಯಾದನು; ಕಾಯಿನನು ವ್ಯವಸಾಯಗಾರನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ತರುವಾಯ ಅವನ ತಮ್ಮನಾದ ಹೇಬೆಲನನ್ನು ಹೆತ್ತಳು. ಹೇಬೆಲನು ಕುರಿಕಾಯುವವನಾದನು. ಕಾಯಿನನು ವ್ಯವಸಾಯಗಾರನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ತರುವಾಯ ಅವನ ತಮ್ಮನಾದ ಹೇಬೆಲನನ್ನು ಹೆತ್ತಳು. ಹೇಬೆಲನು ಕುರಿಕಾಯುವವನಾದನು; ಕಾಯಿನನು ವ್ಯವಸಾಯಮಾಡುವವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಮೇಲೆ, ಹವ್ವಳಿಗೆ ಮತ್ತೊಂದು ಮಗು ಜನಿಸಿತು. ಈ ಮಗುವೇ ಕಾಯಿನನ ತಮ್ಮನಾದ ಹೇಬೆಲ. ಹೇಬೆಲನು ಕುರುಬನಾದನು ಕಾಯಿನನು ರೈತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅನಂತರ ಆಕೆಯು ಅವನ ತಮ್ಮನಾದ ಹೇಬೆಲನನ್ನು ಹೆತ್ತಳು. ಹೇಬೆಲನು ಕುರಿ ಕಾಯುವವನಾದನು ಮತ್ತು ಕಾಯಿನನು ವ್ಯವಸಾಯ ಮಾಡುವವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 4:2
19 ತಿಳಿವುಗಳ ಹೋಲಿಕೆ  

ತನ್ನ ಸಹೋದರರನ್ನು ದ್ವೇಷಿಸುವವನು ಕೊಲೆಗಾರನೇ ಹೌದು. ಯಾವ ಕೊಲೆಗಾರನಲ್ಲೂ ನಿತ್ಯಜೀವ ಇರದೆಂದು ನೀವು ಬಲ್ಲಿರಿ.


ತನ್ನ ಸಹೋದರನನ್ನೇ ಕೊಂದ ಕಾಯಿನನಂತೆ ನಾವು ಇರಬಾರದು. ಅವನು ಕಡುಕೇಡಿಗನ ಕುವರ. ಅವನು ಕೊಂದುದಾದರೂ ಏಕೆ? ತನ್ನ ಕೃತ್ಯಗಳು ದುಷ್ಟವಾಗಿದ್ದು ತನ್ನ ಸಹೋದರನ ಕೃತ್ಯಗಳು ಧರ್ಮಿಷ್ಠವಾಗಿದ್ದುದರಿಂದ ಅಲ್ಲವೇ?


ಸನ್ಮಾರ್ಗದಲ್ಲಿ ನಡೆಯದವನೂ ಸಹೋದರನನ್ನು ಪ್ರೀತಿಸದವನೂ ದೇವರಿಂದ ಜನಿಸಿದವನಲ್ಲ. ಹೀಗೆ ದೇವರ ಮಕ್ಕಳು ಯಾರು ಮತ್ತು ಸೈತಾನನ ಮಕ್ಕಳು ಯಾರು ಎಂಬುದನ್ನು ತಿಳಿಯಬಹುದು.


ಸೈತಾನನೇ ನಿಮಗೆ ತಂದೆ; ಆ ನಿಮ್ಮ ತಂದೆ ಮಾಡಬಯಸುವುದನ್ನು ನೀವು ಮಾಡಬಯಸುತ್ತೀರಿ; ಮೊತ್ತ ಮೊದಲಿನಿಂದಲೂ ಅವನು ಕೊಲೆಪಾತಕ. ಸತ್ಯವೆಂಬುದೇ ಅವನಲ್ಲಿ ಇಲ್ಲದ ಕಾರಣ ಅವನು ಸತ್ಯಪರನಲ್ಲ. ಸುಳ್ಳಾಡುವಾಗ ಅವನು ತನಗೆ ಸಹಜವಾದುದನ್ನೇ ಆಡುತ್ತಾನೆ. ಅವನು ಸುಳ್ಳುಗಾರ. ಸುಳ್ಳಿನ ಮೂಲಪುರುಷನೇ ಅವನು.


ಫರೋಹನು, “ನಿಮ್ಮ ಕಸುಬು ಏನು”, ಎಂದು ಕೇಳಲು ಅವರು, “ನಿಮ್ಮ ಸೇವಕರಾದ ನಾವು ನಮ್ಮ ಪೂರ್ವಜರ ಪದ್ಧತಿಯ ಮೇರೆಗೆ ಕುರಿ ಕಾಯುವವರು;


ಮೋಶೆ ಮಿದ್ಯಾನರ ಪೂಜಾರಿಯೂ ತನ್ನ ಮಾವನೂ ಆದ ಇತ್ರೋನನ ಮಂದೆಯನ್ನು ಮೇಯಿಸುತ್ತಿದ್ದನು. ಒಮ್ಮೆ ಆ ಮಂದೆಯನ್ನು ಕಾಡಿನ ಹಿಂಭಾಗಕ್ಕೆ ನಡೆಸಿಕೊಂಡು ‘ಹೋರೇಬ್’ ಎಂಬ ದೇವರ ಬೆಟ್ಟಕ್ಕೆ ಬಂದನು.


ಮಂದೆ ಕಾಯುವುದರಿಂದ ಸರ್ವೇಶ್ವರ ನನ್ನನ್ನು ಬಿಡಿಸಿದರು. ನೀನು ಹೋಗಿ ನನ್ನ ಜನರಾದ ಇಸ್ರಯೇಲರಿಗೆ ಪ್ರವಾದನೆಮಾಡು’ ಎಂದು ಹೇಳಿಕಳುಹಿಸಿದರು.


ಪ್ರಭುವಿನಿಂದ ಬಂದ ಸೊತ್ತು - ಪುತ್ರಸಂತಾನ I ಕರುಳ ಕುಡಿಯು ಆತ ನೀಡುವ ಬಹುಮಾನ II


ಯಕೋಬನು ಜೋಸೆಫನಿಗೆ, “ನಿನ್ನ ಅಣ್ಣಂದಿರು ಶೆಕೆಮಿನಲ್ಲಿ ಆಡುಕುರಿಗಳನ್ನು ಮೇಯಿಸುತ್ತಿದ್ದಾರೆ, ಅಲ್ಲವೆ? ಅವರ ಬಳಿಗೆ ನಿನ್ನನ್ನು ಕಳಿಸಬೇಕೆಂದಿದ್ದೇನೆ,” ಎನ್ನಲು


ನೋಹನು ವ್ಯವಸಾಯಗಾರ. ದ್ರಾಕ್ಷಿತೋಟ ಮಾಡುವುದನ್ನು ಪ್ರಾರಂಭಿಸಿದವನು ಅವನೇ.


ಅವನು ಉತ್ಪತ್ತಿಯಾದ ಭೂಮಿಯನ್ನೇ ವ್ಯವಸಾಯ ಮಾಡಲೆಂದು ಏದೆನ್ ತೋಟದಿಂದ ಹೊರಡಿಸಿಬಿಟ್ಟರು.


ಲೋಕಾದಿಯಿಂದ ಸುರಿಸಲಾದ ಎಲ್ಲಾ ಪ್ರವಾದಿಗಳ ರಕ್ತಕ್ಕೂ ಅಂದರೆ, ಹೇಬೆಲನ ರಕ್ತ ಮೊದಲ್ಗೊಂಡು, ಬಲಿಪೀಠಕ್ಕೂ ದೇವಾಲಯಕ್ಕೂ ನಡುವೆ ಹತನಾದ ಜಕರೀಯನ ರಕ್ತದವರೆಗೂ ಈ ಪೀಳಿಗೆಯವರು ಲೆಕ್ಕಕೊಡಬೇಕಾಗುವುದು.’ ಹೌದು, ಈ ಪೀಳಿಗೆಯವರೇ ಲೆಕ್ಕಕೊಡಬೇಕಾಗುವುದೆಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ.


ಆದಾಮನು ತನ್ನ ಹೆಂಡತಿಯ ಜೊತೆ ಕೂಡಲು ಆಕೆ ಗರ್ಭಿಣಿಯಾಗಿ ಕಾಯಿನನನ್ನು ಹೆತ್ತಳು. “ಸರ್ವೇಶ್ವರ ಸ್ವಾಮಿಯ ಅನುಗ್ರಹದಿಂದ ಒಂದು ಗಂಡುಮಗುವನ್ನು ಪಡೆದಿದ್ದೇನೆ” ಎಂದಳು.


ಕ್ರಮೇಣ ಕಾಯಿನನು ತಾನು ಬೆಳೆಸಿದ ಫಸಲಲ್ಲಿ ಕೆಲವನ್ನು ತಂದು ಸರ್ವೇಶ್ವರ ಸ್ವಾಮಿಗೆ ಕಾಣಿಕೆಯಾಗಿ ಸಮರ್ಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು