Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 4:5 - ಕನ್ನಡ ಸತ್ಯವೇದವು C.L. Bible (BSI)

5 ಸರ್ವೇಶ್ವರ ಹೇಬೆಲನನ್ನೂ ಅವನ ಕಾಣಿಕೆಯನ್ನೂ ಮೆಚ್ಚಿಕೊಂಡರು; ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಮೆಚ್ಚಲಿಲ್ಲ. ಇದರಿಂದ ಕಾಯಿನನು ಕಡುಗೋಪಗೊಂಡನು; ಅವನ ಮುಖ ಸಿಂಡರಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಮೆಚ್ಚಲಿಲ್ಲ. ಆದ್ದರಿಂದ ಕಾಯಿನನು ಬಹು ಕೋಪಗೊಂಡನು, ಅವನ ಮುಖವು ಸಿಟ್ಟಿನಿಂದ ಕಳೆಗುಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನು ಹೇಬೆಲನನ್ನೂ ಅವನ ಕಾಣಿಕೆಯನ್ನೂ ಮೆಚ್ಚಿ ಕಾಯಿನನನ್ನೂ ಅವನ ಕಾಣಿಕೆಯನ್ನೂ ಮೆಚ್ಚಲಿಲ್ಲ. ಇದರಿಂದ ಕಾಯಿನನು ಬಹು ಕೋಪಗೊಂಡನು; ಅವನ ಮುಖವು ಕಳೆಗುಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ಕಾಯಿನನ ಕಾಣಿಕೆಯನ್ನು ಸ್ವೀಕರಿಸಲಿಲ್ಲ. ಇದರಿಂದ ಕಾಯಿನನು ದುಃಖಿತನಾದನು ಮತ್ತು ಬಹಳ ಕೋಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ದೇವರು ಮೆಚ್ಚಲಿಲ್ಲ. ಆದ್ದರಿಂದ ಕಾಯಿನನು ಬಹು ಕೋಪಗೊಂಡನು. ಅವನ ಮುಖವು ಬಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 4:5
18 ತಿಳಿವುಗಳ ಹೋಲಿಕೆ  

ವಿಶ್ವಾಸವಿದ್ದುದರಿಂದಲೇ ಹೇಬೆಲನು ಕಾಯಿನನಿಗಿಂತ ಉತ್ತಮವಾದ ಬಲಿಯನ್ನು ದೇವರಿಗೆ ಸಮರ್ಪಿಸಿದನು. ವಿಶ್ವಾಸದಿಂದಲೇ ತಾನು ಸತ್ಪುರುಷನೆಂದು ಸನ್ಮಾನಿತನಾದನು. ಅವನ ಕಾಣಿಕೆ ತಮಗೆ ಸ್ವೀಕೃತವಾಯಿತೆಂದು ದೇವರೇ ಸಾದರಪಡಿಸಿದರು. ಅವನು ಮೃತನಾಗಿದ್ದರೂ ಅವನ ವಿಶ್ವಾಸದ ಮೂಲಕ ಇಂದಿಗೂ ಮಾತನಾಡುತ್ತಿದ್ದಾನೆ.


ಮೂರ್ಖನಿಗೆ ನಾಶ ಕೋಪದಿಂದ ಮೂಢನಿಗೆ ಮರಣ ರೋಷದಿಂದ.


ಜನರು ತಂಡೋಪತಂಡವಾಗಿ ಬರುತ್ತಿರುವುದನ್ನು ಕಂಡು ಯೆಹೂದ್ಯರು ಮತ್ಸರಭರಿತರಾದರು. ಅವರು ಪೌಲನ ಮಾತುಮಾತಿಗೂ ವಿರೋಧವಾಗಿ ವಾದಿಸಿ ದೂಷಣೆಮಾಡತೊಡಗಿದರು.


ನೆನಸಿಕೊಳ್ಳಲಾತ ನೀನರ್ಪಿಸಿದ ಕಾಣಿಕೆಗಳನು I ಒಲಿದು ಸ್ವೀಕರಿಸಲಿ, ನೀನಿತ್ತಾ ಯಜ್ಞಬಲಿಗಳನು II


ನನ್ನದನ್ನು ನನ್ನಿಷ್ಟಾನುಸಾರ ಕೊಡುವ ಹಕ್ಕು ನನಗಿಲ್ಲವೆ? ನನ್ನ ಔದಾರ್ಯವನ್ನು ಕಂಡು ನಿನಗೇಕೆ ಹೊಟ್ಟೆಯುರಿ?’ ಎಂದ.


ಅದಕ್ಕೆ ಮೋಶೆ ಬಹುಕೋಪಗೊಂಡನು. ಸರ್ವೇಶ್ವರನಿಗೆ, “ತಾವು ಇವರ ನೈವೇದ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಬೇಡಿ. ನಾನು ಇವರಿಂದ ಒಂದು ಕತ್ತೆಯನ್ನೂ ಕೂಡ ತೆಗೆದುಕೊಂಡವನಲ್ಲ. ಅವರಲ್ಲಿ ಒಬ್ಬನಿಗಾದರೂ ಹಾನಿಮಾಡಿದವನಲ್ಲ,” ಎಂದು ಮನವಿಮಾಡಿದನು.


ಅಲ್ಲಿ ಅವರಿಗೆ, “ನನ್ನ ವಿಷಯದಲ್ಲಿ ನಿಮ್ಮ ತಂದೆಯ ಮನೋಭಾವ ಮೊದಲಿದ್ದಂತೆ ಇಲ್ಲವೆಂದು ಕಂಡುಬಂದಿದೆ. ಆದರೂ ನನ್ನ ತಂದೆಯ ದೇವರು ನನ್ನೊಂದಿಗೆ ಇದ್ದಾರೆ.


ಇದಲ್ಲದೆ, ಯಕೋಬನ ಕಣ್ಣಿಗೆ ಲಾಬಾನನ ಮನೋಭಾವವು ಮೊದಲಿದ್ದಂತೆ ತೋರಲಿಲ್ಲ.


ಇವರ ದುರ್ಗತಿ ಭಯಂಕರವಾದುದು! ಇವರು ಕಾಯಿನನ ಮಾರ್ಗವನ್ನು ಹಿಡಿದಿದ್ದಾರೆ; ಲಾಭಕೋರರಾಗಿ ಬಿಳಾಮನ ಭ್ರಾಂತಿಯಲ್ಲಿ ಬೀಳಹೋಗುತ್ತಾರೆ; ಕೋರಹನಂತೆ ದಂಗೆ ಎದ್ದು ವಿನಾಶವಾಗುತ್ತಿದ್ದಾರೆ.


ಆದರೆ ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನೀನು ಅವನ ಚೆಲುವಿಕೆಯನ್ನಾಗಲಿ ಎತ್ತರವನ್ನಾಗಲಿ ನೋಡಬೇಡ; ನಾನು ಅವನನ್ನು ತಳ್ಳಿಬಿಟ್ಟಿದ್ದೇನೆ. ಸರ್ವೇಶ್ವರ ಮನುಷ್ಯರಂತೆ ಬಹಿರಂಗದ ತೋರಿಕೆಯನ್ನು ನೋಡುವುದಿಲ್ಲ; ಅಂತರಂಗವನ್ನೇ ವೀಕ್ಷಿಸುತ್ತಾನೆ,” ಎಂದರು.


ಕೊಲೆಪಾತಕರು ನೀತಿವಂತನನ್ನು ದ್ವೇಷಿಸುವರು; ಅಂಥವನ ಪ್ರಾಣಕ್ಕೂ ಹೊಂಚುಹಾಕುವರು.


ಅವರ ಮುಖಲಕ್ಷಣವೇ ಅವರ ವಿರುದ್ಧ ಸಾಕ್ಷಿಯಾಗಿದೆ. ಅವರು ಸೊದೋಮಿನವರಂತೆ ತಮ್ಮ ಪಾಪಗಳನ್ನು ಮುಚ್ಚುಮರೆಯಿಲ್ಲದೆ ಮೆರೆಯಿಸುತ್ತಾರೆ. ಅಯ್ಯೋ, ಅವರಿಗೆ ಕೇಡು! ತಮಗೆ ತಾವೇ ಕೇಡನ್ನು ಬರಮಾಡಿಕೊಂಡಿದ್ದಾರೆ.


“ನಿಮ್ಮ ಸೇವಕ ನನಗೆ ಹೀಗೆ ಮಾಡಿದ,” ಎಂಬ ಆಕೆಯ ಮಾತನ್ನು ಕೇಳಿ ಜೋಸೆಫನ ದಣಿ ಕಿಡಿಕಿಡಿಯಾದ.


ದೇವರಿಗೆ ವಿರುದ್ಧ ಕುದಿಯುತ್ತಿರುವೆ ಏಕೆ? ಬಾಯಿಂದ ಮಾತು ಹರಿಯುತ್ತಿವೆ ಏಕೆ?


ಮನುಷ್ಯನ ಬಾಳಿನ ಅಳಿವು ತನ್ನ ಮೂರ್ಖತನದಿಂದ; ಆದರೂ ಅವನು ಸಿಡಿದೇಳುವುದು ಸರ್ವೇಶ್ವರನ ವಿರುದ್ಧ.


ಮಾನವನು ಪಡುವ ಸಮಸ್ತ ಪರಿಶ್ರಮವನ್ನು ಹಾಗೂ ಸಾಧಿಸುವ ಸಕಲ ಕಾರ್ಯಗಳನ್ನು ಅವಲೋಕಿಸಿದೆ. ಇವಕ್ಕೆಲ್ಲ ಪರರ ಬಗ್ಗೆ ಅವನಿಗಿರುವ ಮತ್ಸರವೇ ಕಾರಣವೆಂದು ತೋರಿಬಂತು. ಇದೂ ಕೂಡ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು