Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 4:6 - ಕನ್ನಡ ಸತ್ಯವೇದವು C.L. Bible (BSI)

6 ಆಗ ಸರ್ವೇಶ್ವರ ಕಾಯಿನನಿಗೆ, “ಕೋಪವೇಕೆ? ಮುಖ ಸಿಂಡರಿಸಿದೆ ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಯೆಹೋವನು ಕಾಯಿನನಿಗೆ, “ನೀನು ಕೋಪಗೊಂಡಿದ್ದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಗ ಯೆಹೋವನು ಅವನಿಗೆ - ಯಾಕೆ ಕೋಪಿಸಿಕೊಂಡಿ? ನಿನ್ನ ತಲೆ ಯಾಕೆ ಬೊಗ್ಗಿತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೋವನು ಕಾಯಿನನಿಗೆ, “ಏಕೆ ಕೋಪಗೊಂಡಿರುವೆ? ನಿನ್ನ ಮುಖ ವ್ಯಸನದಿಂದಿರುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಯೆಹೋವ ದೇವರು ಕಾಯಿನನಿಗೆ, “ನೀನು ಕೋಪಗೊಂಡಿದ್ದೇಕೆ? ಏಕೆ ನಿನ್ನ ಮುಖವು ಬಾಡಿದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 4:6
13 ತಿಳಿವುಗಳ ಹೋಲಿಕೆ  

ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಬನ್ನಿರಿ, ಈಗ ವಾದಿಸೋಣ. ನಿಮ್ಮ ಪಾಪಗಳು ಕಡುಗೆಂಪಾಗಿದ್ದರೂ ಹಿಮದಂತೆ ಬಿಳುಪಾಗುವುವು. ರಕ್ತಗೆಂಪಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವುವು.


ಮೂರ್ಖನಿಗೆ ನಾಶ ಕೋಪದಿಂದ ಮೂಢನಿಗೆ ಮರಣ ರೋಷದಿಂದ.


ನನ್ನದನ್ನು ನನ್ನಿಷ್ಟಾನುಸಾರ ಕೊಡುವ ಹಕ್ಕು ನನಗಿಲ್ಲವೆ? ನನ್ನ ಔದಾರ್ಯವನ್ನು ಕಂಡು ನಿನಗೇಕೆ ಹೊಟ್ಟೆಯುರಿ?’ ಎಂದ.


ಇಸ್ರಯೇಲ್ ಜನರೇ, ದುಷ್ಟಸಂತತಿಯವರೇ, ಸರ್ವೇಶ್ವರನಾದ ನಾನು ಹೇಳುವುದನ್ನು ಕೇಳಿರಿ : ನಾನು ನಿಮಗೆ ಬೆಂಗಾಡಾಗಿಯೂ ಗಾಢಾಂಧಕಾರವಾಗಿಯೂ ಪರಿಣಮಿಸಿದ್ದೇನೊ? ‘ನಾವು ಮನಬಂದಂತೆ ನಡೆದುಕೊಳ್ಳುತ್ತೇವೆ; ನಿನ್ನ ಬಳಿಗೆ ಇನ್ನು ಬಾರೆವು’ ಎಂದು ನನ್ನ ಜನರಾದ ನೀವು ಹೇಳುವುದು ಹೇಗೆ?


“ನಿಮ್ಮ ಪಿತೃಗಳು ನನ್ನಲ್ಲಿ ಯಾವ ಕೊರತೆಯನ್ನು ಕಂಡು ನನ್ನಿಂದ ದೂರವಾದರು? ಅವರು ವ್ಯರ್ಥಾಚಾರಗಳನ್ನು ಅನುಸರಿಸುತ್ತಾ ತಾವೇ ವ್ಯರ್ಥವಾಗಿಬಿಟ್ಟರು !


ಅದಕ್ಕೆ ಸರ್ವೇಶ್ವರ, “ನೀನು ಹೀಗೆ ಸಿಟ್ಟುಗೊಳ್ಳುವುದು ಸರಿಯೇ?” ಎಂದರು.


ನೀನು ಒಳಿತನ್ನು ಮಾಡಿದ್ದರೆ ತಲೆ ಎತ್ತುತ್ತಿದ್ದೆ; ಕೆಡುಕನ್ನು ಮಾಡಿದ್ದರಿಂದ ಪಾಪವು ಹೊಸ್ತಿಲಲ್ಲಿ ಹೊಂಚುಹಾಕುತ್ತಿದೆ; ಅದು ನಿನ್ನನ್ನು ಬಯಸುತ್ತಿದೆ. ನೀನು ಅದನ್ನು ಜಯಿಸಬೇಕು,” ಎಂದರು.


ಅದಕ್ಕೆ ದೇವರು: “ನೀನು ಸೋರೆಗಿಡದ ವಿಷಯದಲ್ಲಿ ಸಿಟ್ಟುಗೊಳ್ಳುವುದು ಸರಿಯೇ?” ಎಂದು ಕೇಳಲು, ಯೋನನು, “ಹೌದು, ಸಾವನ್ನು ಬಯಸುವಷ್ಟು ಸಿಟ್ಟುಗೊಳ್ಳುವುದು ಸರಿಯಲ್ಲವೇ?’ ಎಂದು ಉತ್ತರವಿತ್ತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು