Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 4:22 - ಕನ್ನಡ ಸತ್ಯವೇದವು C.L. Bible (BSI)

22 ಚಿಲ್ಲಾ ಎಂಬುವಳು ತೂಬಲ್ ಕಾಯಿನನಿಗೆ ಜನ್ಮವಿತ್ತಳು. ಇವನು ಕಬ್ಬಿಣ, ಹಿತ್ತಾಳೆ ಆಯುಧಗಳನ್ನು ಮಾಡುವ ಕುಲುಮೆಗಾರರಿಗೆ ಮೂಲಪುರುಷ. ತೂಬಲ್ ಕಾಯಿನನ ತಂಗಿಯ ಹೆಸರು ನಯಮಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಚಿಲ್ಲಾ ಎಂಬುವವಳು ತೂಬಲ್ ಕಾಯಿನನನ್ನು ಹೆತ್ತಳು. ಇವನು ಕಬ್ಬಿಣ ಮತ್ತು ತಾಮ್ರದ ಆಯುಧಗಳನ್ನು ಮಾಡುವ ಕುಲುಮೆಗಾರರಿಗೆ ಮೂಲ ಪುರುಷ. ತೂಬಲ್ ಕಾಯಿನನ ತಂಗಿಯ ಹೆಸರು ನಯಮಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಚಿಲ್ಲಾ ಎಂಬವಳು ತೂಬಲ್‍ಕಾಯಿನನನ್ನು ಹೆತ್ತಳು; ಅವನು ಕುಲಿಮೆ ಮಾಡಿ ಕಬ್ಬಿಣ ತಾಮ್ರದ ಆಯುಧಗಳನ್ನು ಕಲ್ಪಿಸಿದವನು. ತೂಬಲ್‍ಕಾಯಿನನ ತಂಗಿ ನಯಮಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಚಿಲ್ಲಾಳಿಗೆ ತೂಬಲ್‌ಕಾಯಿನ ಎಂಬ ಮಗನು ಹುಟ್ಟಿದನು. ಕಬ್ಬಿಣ ಮತ್ತು ತಾಮ್ರಗಳಿಂದ ಉಪಕರಣ ಮಾಡುತ್ತಿದ್ದವರಿಗೆ ತೂಬಲ್‌ಕಾಯಿನನೇ ಮೂಲಪಿತೃ. ತೂಬಲ್‌ಕಾಯಿನನ ತಂಗಿ ನಯಮಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಚಿಲ್ಲಾ ತೂಬಲ್ ಕಾಯಿನನನ್ನು ಪಡೆದಳು. ಅವನು ಕಂಚು ಮತ್ತು ಕಬ್ಬಿಣದ ಆಯುಧಗಳನ್ನು ಮಾಡುವವನಾಗಿದ್ದನು. ತೂಬಲ್ ಕಾಯಿನನ ತಂಗಿಯ ಹೆಸರು ನಯಮಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 4:22
7 ತಿಳಿವುಗಳ ಹೋಲಿಕೆ  

ಹೀಗಿರಲು, ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ ಇವುಗಳ ಕೆಲಸಮಾಡುವುದರಲ್ಲಿ, ಊದಾ, ಕೆಂಪು, ನೀಲವರ್ಣಗಳ ಬಟ್ಟೆಯನ್ನು ನೇಯುವುದರಲ್ಲಿ ಹಾಗೂ ಚಿತ್ರ ಕೆತ್ತುವುದರಲ್ಲಿ ನಿಪುಣನಾದ ಒಬ್ಬ ವ್ಯಕ್ತಿಯನ್ನು ನನ್ನ ಬಳಿಗೆ ಕಳುಹಿಸು; ನನ್ನ ತಂದೆ ಗೊತ್ತುಮಾಡಿದಂಥ ಮತ್ತು ನನ್ನೊಡನೆ ಜುದೇಯದಲ್ಲೂ, ಜೆರುಸಲೇಮಿನಲ್ಲೂ ಇರುವಂಥ ಕಲಾಕುಶಲರೊಂದಿಗೆ ಅವನು ಕೆಲಸಮಾಡಲಿ.


ನಿನ್ನ ಕೋಟೆಯ ಬಾಗಿಲು ಕಬ್ಬಿಣದವು ಅವುಗಳ ಅಗುಳಿಗಳು ಕಂಚಿನವು ನೀನಿರುವಷ್ಟು ಕಾಲ ನಿನಗಿರುವುದು ಬಲವು.”


ಅಲ್ಲಿ ನೀವು ದುರ್ಭಿಕ್ಷವನ್ನೇ ಕಾಣದೆ, ಸಮೃದ್ಧಿ ಆಗಿ ಉಂಡು, ಯಾವ ಕೊರತೆಯೂ ಇಲ್ಲದೆ ಇರುವಿರಿ. ಆ ನಾಡಿನಲ್ಲಿ ಕಬ್ಬಿಣದ ಕಲ್ಲು ಸಿಕ್ಕುತ್ತದೆ. ಅಲ್ಲಿಯ ಬೆಟ್ಟಗಳಲ್ಲಿ ತಾಮ್ರದ ಗಣಿಗಳಿವೆ.


ಬೆಂಕಿಯನ್ನು ತಡೆಯುವ ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ, ತವರ, ಸೀಸ ಮೊದಲಾದುವುಗಳನ್ನು ಬೆಂಕಿದಾಟಿಸಿ ಶುದ್ಧಿಮಾಡಬೇಕು.


ನೀನು ಅವರಿಂದ ಸ್ವೀಕರಿಸತಕ್ಕ ಕಾಣಿಕೆಗಳು ಇವು: ಚಿನ್ನ, ಬೆಳ್ಳಿ, ತಾಮ್ರ,


ಇವನ ತಮ್ಮನ ಹೆಸರು ಯೂಬಾಲ, ಇವನು ಕಿನ್ನರಿ ಕೊಳಲುಗಳನ್ನು ನುಡಿಸುವವರಿಗೆ ಮೂಲಪುರುಷ.


ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು: ಆದಾ, ಚಿಲ್ಲಾ, ಕೇಳಿ ನಾನು ಹೇಳುವುದನ್ನು ಲೆಮೆಕನ ಸತಿಯರೇ, ಆಲಿಸಿ ನನ್ನ ಮಾತನ್ನು ನಾ ಹತಮಾಡಿದೆ ನನಗೆ ಗಾಯ ಮಾಡಿದವನನ್ನು ನಾ ಕೊಂದೆ ನನ್ನನ್ನು ಹೊಡೆದಾ ಪ್ರಾಯದವನನ್ನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು